ರಾಯಚೂರು | ಹೆಸರಿಗೆ ಮಾತ್ರ ಯರಗೇರಾ ಹೋಬಳಿ ಕೇಂದ್ರ; ಕನಿಷ್ಟ ಬಸ್‌ ನಿಲ್ದಾಣವೂ ಇಲ್ಲ!

Date:

ರಾಯಚೂರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಯರಗೇರಾ ಗ್ರಾಮ ಹೇಳಿಕೊಳ್ಳಲು ಮಾತ್ರ ಹೋಬಳಿ ಕೇಂದ್ರವಾಗಿದೆ. ಆದರೆ ಸಾರಿಗೆ ಸಂಪರ್ಕಕ್ಕೆ ಇಲ್ಲಿ ಕನಿಷ್ಟ ಬಸ್‌ ನಿಲ್ದಾಣವೂ ಇಲ್ಲ. ಸುಮಾರು 30 ವರ್ಷಗಳಿಂದಲೂ ಇಲ್ಲಿಯದು ಇದೇ ಪರಿಸ್ಥಿತಿ. ಇಲ್ಲಿನ ಜನಪ್ರತಿನಿಧಿಗಳಿಗೆ ಗ್ರಾಮಗಳ ಅಭಿವೃದ್ಧಿಯಾಗಲೀ, ಜನರಿಗೆ ತಲುಪಿಸಬೇಕಾದ ಮೂಲ ಸೌಕರ್ಯಗಳ ಬಗ್ಗೆ ಕಾಳಜಿಯಾಗಲೀ ಇದ್ಯಾವುದೂ ಬೇಕಾಗಿಲ್ಲ ಎನ್ನುವುದು ಸಾರ್ವಜನಿಕರ ಆಕ್ರೋಶ.

ಯರಗೇರಾ ಹೋಬಳಿ ಕೇಂದ್ರದಿಂದ ದಿನನಿತ್ಯ ಶಾಲೆ, ಕಾಲೇಜು, ಉದ್ಯೋಗ ಅಥವಾ ಕೆಲಸಕ್ಕೆ ತೆರಳುವವರು, ಮಹಿಳೆಯರು ಮತ್ತು ಕೂಲಿ ಕಾರ್ಮಿಕರು ಬಸ್ ಹಿಡಿಯಲು ರಸ್ತೆ ಮಧ್ಯೆಯೇ ನಿಲ್ಲಬೇಕಾದ ಪರಿಸ್ಥಿತಿ ಇದೆ. ಇದರಿಂದ ಕೆಲವು ಬಾರಿ ಅಪಘಾತಗಳು ಸಂಭವಿಸಿರುವ ಉದಾಹರಣೆಗಳೂ ಇವೆ ಎಂದು ಗ್ರಾಮಸ್ಥರು ವಿಷಾದ ವ್ಯಕ್ತಪಡಿಸುತ್ತಿದ್ದಾರೆ.

ಯರಗೇರಾ ಹೋಬಳಿಯು ತಲಮಾರಿ ಮಿರ್ಜಾಪುರ, ಇಡಪನೂರು, ಮಿಡಗಲದಿನ್ನಿ, ಗಧಾರ, ಜಂಬಲದಿನ್ನಿ, ಕೊತ್ತದೊಡ್ಡಿ, ಕನ್ಯಾದೊಡ್ಡಿ, ಮಲ್ಲಾಪುರು, ಮುರ್ಕಿದೊಡ್ಡಿ, ಉಪ್ರಾಳ, ಗೋಡಿಹಾಳ್, ಅಲ್ಕೋರು ಸೇರಿದಂತೆ 20ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕೇಂದ್ರವಾಗಿದೆ. ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ಬಸ್ ನಿಲುಗಡೆ ಸ್ಥಳದಲ್ಲಿ ಅಸಮರ್ಪಕ ವ್ಯವಸ್ಥೆಯಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗುತ್ತದೆ. ʼಪ್ರತಿ ಚುನಾವಣೆಯಲ್ಲಿಯೂ ಬಸ್ ನಿಲ್ದಾಣ ನಿರ್ಮಿಸುವ ಭರವಸೆ ಕೊಡುತ್ತಾರೆ. ಆದರೆ ಮತದಾನವಾದ ನಂತರ ಮರೆತುಬಿಡುತ್ತಾರೆ. ವಿದ್ಯಾರ್ಥಿಗಳು ಬಸ್ ಕಾಯುವುದಕ್ಕೂ ಸುರಕ್ಷಿತ ಸ್ಥಳವಿಲ್ಲ. ಮಳೆಯಾದರೆ ಅಥವಾ ಬಿಸಿಲಾದರೆ ತುಂಬಾ ಕಷ್ಟʼ ಎಂದು ಸ್ಥಳೀಯ ಯುವಕನೊಬ್ಬ ಅಸಮಾಧಾನ ವ್ಯಕ್ತಪಡಿಸಿದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 11 04 at 10.38.21 AM 1

