ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಅಕ್ರಮ, ಕೂಲಿ, ವೇತನ, ಭತ್ಯೆ ನೀಡುವಲ್ಲಿ ವಿಫಲರಾಗಿದ್ದು ಹಣ ಪಡೆದುಕೊಂಡು ಕೆಲಸ ಮಾಡದೇ ಇರುವ ಕೂಲಿ ಕಾರ್ಮಿಕರಿಗೆ ಕೂಲಿ ಪಾವತಿ ಮಾಡುತ್ತಿದ್ದು ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ವತಿಯಿಂದ ನಗರದ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.
ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ನೀಡದೇ, ಕೆಲಸ ಮಾಡದವರಿಗೆ ಕೂಲಿ ಪಾವತಿಸುವಂತಹ ಅಕ್ರಮಗಳು ನಡೆಯುತ್ತಿವೆ ಎಂದು ಅವರು ದೂರಿದ್ದಾರೆ. ಪಂಚಾಯತ್ ಮಟ್ಟದ ಅಧಿಕಾರಿಗಳು ಹಾಗೂ ಸಹಾಯಕ ನಿರ್ದೇಶಕರು ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಕೆಲ ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕೆಲಸಗಳನ್ನು ಗುತ್ತಿಗೆ ಪದ್ಧತಿಯಲ್ಲಿ ಮಾಡಲಾಗುತ್ತಿದ್ದು, ಕೆಲಸ ಮಾಡಿದ ಕಾರ್ಮಿಕರ ಎನ್‌ಎಂಆರ್ ಗಳನ್ನು ಶೂನ್ಯ ಮಾಡುತ್ತಿರುವುದರಿಂದ ಅವರಿಗೆ ಕೂಲಿ ಸಿಗುತ್ತಿಲ್ಲ ಹಾಗೂ ತಾಲ್ಲೂಕು ಎಡಿ ಅವರು ಪ್ರತಿ ಎನ್‌ಎಂಆರ್‌ಗೆ ಹಣ ಪಡೆದು ಬೋಗಸ್ ಕೆಲಸಗಳಿಗೆ ಕೂಲಿ ಪಾವತಿಸುತ್ತಿದ್ದಾರೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ನಿಜವಾದ ಕೂಲಿ ಕಾರ್ಮಿಕರಿಗೆ ನ್ಯಾಯ ದೊರಕಿಸಬೇಕು ಎಂದು ಒತ್ತಾಯಿಸಿದರು.
ಈ ಬಗ್ಗೆ ಅಧಿಕಾರಿಗಳಿಗೆ ಹಲವು ಬಾರಿ ಮೌಖಿಕವಾಗಿ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ, ಎಂದು ಅಸಮಾಧಾನ ವ್ಯಕ್ತಪಡಿಸಿದರು. ತಕ್ಷಣವೇ ಸಮಸ್ಯೆಗಳನ್ನು ಬಗೆಹರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಜಿಲ್ಲಾ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಒಳ ಮೀಸಲಾತಿ ಜಾರಿ ಹೋರಾಟದಲ್ಲಿ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ
ಈ ಸಂದರ್ಭದಲ್ಲಿ ವಿದ್ಯಾ ಪಾಟೀಲ್, ಬಸವರಾಜ, ಮಾರೆಮ್ಮ, ಆಂಜನೇಯ, ಪ್ರಸಾದ್, ಸುಮಲತಾ, ಕೃಷ್ಣ ಪ್ರಸಾದ್, ಗೋವಿಂದ,ಸೇರಿದಂತೆ ಅನೇಕರು ಇದ್ದರು.





