ರಾಯಚೂರು | ಪಾರದರ್ಶಕವಾಗಿರದ ಅಕ್ರಮ ರಸ್ತೆ ಕಾಮಗಾರಿ ತನಿಖೆ; ಅಧಿಕಾರಿಗಳ ಅಮಾನತಿಗೆ ಒತ್ತಾಯ

Date:

  • ಒಂದೇ ರಸ್ತೆಗೆ ಮೂರು ಇಲಾಖೆಗಳಿಂದ ಹಣ ಎತ್ತುವಳಿ ಮಾಡಿರುವ ಆರೋಪ
  • ಅಕ್ರಮ ಕಾಮಗಾರಿ ನಡೆಸಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹ

ದೇವದುರ್ಗ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ರಸ್ತೆ ಕಾಮಗಾರಿಯ ಕುರಿತು ತನಿಖೆ ನಡೆಯುತ್ತಿರುವಾಗಲೇ ರಸ್ತೆ ದುರಸ್ತಿ ಕಾಮಗಾರಿ ಪ್ರಾರಂಭಿಸಿದ್ದು, ಕೂಡಲೇ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ವಿನೋದ್ ರೆಡ್ಡಿ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇವದುರ್ಗ ತಾಲೂಕಿನಲ್ಲಿ ಒಂದೇ ರಸ್ತೆಗೆ ಮೂರು ಇಲಾಖೆಗಳಿಂದ ಹಣ ಎತ್ತುವಳಿ ಮಾಡಲಾಗಿದೆ. ಈ ಕುರಿತು ದಾಖಲೆಗಳೊಂದಿಗೆ ಲೋಕೊಪಯೋಗಿ ಸಚಿವರಿಗೆ ಭೇಟಿ ನೀಡಿ ಮನವಿ ಸಲ್ಲಿಸಲಾಗಿತ್ತು. ಸಚಿವರು ಮೂರು ಇಲಾಖೆ ಅಧಿಕಾರಿಗಳ ತನಿಖಾ ತಂಡ ರಚಿಸಿ ಪರಿಶೀಲನೆ ಪ್ರಾರಂಭಿಸಿದ್ದಾರೆ. ಆದರೆ ಜಿಲ್ಲೆಗೆ ಆಗಮಿಸಿದ್ದ ತನಿಖಾ ತಂಡ ದೂರದಾರರಿಗೆ ಮಾಹಿತಿ ನೀಡದೇ ತನಿಖೆ ನಡೆಸಿದೆ” ಎಂದು ತಿಳಿಸಿದರು.

“ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಚನ್ನಬಸವಪ್ಪ ಮಕಾಲೆ ಹಾಗೂ ಕೆಬಿಎಜೆಎನ್‌ಎಲ್‌ನ ಸಣ್ಣ ಪರುಶರಾಮ ಸೇರಿದಂತೆ ಪಿಎಂಜಿಎಸ್‌ವೈ ಅಧಿಕಾರಿಗಳ ವಿರುದ್ದ ಅಕ್ರಮ ಆರೋಪ ಮಾಡಲಾಗಿತ್ತು. ಆದರೆ ಅಧಿಕಾರಿಗಳು ಸೇವೆಯಲ್ಲಿ ಇರುವುದರಿಂದ ತನಿಖೆ ನಡೆಸಲು ಸಾಧ್ಯವಾಗುವುದಿಲ್ಲ. ಕೂಡಲೇ ಅವರನ್ನು ಅಮಾನತು ಮಾಡಬೇಕು. ಇದಕ್ಕೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಆರೋಪಿತ ಅಧಿಕಾರಿಗಳ ರಕ್ಷಣೆ ನಿಂತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವದುರ್ಗ ತಾಲೂಕಿನ ಬಿ.ಗಣೇಕಲ್ ಗ್ರಾಮದಿಂದ ಪಂದ್ಯಾನ ಗ್ರಾಮದವರೆಗೆ ರಸ್ತೆ ರಿಪೇರಿ ಕೆಲಸ ನಡೆಯುತ್ತಿದೆ. ಆದರೆ ಯಾವ ಇಲಾಖೆಯವರು ಮಾಡುತ್ತಿದ್ದಾರೆ ಎಂಬ ಮಾಹಿತಿ ನೀಡುತ್ತಿಲ್ಲ. ಮಾಹಿತಿ ಹಕ್ಕು ಅಧಿನಿಯಮದಡಿ ಮಾಹಿತಿ ಕೇಳಿದರೂ ಮೇಲನ್ಮವಿ ಸಲ್ಲಿಸುವಂತೆ ಅಧಿಕಾರಿಗಳು ಹೇಳುತ್ತಿದ್ದಾರೆ. ದೇವದುರ್ಗ ಶಾಸಕಿ ಕರೆಮ್ಮ ನಾಯಕ ಅವರಿಗೆ ದೂರು ನೀಡಲಾಗಿದೆ. ರಸ್ತೆ ನಿರ್ಮಾಣ ಹೆಸರಿನಲ್ಲಿ ಮೂರು ಇಲಾಖೆಗಳಲ್ಲಿ ಹಣ ಬಳಸಿ ಮತ್ತೊಮ್ಮೆ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು. ಜನರಿಗೆ ತೊಂದರೆಯಾಗುತ್ತಿರುವ ಕಾರಣ ರಸ್ತೆ ದುರಸ್ತಿ ಮಾಡಲಾಗುತ್ತಿದೆ ಎಂದು ಹೇಳುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ಮೂರು ವರ್ಷಗಳಿಂದ ಜನರಿಗೆ ತೊಂದರೆಯಾದರೂ ಕೇಳಲಿಲ್ಲ.ಈಗ ತೊಂದರೆ ಆಗುತ್ತಿರುವುದಾಗಿ ಹೇಳುತ್ತಿದ್ದಾರೆ” ಎಂದು ದೂರಿದರು.

ಕೂಡಲೇ ಆರೋಪಿ ಅಧಿಕಾರಿಗಳ ವಿರುದ್ದ ಇಲಾಖೆ ತನಿಖೆ ನಡೆದಿದೆ. ಅಲ್ಲಿಯವರಗೆ ಅಧಿಕಾರಿಗಳನ್ನು ಅಮಾನತು ಮಾಡಲು ಉಸ್ತುವಾರಿ ಸಚಿವರಿಗೆ ಭೇಟಿ ಮಾಡಿ ಮನವಿ ಮಾಡಲಾಗುತ್ತದೆ. ಯಾವುದೇ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಂ.ಎಸ್.ವೆಂಕಟೇಶ ದೇವದುರ್ಗ, ಡಿ.ಬಸನಗೌಡ ಮಾನವಿ, ಜಿಲಾನಿ ಪಾಷಾ ಲಿಂಗಸೂಗೂರು, ಎಚ್.ಗಂಗಣ್ಣ ಸಿಂಧನೂರು, ಗುರುರಾಜ ಮಸ್ಕಿ, ರಾಮಕೃಷ್ಣ, ಕೆ.ಕೊಂಡಪ್ಪ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...