ರಾಯಚೂರು | ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಮೋಸ; ಡಿ.6ರಂದು ಪ್ರತಿಭಟನೆ

Date:

ರಾಯಚೂರಿನ ಎಪಿಎಂಸಿ ಹತ್ತಿ ಮಾರುಕಟ್ಟೆಯಲ್ಲಿ ಹತ್ತಿ ಖರೀದಿಯಲ್ಲಿ ರೈತರಿಗೆ ಮೋಸವಾಗುತ್ತಿದೆ. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕೆಂದು ಆಗ್ರಹಿಸಿ ಮತ್ತು ನಾನಾ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಡಿ.6ರಂದು ಪ್ರತಿಭಟನೆ ನಡೆಸಲು ರೈತ ಸಂಘ ನಿರ್ಧರಿಸಿದೆ.

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಲಕ್ಷಮಣಗೌಡ ಕಡಗಂದೊಡ್ಡಿ, “ಹತ್ತಿ ಮಾರುಕಟ್ಟೆಯಲ್ಲಿ ರೈತರ ಹತ್ತಿಯನ್ನು ಟೆಂಡರ್ ಮೂಲಕ ಖರೀದಿಸದೇ ನೇರವಾಗಿ ಮಿಲ್‌ಗಳಿಗೆ ಸಾಗಿಸಲಾಗುತ್ತಿದೆ. ಲೇಬರ್ ಚಾರ್ಜ ಎಂದು 150 ರೂ, ಅನ್‌ಲೋಡಿಂಗ್‌ ಚಾರ್ಜ್‌ 15 ರೂ. ಸೇರಿ ಪ್ರತಿ ಕ್ವಿಂಟಾಲ್ ಹತ್ತಿಯಿಂದ 3 ರೂ. ಕಡಿತಗೊಳಿಸಲಾಗುತ್ತಿದೆ. ಹತ್ತಿ ಬೆಲೆ ಕುಸಿತವಾಗಿರುವ ಕಾರಣ ಇಲ್ಲಸಲ್ಲದ ಶುಲ್ಕಗಳನ್ನು ರೈತರ ಮೇಲೆ ಹೇರಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಎಪಿಎಂಸಿಯಿಂದಲೇ ನಾಲ್ಕ ವೇಬ್ರೀಡ್ಜ್ ಸ್ಥಾಪಿಸಬೇಕು. ಖಾಸಗಿ ವೇಬ್ರೀಡ್ಜ್‌ಗಳಿಂದ ರೈತರಿಗೆ ತೂಕದಲ್ಲಿ ಅನ್ಯಾಯವಾಗುತ್ತಿದೆ. ಈರುಳ್ಳಿ ಖರೀದಿಯಲ್ಲಿ ಸ್ಯಾಂಪಲ್ ಸಂಗ್ರಹಿಸುವ ನೆಪದಲ್ಲಿ 2 ಕೆ.ಜಿ ಅನಧಿಕೃತವಾಗಿ ಸಂಗ್ರಹಿಸಲಾಗುತ್ತಿದೆ. ತೊಗರಿಯಲ್ಲೂ ಇದೇ ರೀತಿ ನಡೆಯುತ್ತಿದೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಪಿಎಂಸಿಯಲ್ಲಿ ನಡೆಯುತ್ತಿರುವ ಅನ್ಯಾಯದ ಕುರಿತ ಎಪಿಎಂಸಿ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.ಸಂತೆ ಬಜಾರಿನಲ್ಲಿ ಕುಡಿಯುವ ನೀರು, ಸ್ವಚ್ಚತೆಯೇ ಇಲ್ಲದಂತಾಗಿದೆ. ಪ್ರತಿವಾರ ಜಾನುವಾರು ಸಂತೆ ನಡೆಯುತ್ತದೆ. ಆ ಜಾಗವನ್ನು ಸ್ವಚ್ಚಗೊಳಿಸುತ್ತಿಲ್ಲ. ರೈತರ ತರಕಾರಿ ಮಾರುಕಟ್ಟೆಯಲ್ಲಿ ಶೆಡ್‌ಗಳಿಲ್ಲ. ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ” ಎಂದು ಕಿಡಿಕಾರಿದ್ದಾರೆ.

ಮಾರುಕಟ್ಟೆಯಲ್ಲಿ ರೈತರು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಬುಧವಾರ ಎಪಿಎಂಸಿ ಮಾರುಕಟ್ಟೆಯ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಬ್ದುಲ್ ಮಜೀದ್ ಸಾಬ, ರಮೇಶ ಗಾಣಧಾಳ, ನರಸಪ್ಪ ಹೊಕ್ರಾಣ , ಹಂಪಣ್ಣ, ಪ್ರಾಣೇಶ ಗಾಣಧಾಳ ಉಪಸ್ಥಿತರಿದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...