ಈ ಕುರಿತು ಸ್ಥಳೀಯ ನಿವಾಸಿ ಜಿಲಾನಿ ಯರಗೇರಾ ಮಾತನಾಡಿ, “ಯರಗೇರಾ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ NH-167, ಅಂದರೆ ಹೈದರಾಬಾದ್–ಬೆಂಗಳೂರು ಹೆದ್ದಾರಿಯ ಸಂಪರ್ಕ ಹೊಂದಿದೆ. ನಿತ್ಯ ಸಾವಿರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ಹೋಬಳಿಯಿಂದ ಕೇವಲ 15–16 ಕಿಲೋಮೀಟರ್ ದೂರದಲ್ಲಿ ತೆಲಂಗಾಣ ಮತ್ತು ಆಂಧ್ರಪ್ರದೇಶ ಗಡಿಭಾಗ ಇರುವುದರಿಂದ ಪ್ರಯಾಣಿಕರ ಸಂಖ್ಯೆಯು ಅತ್ಯಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಅತಿ ಅಗತ್ಯವಾಗಿದೆ. ಸರ್ಕಾರ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಮನವಿ ಮಾಡಿದರು.

ಹಲವು ಗ್ರಾಮೀಣ ರಸ್ತೆಗಳಲ್ಲಿ ವ್ಯವಸ್ಥಿತ ಬಸ್ ನಿಲ್ದಾಣಗಳೇ ಮಾಯವಾಗಿವೆ. ಇದರಿಂದಾಗಿ ಪ್ರಯಾಣಿಕರು ರಸ್ತೆಯ ಮಧ್ಯೆಯೇ ನಿಂತು ಪರದಾಡುವಂತಾಗಿದ್ದು, ಸಾರಿಗೆ ಇಲಾಖೆಯ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಮುಖಂಡ ಜಗನ್ನಾಥ ನಾಯಕ ಮಾತನಾಡಿ, “ನಿಲ್ದಾಣವಿಲ್ಲದೇ ಬಸ್ಗಾಗಿ ರಸ್ತೆ ಬದಿಯಲ್ಲೇ ನಿಂತು ಹೋಗಬೇಕಾಗುತ್ತದೆ. ಬಿಸಿಲು, ಮಳೆ ಯಾವುದನ್ನೂ ಲೆಕ್ಕಿಸದೆ ರಸ್ತೆಯಲ್ಲಿ ನಿಂತು ಬಸ್ ಕಾಯುವುದು ಮಕ್ಕಳು, ವೃದ್ಧರಿಗೆ ಬಹಳ ಕಷ್ಟವಾಗುತ್ತಿದೆ. ಸರ್ಕಾರಿ ಬಸ್‌ಗಳಿಗಾಗಿ ಗಂಟೆಗಟ್ಟಲೆ ಕಾಯುತ್ತಿರುವಾಗ ಖಾಸಗಿ ಬಸ್‌ಗಳು ತ್ವರಿತವಾಗಿ ಹೋಗಿಬಿಡುತ್ತವೆ. ಇದರಿಂದ ನಮ್ಮಂತಹ ಗ್ರಾಮೀಣ ಪ್ರಯಾಣಿಕರಿಗೆ ಅನ್ಯಾಯವಾಗುತ್ತಿದೆ” ಎಂದು ಆಕ್ಷೇಪಿಸಿದರು.

“ಮುಂಜಾನೆ ಸಮಯದಲ್ಲಿ ಉದ್ಯೋಗಕ್ಕಾಗಿ ಹೊರಡುವ ಕಾರ್ಮಿಕರು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ನೌಕರರು, ಜೊತೆಗೆ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಬಸ್ ಬರದೆ ರಸ್ತೆಯ ಅಂಚಿನಲ್ಲಿ ನಿಂತು ಕಾಯುವ ದೃಶ್ಯವು ಯರಗೇರಾ ಹೋಬಳಿಯಲ್ಲಿ ಪ್ರತಿದಿನವೂ ಕಾಣಸಿಗುತ್ತದೆ. ಕೆಲವೊಮ್ಮೆ ಬಸ್ ತಡವಾಗಿ ಬರುವುದರಿಂದ ವಿದ್ಯಾರ್ಥಿಗಳು ತರಗತಿ ತಪ್ಪುವ ಪರಿಸ್ಥಿತಿಯೂ ಎದುರಾಗುತ್ತದೆ. ಕಾರ್ಮಿಕರು ಕೂಡ ಕೆಲಸದ ಸ್ಥಳಕ್ಕೆ ತಡವಾಗಿ ತಲುಪುತ್ತಾರೆ. ಇವು ಹೇಳಿಕೊಳ್ಳುವಷ್ಟು ದೊಡ್ಡ ಸಮಸ್ಯೆಯಲ್ಲ ಎನಿಸಬಹುದು. ಆದರೆ ಇಲ್ಲಿನ ನಿವಾಸಿಗಳಿಗೆ ಹೇಳಿಕೊಳ್ಳದೇ ಇರುವಷ್ಟು ಸಣ್ಣ ಸಮಸ್ಯೆಯಂತೂ ಅಲ್ಲ. ಸಂಬಂಧಪಟ್ಟವರು ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದರು.

