ರಾಯಚೂರು | ಮಾದಿಗ ಸಮೂದಾಯದ ಮುಖಂಡರಿಗೆ ಅಭಿನಂದನಾ ಸಮಾರಂಭ

Date:

ರಾಜ್ಯ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸೇರಿದಂತೆ ಮಾದಿಗ ಸಮೂದಾಯದ ಅನೇಕ ಮುಖಂಡರುಗಳಿಗೆ ಡಿ.17ರಂದು ನಗರದ ವಾಲ್ಕಟ್ ಮೈದಾನದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ನಗರಸಭೆ ಹಿರಿಯ ಸದಸ್ಯ ಜಯಣ್ಣತಿಳಿಸಿದ್ದಾರೆ.

ಮಾದ್ಯಮಗೋಷ್ಟಿ ಉದ್ದೇಶಿಸಿಸಿ ಮಾತನಾಡಿದ ಅವರು, ರಾಜ್ಯ ರಾಜಕಾರಣಕ್ಕೆ ಆಗಮಿಸಿ ಆಹಾರ ಸಚಿವರಾಗಿರುವ ಕೆ.ಎಚ್. ಮುನಿಯಪ್ಪ, ಇವರು ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಆಶ್ರಯದಲ್ಲಿ ಮಾದಿಗ ಸಮೂದಾಯದಿಂದ ಅಭಿನಂದನಾ ಸಮಾರಂಭ ನಡೆಯಲಿದೆ. ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜ, ಮಾಜಿ ಸಚಿವ ಎಚ್.ಆಂಜಿನಯ್ಯ, ನೂತನ ವಿಧಾನ ಪರಿಷತ್ ಸದಸ್ಯ ಸುಧಾಮ ದಾಸ್, ಮಾಜಿ ಸಂಸದ ಚಂದ್ರಪ್ಪ ಸೇರಿದಂತೆ ಮಾದಿಗ ಸಮುದಾಯ ನಾಯಕರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಜಿಲ್ಲೆಯ ಎಲ್ಲ ತಾಲೂಕಗಳ ಮುಖಂಡರು, ಪಕ್ಷದ ಕಾರ್ಯಕರ್ತರು, ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದು,  ಅಭಿನಂದನಾ ಸಮಾರಂಭ ದಿನದಂದೇ ನಡೆಯಲಿರುವ ಮಾದಿಗ ಮನ್ನಲೆ ಆತ್ಮಗೌರವ ಸಮಾವೇಶ ಕಾರ್ಯಕ್ರಮಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಮಣ್ಣ ಇರಬಗೇರಾ, ಬಾಲಸ್ವಾಮಿ ಕೊಡ್ಲಿ, ನರಸಿಂಹಲು ಮಾಡಿಗಿರಿ, ಪಿ. ಅಮರೇಶ, ಚಂದ್ರಶೇಖರ ಕುರ್ಡಿ, ಆಂಜಿನೇಯ್ಯ ಕುರಬದೊಡ್ಡಿ, ನಗರಸರೆಡ್ಡಿ, ಶಂಕರ ಹೊಸೂರು, ಈರಣ್ಣ ಭಂಡಾರಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...