ರಾಯಚೂರು | ಬರಪರಿಹಾರಕ್ಕೆ ಕೃಷಿ ಕೂಲಿಕಾರರ ಸಂಘ ಆಗ್ರಹ

Date:

ರಾಜ್ಯದಲ್ಲಿ ತೀವ್ರವಾಗಿ ಮಳೆಯ ಕೊರತೆ ಉಂಟಾಗಿದೆ. ರಾಜ್ಯದ 195 ತಾಲೂಕುಗಳನ್ನು ಬರಪೀಡಿತವೆಂದು ಸರ್ಕಾರ ಘೋಷಣೆ ಮಾಡಿದ್ದು, ಕೂಡಲೇ ಬರಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ರಾಯಚೂರಿನ ಟಿಪ್ಪುಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಬರ ಘೋಷಣೆ ಬಳಿಕ ಕುಡಿಯಲು ಶುದ್ಧ ನೀರು, ಜಾನುವಾರುಗಳಿಗೆ ಮೇವು, ಮಳೆಯ ಅಭಾವದಿಂದ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉದ್ಯೋಗ ಖಾತ್ರಿ ಯೋಜನೆ 200 ದಿನಗಳವರೆಗೆ ಕೆಲಸ ಒದಗಿಸಬೇಕು. ಕೂಲಿಕಾರರ ಕನಿಷ್ಠ ದಿನಗೂಲಿ ಮಾಸಿಕ ₹600ಕ್ಕೆ ಹೆಚ್ಚಿಸಬೇಕು. ರೈತರು ಕೂಲಿಕಾರರಿಗೆ ಕಾರ್ಮಿಕ ಇಲಾಖೆ ನಿಗದಿಪಡಿಸಿದ ಕನಿಷ್ಠ ವೇತನ ಸಂದಾಯ ಮಾಡಬೇಕು” ಎಂದು ಒತ್ತಾಯಿಸಿದರು.

“ಕೂಲಿಕಾರರು ಸರ್ಕಾರಿ ಹಾಗೂ ಸರ್ಕಾರೇತರ ಬ್ಯಾಂಕುಗಳಿಂದ ಪಡೆದ ಸಾಲವನ್ನು ಬಲವಂತವಾಗಿ ವಸೂಲಿ ಮಾಡಬಾರದು. ಕಿರುಕುಳವನ್ನು ನಿಲ್ಲಿಸಬೇಕು. ಮೈಕ್ರೋಫೈನಾನ್ಸ್ ಮೂಲಕ ಪಡೆದ ಸಾಲವನ್ನು ಮನ್ನಾ ಮಾಡಬೇಕು. ವಲಸೆ ಕಾರ್ಮಿಕರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಬರಗಾಲದ ಸಮಯದಲ್ಲಿ ಯಂತ್ರಗಳ ಬಳಕೆ ನಿಲ್ಲಿಸಿ ಕೂಲಿಕಾರರಿಗೆ ಕೆಲಸದ ಕೊರತೆಯಾಗದಂತೆ ನೋಡಿಕೊಳ್ಳಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಖಾಸಗಿ ಬ್ಯಾಂಕ್, ವಿಎಸ್‌ಎನ್ ಸೊಸೈಟಿ ಮತ್ತು ಸ್ವಸಹಾಯ ಗುಂಪುಗಳ ಸಾಲ ಮನ್ನಾ ಮಾಡಲೇಬೇಕು. ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡಿದವರಿಗೆ ಆ ಭೂಮಿಯ ಪಟ್ಟಾ ಕೊಡಬೇಕು. ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯವರು ನಡೆಸುತ್ತಿರುವ ದಬ್ಬಾಳಿಕೆಯನ್ನು ತಡೆಗಟ್ಟಬೇಕು ಮತ್ತು ಅವರ ಮೇಲೆ ಹಾಕುತ್ತಿರುವ ಸುಳ್ಳು ಪ್ರಕರಣ ಹಿಂಪಡೆಯಬೇಕು. ಬೆಳೆಹಾನಿಯಾಗಿದ್ದು, ನಷ್ಟವುಂಟಾಗಿರುವ ಎಲ್ಲ ರೈತರಿಗೆ ಎಕರೆಗೆ ₹35,000 ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಆನಂದೂರು ಕೃಷಿ ಪತ್ತಿನ ಸಹಕಾರ ಸಂಘ ಆರಂಭಕ್ಕೆ ಆಗ್ರಹ

ಈ ಸಂದರ್ಭದಲ್ಲಿ ಅಧ್ಯಕ್ಷ ಕರಿಯಪ್ಪ ಅಚ್ಚೊಳ್ಳಿ, ಅಮೃತಗೌಡ, ಗೋವಿಂದ ನಾಯಕ, ಕೆ ಇಸ್ಮಾಯಿಲ್, ಲಕ್ಷ್ಮಣ, ಮಲ್ಲಯ್ಯ, ವೆಂಕಟೇಶ, ಹನುಮಯ್ಯ ನಾಯಕ, ಶಂಕರ, ಹೊನ್ನಪ್ಪ, ಗೂಖೂರಪ್ಪ, ಈಶ್ವರಪ್ಪ, ರವಿ, ದೊಡ್ಡಪ್ಪ, ಹನುಮಂತ, ಮಾರೆಪ್ಪ, ಜಿಲಾನಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...