ರಾಯಚೂರು | ವಿದ್ಯುತ್ ಶಾಖೋತ್ಪನ್ನ ಘಟಕಗಳ ಕಾರ್ಮಿಕರಿಗೆ ಸರಿಯಾದ ವೇತನ ನೀಡದೆ ವಂಚನೆ: ಆರೋಪ

Date:

ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ಶಾಖೋತ್ಪನ್ನ ಘಟಕಗಳಲ್ಲಿ ಕಾರ್ಮಿಕ ಕಾಯ್ದೆಗಳನ್ನೇ ಗಾಳಿಗೆ ತೂರಿ ಕಾರ್ಮಿಕರನ್ನು ದುಡಿಸಿಕೊಳ್ಳಲಾಗುತ್ತಿದೆ. ಕಾರ್ಮಿಕರಿಗೆ ಶ್ವಾಸಕೋಶ ಸಮಸ್ಯೆ ಸೇರಿದಂತೆ ಅನೇಕ ಅನಾರೋಗ್ಯದಿಂದ ಬಳಲುತ್ತಿರುವ ಕಾರ್ಮಿಕರಿಗೆ ಆಡಳಿತ ಮಂಡಳಿ ಕನಿಷ್ಠ ವೇತನದಿಂದ ವಂಚಿಸಲಾಗುತ್ತಿದೆ ಎಂದು ಹಿಂದ್ ಮಜ್ದೂರು ಕಿಸಾನ್ ಪಂಚಾಯತನ ರಾ‍‍‍‍ಷ್ಟ್ರೀಯ ಅಧ್ಯಕ್ಷ ಎಲ್ ಕಾಳಪ್ಪ ಹೇಳಿದರು.

ರಾಯಚೂರು ನಗರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆರ್ ಟಿ ಪಿ ಎಸ್ ಶಾಖೋತ್ಪನ್ನ ಘಟಕಗಳಲ್ಲಿ ನಿಷೇಧಿತ ಗುತ್ತಿಗೆ ಪದ್ದತಿಯನ್ನು ಹೊರಗುತ್ತಿಗೆ ಏಜೆನ್ಸಿಗಳಿಂದ ಖಾಯಂ ಸ್ವರೂಪದ ಕೆಲಸವನ್ನು ಪಡೆಯಲಾಗುತ್ತಿದೆ. ಗುತ್ತಿಗೆ ಏಜೆನ್ಸಿಗಳಿಗೆ ನೀಡುವ ಕೋಟಿ ಕೋಟಿ ಹಣವನು ದುಡಿಯುವ ಕಾರ್ಮಿಕರಿಗೆ ನೀಡದೇ ಶೋಷಣೆ ಮುಂದುವರೆಸಿದೆ ಎಂದರು.

ಸರಿಸುಮಾರು 1200ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರು ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಯಾರಿಗೂ ಸಮರ್ಪಕ ವೇತನ ಸೇರಿ ಯಾವ ಸೌಕರ್ಯಗಳು ಇಲ್ಲ. 250ಕ್ಕೂ ಹೆಚ್ಚು ಜನರು ಇರುವ ಕಂಪನಿಗಳಲ್ಲಿ ಕನಿಷ್ಠ ವೇತನ, ಕ್ಯಾಂಟೀನ್, ರಜೆ, ವಿಶೇಷ ಭತ್ಯೆ ನೀಡಬೇಕಿದ್ದು, ಯಾವುದು ಕೂಡ ಪಾಲನೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ಪಾದಿತ ವಿದ್ಯುತ್ ಮಾರಾಟದಿಂದ ಬರುವ ಹಣವೂ ಕ್ರೋಢೀಕರಿಸಲಾಗುತ್ತಿಲ್ಲ. ಕೆಪಿಟಿಸಿಎಲ್‌ಗೆ ನೀಡುವ ವಿದ್ಯುತ್ ಮಾರಾಟದಿಂದ ಹಣವೇ ಬಾರದೇ ಹೋಗಿದೆ. ಶಾಖೋತ್ಪನ್ನ ಮತ್ತು ಜಲಾಧಾರಿತ ಘಟಕಗಳನ್ನು ಉದ್ದೇಶಿತ ಪೂರಿತವಾಗಿ ಸ್ಥಗಿತಗೊಳಿಸಿ ಬೇರೆಯಡೆಯಿಂದ ವಿದ್ಯುತ್ ಖರೀದಿಸುವ ಕೆಲಸ ಸರ್ಕಾರಗಳು ಮಾಡುತ್ತಿವೆ. ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ರಾಜ್ಯ ಕಾರ್ಮಿಕ ಸಚಿವರಿಗೆ ಮನವಿ ಮಾಡಲಾಗುತ್ತದೆ. ಯಾವುದೇ ಸ್ಪಂದನೆ ದೊರೆಯದೇ ಹೋದಲ್ಲಿ ಕಾರ್ಮಿಕರ ಹೋರಾಟದೊಂದಿಗೆ ಕಾನೂನಾತ್ಮಕ ಹೋರಾಟಕ್ಕೂ ಸಂಘಟನೆ ಮುಂದಾಗಲಿದೆ ಎಂದು ಎಚ್ಚರಿಸಿದರು.

ಇದನ್ನು ಓದಿದ್ದೀರಾ? ಗದಗ | 2019ರ ಬಳಿಕ ಜಿಲ್ಲೆಯ ಆಸ್ತಿಗಳಲ್ಲಿ ವಕ್ಫ್‌ ಎಂದು ನಮೂದಿಸಿಲ್ಲ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸ್ಪಷ್ಟನೆ

ಮತ್ತೊಬ್ಬ ಕಾರ್ಮಿಕ ಮುಖಂಡ ಜೆ.ಎಲ್.ರೆಡ್ಡಿ ಮಾತನಾಡಿ, 1200ಕ್ಕೂ ಹೆಚ್ಚು ಗುತ್ತಿಗೆ ನೌಕರರು ವಿದ್ಯುತ್ ಘಟಕಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಊಟ ಮಾಡಲು ಸರಿಯಾದ ಸ್ಥಳವಿಲ್ಲ. ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ. ಕ್ಯಾಂಟೀನ್ ಪ್ರಾರಂಭಿಸಲು ವೈಟಿಪಿಎಸ್ ಆಡಳಿತ ಮಂಡಳಿ ಮುಂದಾಗುತ್ತಿಲ್ಲ. ಪವರ್‌ಮ್ಯಾಕ್ ಕಂಪನಿ ಲಾಭಕ್ಕಾಗಿ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ಕಾರ್ಮಿಕರಿಗೆ ಸೌಲಭ್ಯ, ಸೌಕರ್ಯ ಒದಗಿಸಲು ಮುಂದಾಗುತ್ತಿದೆ. ಸರ್ಕಾರವೂ ಮೌನವಾಗಿದೆ. ಗುತ್ತಿಗೆ ಕಾರ್ಮಿಕರ ಸಮಸ್ಯೆಗೆ ಸ್ಪಂದಿಸದೇ ಹೋದಲ್ಲಿ ತೀವ್ರ ಸ್ವರೂಪದ ಹೋರಾಟ ಅನಿವಾರ್ಯವಾಗುತ್ತದೆ ಎಂದರು.

ಈ ಸಂದರ್ಬದಲ್ಲಿ ಮಲ್ಲಪ್ಪ ಧಣಿ, ನಾರಾಯಣಸ್ವಾಮಿ, ಶಿವಾನಂದ ಸೇರಿ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...