ರಾಯಚೂರು | ಯಲಗಟ್ಟ ಮತ್ತು ಪಲಕನಮರಡಿ ಗ್ರಾಮಗಳ ಅಭಿವೃದ್ಧಿಗೆ ಕೆಪಿಆರ್ ಎಸ್ ಆಗ್ರಹ

Date:

ಯಲಗಟ್ಟ, ಪಲಕನಮರಡಿ ಗ್ರಾಮಗಳಲ್ಲಿ ಶೈಕ್ಷಣಿಕ ಹಾಗೂ ಮೂಲಭೂತ ಸೌಲಭ್ಯಗಳನ್ನು ಸಿ.ಎಸ್.ಆರ್. ಅನುದಾನದಡಿ ಒದಗಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದಗಣಿ ರೋಡಲಬಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲಗಟ್ಟ ಗ್ರಾಮದಲ್ಲಿ ಊಟಿ ಚಿನ್ನದಗಣಿಯಿಂದ ಹಟ್ಟಿ ಚಿನ್ನದಗಣಿಗೆ ಕಚ್ಚಾ ಅಧಿರು ಸಾಗಾಟ ಮಾಡುವ ಲಾರಿಗಳ ಸಂಚಾರದಿಂದ ರಸ್ತೆಗಳು ಹದಗೆಟ್ಟು ಸಂಚಾರಕ್ಕೆ ತೊಂದರೆ ಉಂಟಾಗಿದೆ. ಸ್ಥಳೀಯರು ತಕ್ಷಣವೇ ರಸ್ತೆಗಳನ್ನು ದುರಸ್ತಿ ಮಾಡುವಂತೆ ಒತ್ತಾಯಿಸಿದರು.

ಅರಕೇರಾ ತಾಲ್ಲೂಕಿನ ಊಟಿ ಚಿನ್ನದಗಣಿ ವ್ಯಾಪ್ತಿಯ ಪಲಕನಮರಡಿ ಗ್ರಾಮದಲ್ಲಿ ಶೈಕ್ಷಣಿಕ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಉಂಟಾಗಿರುವುದರಿಂದ, ಸಿ.ಎಸ್.ಆರ್. ಅನುದಾನದಡಿ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಕಾಮಗಾರಿಗಳನ್ನು ಜಾರಿಗೊಳಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ಆಗ್ರಹಿಸಿದರು.

ಸರಕಾರಿ ಪ್ರೌಢಶಾಲೆ (ಆರ್.ಎಮ್.ಎಸ್.ಎ) ಕಳೆದ ಐದು ವರ್ಷಗಳಿಂದ ಅಸ್ತಿತ್ವದಲ್ಲಿದ್ದು, ಪ್ರಸ್ತುತ 526 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಆದರೆ, ಕಟ್ಟಡವಿಲ್ಲದ ಕಾರಣ ಪ್ರಾಥಮಿಕ ಶಾಲಾ ಪ್ರಾಂಗಣದಲ್ಲಿ ತರಗತಿಗಳು ನಡೆಯುತ್ತಿವೆ. ಮಳೆಗಾಲದಲ್ಲಿ ಮಕ್ಕಳಿಗೆ ಸವಾಲು ಎದುರಾಗುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೊಸ ಶಾಲಾ ಕಟ್ಟಡವನ್ನು ಹಾಗೂ ಸರಕಾರಿ ಪ್ರಾಥಮಿಕ ಶಾಲೆಗೆ ಸರಿಯಾದ ರಸ್ತೆ ಸಂಪರ್ಕ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಇರುವುದರಿಂದ ತಕ್ಷಣ ಸಿ.ಎಸ್.ಆರ್. ಅನುದಾನದಲ್ಲಿ ವ್ಯವಸ್ಥೆ ಮಾಡಬೇಕೆಂದು ತಿಳಿಸಿದರು.

ಯಲಗಟ್ಟಾ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಟ್ಟಡಗಳನ್ನು ವಿಸ್ತರಿಸಿ ಒದಗಿಸಬೇಕು. ಜೊತೆಗೆ ವಿಜ್ಞಾನ ಶಿಕ್ಷಣಕ್ಕಾಗಿ ಪ್ರಯೋಗಾಲಯವನ್ನು ನಿರ್ಮಿಸಬೇಕೆಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ತಾತ್ಕಾಲಿಕ ಸೇತುವೆ ಕೊಚ್ಚಿ ಹೋದ ಹಿನ್ನೆಲೆ ರಾಜ್ಯ ಹೆದ್ದಾರಿ ಬಂದ್

ಈ ವೇಳೆ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಪ್ರದಾನ ಕಾರ್ಯದರ್ಶಿ ನರಸಣ್ಣ ನಾಯಕ, ಜಿಲ್ಲಾ ಉಪಾಧ್ಯಕ್ಷರಾದ ಹನುಮಂತ ಪಲಕನಮರಡಿ, ಜಿಲ್ಲಾ ಮುಖಂಡರಾದ ನಿಂಗಪ್ಪ ಎಂ ವೀರಾಪೂರು, ಯಲಗಟ್ಟಾ ಗ್ರಾಮದ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷರು ನಾಗಪ್ಪ, ಪ್ರದಾನ ಕಾರ್ಯದರ್ಶಿ ಅಂಬಣ್ಣ ಮಾಲಿ ಪಾಟೀಲ, ಅಲಿಸಾಬ , ಭೀಮೇಶ್, ಇನ್ನಿತರರು ಇದ್ದರು






WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...