ಇನ್ನೋರ್ವ ಸ್ಥಳೀಯ ಮುಖಂಡ ಹಾಜಿಸಾಬ ಮಾತನಾಡಿ, “ಧಾರ್ಮಿಕ ಪ್ರವಾಸಿ ತಾಣಗಳಾದ ಮಂತ್ರಾಲಯ ಮತ್ತು ಶ್ರೀಶೈಲಂನ ಮಧ್ಯೆಯ ರಸ್ತೆಯಲ್ಲಿ ಇರುವ ಪ್ರಮುಖ ಜಂಕ್ಷನ್‌ಗಳಲ್ಲಿ ಯರಗೇರಾ ಕೂಡ ಒಂದು. ಈ ರಸ್ತೆಯ ಮೂಲಕ ಪ್ರತಿದಿನ ಸಾವಿರಾರು ಭಕ್ತರು ಪ್ರಯಾಣಿಸುತ್ತಾರೆ. ಬಸ್ ನಿಲ್ದಾಣವಿಲ್ಲದೇ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಮಹಿಳೆಯರಿಗೆ ತುರ್ತು ವೇಳೆ ಸಮಸ್ಯೆ ಉಂಟಾಗುತ್ತಿದೆ. ಹಾಗಾಗಿ ಸಂಬಂಧಪಟ್ಟ ಇಲಾಖೆ ತಕ್ಷಣವೇ ಸಮಸ್ಯೆಯನ್ನು ಬಗೆಹರಿಸಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ರಾಯಚೂರು | ಹಟ್ಟಿ ಚಿನ್ನದ ಗಣಿಯ ಅಧಿಕಾರಿಗಳಿಂದ ಅಕ್ರಮ ಮರಳು ದಂಧೆ; ಲೋಕಾಯುಕ್ತರಿಗೆ ದೂರು

ಹೆದ್ದಾರಿ ಮಾರ್ಗದಲ್ಲಿ ಸಂಚಾರ ಹೆಚ್ಚಿರುವುದರಿಂದ ಪ್ರಯಾಣಿಕರು ಅಪಾಯದಲ್ಲೇ ನಿಂತು ಬಸ್ ಹಿಡಿಯಬೇಕಾದ ಸ್ಥಿತಿ ಎದುರಿಸುತ್ತಿದ್ದಾರೆ. ಸ್ಥಳೀಯರು ಹೇಳುವಂತೆ, ಈ ಹೋಬಳಿಯು ಹಲವಾರು ಹಳ್ಳಿಗಳಿಗೆ ಕೇಂದ್ರವಾಗಿರುವುದರಿಂದ ನೂರಾರು ಮಂದಿ ಪ್ರತಿದಿನ ಬಸ್ ಬಳಸುತ್ತಾರೆ. ಈ ಸಮಸ್ಯೆಗೆ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಹಲವು ಬಾರಿ ಸ್ಥಳೀಯ ಶಾಸಕರು ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಅನೇಕ ಬಾರಿ ಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಭರವಸೆ ನೀಡಿದರೂ ಅದು ಕಾಗದದಲ್ಲೇ ಸೀಮಿತವಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣ ಭಾಗದ ಅಭಿವೃದ್ಧಿಯಾದಾಗ ಮಾತ್ರ ದೇಶದ ಅಭಿವೃದ್ಧಿ ಎನ್ನಲಾಗುತ್ತದೆ. ಆದರೆ, ಇಂದಿಗೂ ರಾಜ್ಯದ ಬಹುತೇಕ ಗ್ರಾಮಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿವೆ. ಅಭಿವೃದ್ದಿ ಹೆಸರಿನಲ್ಲಿ ಕೋಟ್ಯಂತರ ಅನುದಾನ ಬಿಡುಗಡೆಯಾಗುತ್ತದೆ. ಆದರೆ ಯಾವಾಗ, ಹೇಗೆ, ಎಷ್ಟು ಬಿಡುಗಡೆಯಾಗುತ್ತದೆ, ಅದು ಉದ್ದೇಶಿತ ಯೋಜನೆಗೆ ಬಳಕೆಯಾಗಿದೆಯೇ ಎನ್ನುವ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗುವುದೇ ಇಲ್ಲ. ಸ್ಥಳೀಯ ಆಡಳಿತ, ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...