ರಾಯಚೂರು | ಪ್ರಜಾಸಾಕ್ಷಿ ದಿನಪತ್ರಿಕೆ ಸಂಪಾದಕ ನಿಧನ; ಕಾರ್ಯನಿರತ ಪತ್ರಕರ್ತರ ಸಂಘದಿಂದ ಶದ್ಧಾಂಜಲಿ

Date:

ಪ್ರಜಾಸಾಕ್ಷಿ ದಿನಪತ್ರಿಕೆ ಸಂಪಾದಕ ರಮೇಶ ಗೋರೆಬಾಳ ಅವರು ಭಾನುವಾರ ಹೃದಯಘಾತದಿಂದ ನಿಧನರಾಗಿದ್ದು, ರಾಯಚೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಗರದ ಪತ್ರಿಕಾ ಭವನದಲ್ಲಿ ಶ್ರದ್ದಾಂಜಲಿ ಸಭೆ ನಡೆಸಿ, ರಮೇಶ ಗೋರೆಬಾಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಿ ಮೌನಾಚರಿಸಿ ಸಂತಾಪ ಸೂಚಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್ ಗುರುನಾಥ ಮಾತನಾಡಿ, “ಕಳೆದ 20 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ರಮೇಶ ಗೋರೆಬಾಳ ಅವರ ನಿಧನದಿಂದ ಪತ್ರಿಕಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ” ಎಂದರು.

“ಪತ್ರಿಕೆ ಏಜೆಂಟರಾಗಿ ಕೆಲಸ ಮಾಡುವುದರ ಜತೆಗೆ ಜಿಲ್ಲಾ ಮಟ್ಟದ ಪತ್ರಿಕೆಯೊಂದನ್ನು ಹುಟ್ಟುಹಾಕಿ ಮುನ್ನಡೆಸುತ್ತಿದ್ದ ರಮೇಶ ಗೋರೆಬಾಳ ಅತಿ ಚಿಕ್ಕ ವಯಸ್ಸಿನಲ್ಲಿ ನಿಧನರಾಗಿರುವುದು ದುಖಃದ ಸಂಗತಿ. ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರು ತಮ್ಮ ಆರೋಗ್ಯದ ಕಡೆ ಗಮನ ಹರಿಸಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ ಮಾತನಾಡಿ, “ಏಜೆಂಟರಾಗಿ ಕೆಲಸ ಮಾಡುವುದರ ಜತೆಗೆ ಜಿಲ್ಲಾ ಮಟ್ಟದ ಪತ್ರಿಕೆಯನ್ನು ಮುನ್ನಡೆಸಿದರು. ಸಂಕಷ್ಟದಲ್ಲಿ ಪತ್ರಿಕೆಯನ್ನು ಆರಂಭ ಮಾಡಿ ಯಶಸ್ಸು ಕಂಡಿದ್ದರು. ಪತ್ರಕರ್ತರು ಒತ್ತಡಗಳಿಗೆ ಒಳಗಾಗದೇ ಆರೋಗ್ಯಕ್ಕೆ ಒತ್ತು ನೀಡಬೇಕಿದೆ” ಎಂದರು.

ಪತ್ರಕರ್ತರಾದ ಸಿದ್ದು ಬಿರಾದರ್, ಲಕ್ಷ್ಮಣರಾಯ್ ಕಪಗಲ್, ಆನಂದಸ್ವಾಮಿ, ಜಯಕುಮಾರ ದೇಸಾಯಿ, ಅಂಬಣ್ಣ ಅರೋಲಿ ಸೇರಿದಂತೆ ಅನೇಕ ಪತ್ರಕರ್ತರು ಮಾತನಾಡಿ ಸಂತಾಪ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ರಾಜ್ಯ ಹೆದ್ದಾರಿಯಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆಗ್ರಹ

ಸಭೆಯಲ್ಲಿ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ ಪಾಷಾ ಹಟ್ಟಿ, ಜಿಲ್ಲಾ ಉಪಾಧ್ಯಕ್ಷ ಶಿವಪ್ಪ ಮಡಿವಾಳರ್, ಹಿರಿಯ ಪತ್ರಕರ್ತರಾದ ದತ್ತು ಸರ್ಕಿಲ್, ಬಸವರಾಜ ನಾಗಡದಿನ್ನಿ, ಧೀರೆಂದ್ರ ಕುಲಕರ್ಣಿ, ಸಿದ್ದಯ್ಯಸ್ವಾಮಿ, ಮಲ್ಲಿಕಾರ್ಜುನಸ್ವಾಮಿ, ಭೀಮಸೇನ ಕಲ್ಲೂರು, ವಿಜಯ ಜಾಗಟಗಲ್, ಜಗನ್ನಾಥ ಪೂಜಾರಿ, ಚಂದ್ರಕಾಂತ ಮಸಾನಿ, ವೆಂಕಟೇಶ ಹೂಗಾರ, ರಾಮಕೃಷ್ಣ ದಾಸರಿ, ಭೀಮೇಶ ಪೂಜಾರಿ, ರಾಚಯ್ಯಸ್ವಾಮಿ, ನೀಲಕಂಠಸ್ವಾಮಿ, ಪ್ರಸನ್ನಕುಮಾರ ಜೈನ್, ಶ್ಯಾಮಸುಂದರ್ ಲಂಗೋಟಿ, ಭಾವಸಲಿ, ಅಬ್ದುಲ್ ಖಾದರ್, ದುರುಗೇಶ, ಎ ಎಲ್ ತಾಯಪ್ಪ, ಶಿವಕುಮಾರ, ಹನುಮಂತು ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...