ರಾಯಚೂರು | ಬೀದಿನಾಯಿಗಳ ದಾಳಿಗೆ ಯುವತಿ ಬಲಿ; ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವಂತೆ ಪ್ರತಿಭಟನೆ

Date:

ಬೀದಿನಾಯಿಗಳ ದಾಳಿಯಿಂದ ಮೃತಪಟ್ಟ ಮಡ್ಡಿಪೇಟೆಯ ನಿವಾಸಿ ಮಹಾದೇವಿ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯಿಸಿ ಭಾರತ ಕಮ್ಯುನಿಷ್ಟ್ ಪಕ್ಷ(ಮಾರ್ಕ್ಸ್‌ ವಾದಿ)ದಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ರಾಯಚೂರು ನಗರದ ಮಡ್ಡಿಪೇಟೆ ಬಡಾವವಣೆಯಲ್ಲಿ ಡಿಸೆಂಬರ್‌ 7ರಂದು ಮನೆಯ ಮುಂದೆ ನಿಂತಿದ್ದ ಮಹಾದೇವಿ(23)ಯವರ ಮೇಲೆ ಬೀದಿನಾಯಿಗಳು ದಾಳಿ ಮಾಡಿದ್ದವು. ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಭೀಕರ ಗಾಯಗೊಂಡ ಯುವತಿ ಕೋಮಾ ಸ್ಥಿತಿಗೆ ತೆರಳಿ ಬಳಿಕ ಸಾವನ್ನಪ್ಪಿದ್ದರು.

“ನಾಯಿಗಳ ದಾಳಿಯಿಂದ ಮಹಾದೇವಿ ಕೆಳಗೆ ಬಿದ್ದಾಗ ಅವರ ತಲೆಗೆ ಬಲವಾಗಿ ಪೆಟ್ಟುಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ಎಂ ಕೆ ಭಂಡಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಮರಳಿ ಮನೆಗೆ ಕರೆದುಕೊಂಡು ಬಂದಿದ್ದರು. ನಾಲ್ಕು ದಿನಗಳ ನಂತರ ಕೊನೆಯುಸಿರು ಎಳೆದ್ದಾರೆ. ಮಹಾದೇವಿ ಕುಟುಂಬದವರಿಗೆ ರಾಜ್ಯ ಸರ್ಕಾರ ಕೂಡಲೇ ₹30 ಲಕ್ಷ ಪರಿಹಾರ ಕೊಡಬೇಕು” ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರದ ಸ್ಲಂ ಪ್ರದೇಶಗಳಾದ ಮಡ್ಡಿಪೇಟೆ, ಎಲ್‌ಬಿಎಸ್‌ ನಗರ, ಸಿಯಾತಲಾಬ, ಹರಿಜನವಾಡ, ಜಲಾಲನಗರ, ಮೈಲಾರನಗರ, ಕಾಳಿದಾಸನಗರ, ಜಹೀರಾಬಾದ್ ಸ್ಟೇಷನ್ ಏರಿಯಾ, ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣ ಪ್ರದೇಶಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ತೆಲಂಗಾಣಕ್ಕೆ ಭತ್ತ ಸಾಗಾಟ ನಿರ್ಬಂಧ; ರಾಜ್ಯ ರೈತ ಸಂಘ ಖಂಡನೆ

“ಬಡಾವಣೆಗಳಲ್ಲಿ ಆಟವಾಡುವ ಮಕ್ಕಳು, ರಸ್ತೆಗಳಲ್ಲಿ ಸಂಚರಿಸುವ ಬೈಕ್‌ ಸವಾರರ ಮೇಲೆ ಬೀದಿನಾಯಿಗಳು ಎರಗುತ್ತವೆ. ಬೀದಿನಾಯಿಗಳನ್ನು ನಿಯಂತ್ರಿಸುವುದು ಕಷ್ಟವಾಗುತ್ತಿದೆ. ನಗರಸಭೆ ಹಾಗೂ ಜಿಲ್ಲಾಡಳಿತ ಬೀದಿನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಎಚ್ ಪದ್ಮಾ ಕರಿಯಪ್ಪ ಅಚ್ಚೋಳಿ, ಇಂದಿರಾ, ನಾಗರಾಜ, ಹನ್ಮಂತು, ಶಿವಣ್ಣ, ಶ್ರೀನಿವಾಸ, ರಾಜು, ಲಕ್ಷ್ಮಣ, ರೇಣುಕಮ್ಮ, ಶರಣಮ್ಮ, ಅನಿಲ್, ಗಗನ್, ಬುಜಪ್ಪ, ಡಿ ಎಸ್ ಶರಣಬಸವ, ಗೋಕಾರಮ್ಮ, ಸೇರಿದಂತೆ ಮಡ್ಡಿಪೇಟೆ ನಿವಾಸಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...