ರಾಯಚೂರು | ಮನುಷ್ಯತ್ವ ಇಲ್ಲದವರಿಂದ ಕಾರ್ಮಿಕರ ಮೇಲೆ ಹಲ್ಲೆ: ಸಚಿವ ಸಂತೋಷ್ ಲಾಡ್

Date:

ವಿಜಯಪುರದಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಅಮಾನವೀಯವಾಗಿದ್ದು, ಮನುಷ್ಯತ್ವ ಇದ್ದವರು ಯಾರೂ ಹೀಗೆ ಮಾಡುವುದಿಲ್ಲ. ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಕಾರ್ಮಿಕ ಸಚಿವ ಸಂತೊಷ್ ಲಾಡ್ ತಿಳಿಸಿದರು.

ರಾಯಚೂರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

“ನಾಗರಿಕ ಸಮಾಜದಲ್ಲಿ ಬದುಕುವವರೆಲ್ಲರೂ ನಾವು ಇಂಥ ಘಟನೆ ನೋಡಿ ಬೆಚ್ಚಿ ಬೀಳುವಂತಾಗಿದೆ. ಮಾಲೀಕರಿಗೆ ಕಾರ್ಮಿಕರ ಬಗ್ಗೆ ಕಾಳಜಿ ಇರಬೇಕು. ಮನುಷ್ಯತ್ವ ಇಲ್ಲದವರೇ ಇಂತಹ ಕೃತ್ಯ ಎಸಗುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲಿ ಕಾಯ್ದೆ, ಕಾನೂನುಗಳಿದ್ದರೂ ಅಪರಾಧ ಚಟುವಟಿಕೆಗಳು ಕಡಿಮೆಯಾಗುತ್ತಿಲ್ಲವೆಂದರೆ ಜನರಿಗೆ ಕಾನೂನುಗಳ ಬಗ್ಗೆ ಅರಿವಿಲ್ಲ ಎಂದರ್ಥವಲ್ಲ. ಕಾನೂನುಗಳನ್ನು ಬಿಗಿಗೊಳಿಸಿದರೆ ಅಪರಾಧ ಚಟುವಟಿಕೆಗಳು ನಿಯಂತ್ರಣಕ್ಕೆ ಬರುತ್ತವೆ ಎನ್ನುವುದು ತಪ್ಪು, ಜನರಿಗೆ ಮಾನವೀಯತೆ ಇರಬೇಕು. ಜನರ ಮನಸ್ಥಿತಿ ಬದಲಾದರೆ ಇಂತಹ ಕೃತ್ಯ ನಿಯಂತ್ರಣ ಸಾಧ್ಯ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾರ್ಮಿಕರ ಬಗ್ಗೆ ಮಾಹಿತಿಯಿಲ್ಲದೆ ಸಭೆಗೆ ಬಿಸ್ಕೆಟ್‌ ತಿನ್ನಲು ಬರುತ್ತೀರಾ: ಸಂತೋಷ್ ಲಾಡ್ ತರಾಟೆ

“ಪ್ರಧಾನಿ ಮೋದಿಯವರ 11 ವರ್ಷಗಳ ಹಿಂದಿನ ಭಾಷಣ ಕೇಳಿದರೆ ಜನರಿಗೆ ನಿಜ ತಿಳಿಯುತ್ತದೆ. ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ, ಖೇಲೋ ಇಂಡಿಯಾ ಯೋಜನೆಯಗಳ ಪ್ರಗತಿ ಏನಾಗಿದೆ? ಮಾಧ್ಯಮಗಳು ಬಿಜೆಪಿ ನಾಯಕರಿಗೆ ಇದರ ಬಗ್ಗೆ ಪ್ರಶ್ನೆ ಕೇಳಬೇಕು” ಎಂದು ಹೇಳಿದರು.

ʼಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದ ಬಳಿಕ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆʼ ಎಂಬ‌ ಆರ್‌ಎಸ್‌ಎಸ್‌ ನಾಯಕ ಮೋಹನ್ ಭಾಗವತ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಇದು ಅವರ ಮನಸ್ಥಿತಿ ತೋರಿಸುತ್ತದೆ, ಭಾಗವತ್ ಅವರು ಕೇವಲ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾತ್ರವಲ್ಲದೆ ದೇಶದ ಇಡೀ ನಾಗರಿಕರಿಗೆ ಅವಮಾನ ಮಾಡಿದ್ದಾರೆ” ಎಂದು ಕಿಡಿಕಾರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...