ರಾಯಚೂರು | ಕವಿವಿ ಶುಲ್ಕ ಹೆಚ್ಚಳ, ವಿದ್ಯಾರ್ಥಿವೇತನ ವಿಳಂಬಕ್ಕೆ ಎಐಆರ್‌ಎಸ್‌ಒ ವಿರೋಧ

Date:

ಕರ್ನಾಟಕದ ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ ಶುಲ್ಕ ಹೆಚ್ಚಳ ಹಾಗೂ ವಿದ್ಯಾರ್ಥಿವೇತನ ನಿಲ್ಲಿಸಿರುವುದನ್ನು ರಾಯಚೂರು ಜಿಲ್ಲೆಯ ಅಖಿಲ ಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ(ಎಐಆರ್‌ಎಸ್‌ಒ) ರಾಜ್ಯ ಸಮಿತಿ ಸದಸ್ಯ ಅಜೀಜ್ ಜಾಗೀರ್ದಾರ್ ಖಂಡಿಸಿದರು.

“ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಏಕಾಏಕಿ ಶುಲ್ಕವನ್ನು ಹೆಚ್ಚಿಸಲಾಗಿದೆ. ಕಳೆದ ಶೈಕ್ಷಣಿಕ ಸಾಲಿನ ಶುಲ್ಕ ₹3,000 ಆಸುಪಾಸಿನಲ್ಲಿತ್ತು. ಪ್ರಸ್ತುತ ಸಾಲಿನಲ್ಲಿ ₹3,500ಕ್ಕೆ ಹೆಚ್ಚಿಸಲಾಗಿದ್ದು, ಪರಿಕ್ಷೆ ಶುಲ್ಕವನ್ನೂ ಹೆಚ್ಚಿಸಲಾಗಿದೆ. ಇದರಿಂದ ಒಂದು ಹೊತ್ತಿನ ಊಟಕ್ಕೂ ಕಷ್ಟಪಡುವ ಬಡಕುಟುಂಬದ ವಿದ್ಯಾರ್ಥಿಗಳಿಗೆ ತುಂಬಾ ಕಷ್ಟವಾಗಿದೆ. ಹಾಗಾಗಿ ಅನೇಕ ಬಡಮಕ್ಕಳು ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿ ಕೂಲಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದರು.

“ಕಳೆದ ಒಂದು ವರ್ಷದಿಂದ ವಿದ್ಯಾರ್ಥಿವೇತನ ಬಿಡುಗಡೆಯಾಗಿಲ್ಲ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೂ ಪ್ರತಿಭಟನೆ ನಡೆಸಲಾಗಿತ್ತು. ನಂತರ ಹಣ ಬಿಡುಗಡೆ ಮಾಡಿದ್ದರು. ಈಗ ಒಂದು ವರ್ಷ ಕಳೆದರೂ ಕೂಡ ವೇತನ ಬಿಡುಗಡೆ ಮಾಡಿಲ್ಲ. ಇದರಿಂದ ಸಂಶೋಧನಾ ವಿದ್ಯಾರ್ಥಿಗಳಿಗೆ ತುಂಬಾ ಕಷ್ಟಕರವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜ್ಞಾನ ವಲಯವೆಂದು ಕರೆಯಲಾಗುವ ಭಾರತದ ಶೈಕ್ಷಣಿಕ ರಂಗವನ್ನು ಸಂಪೂರ್ಣ ಶೈಕ್ಷಣಿಕ ಉದ್ಯಮವನ್ನಾಗಿ ಮಾರ್ಪಡಿಸಲಾಗಿದೆ. ಅಂತರಾಷ್ಟ್ರೀಯ, ರಾಷ್ಟ್ರೀಯ ಹಾಗೂ ಸ್ಥಳೀಯ ಮಾರುಕಟ್ಟೆಗೆ ಅದನ್ನು ತೆರೆದಿಡಲಾಗಿದ್ದು, ಬಂಡವಾಳ ಹಾಕಿ ಲಾಭ ಮಾಡಿಕೊಳ್ಳಲು ಮುಕ್ತ ಅವಕಾಶವನ್ನು ನಿರ್ಮಾಣ ಮಾಡಲಾಗಿದೆ” ಎಂದು ತಿಳಿಸಿದರು.

“ಹೊಸ ಸಮಾಜವನ್ನು ನಿರ್ಮಾಣ ಮಾಡಲು ಒಂದು ತಲೆಮಾರನ್ನು ಭೌತಿಕವಾಗಿ ಹಾಗೂ ಮಾನಸಿಕವಾಗಿ ಸಿದ್ಧ ಮಾಡಬೇಕಿದ್ದ ಶಿಕ್ಷಣವು ಕಾರ್ಯಾಚರಣೆಯಲ್ಲಿ ಅದನ್ನು ಸಂಪೂರ್ಣವಾಗಿ ಕಳೆದುಕೊಂಡಿದೆ. ಶಿಕ್ಷಣ ಎಂಬುದು ವ್ಯಾಪಾರವಾಗಿದ್ದು, ಹಣ ಹೂಡಿಕೆ ಮಾಡಿ ಪುನಃ ಲಾಭ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವೈಜ್ಞಾನಿಕ ಶಿಕ್ಷಣ ಪದ್ಧತಿ ಹಾಗೂ ಸಾರ್ವತ್ರಿಕ ಉಚಿತ ಹಾಗೂ ಕಡ್ಡಾಯ ಶಿಕ್ಷಣ ರಾಜ್ಯದಲ್ಲಿ ಜಾರಿಗೆ ತರಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಬಂದ್ ಮಾಡಿಸಿ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ದಲಿತರನ್ನು ಒಳಗೊಳ್ಳದ ಭಾರತ ಸಮೃದ್ಧವಾಗಲು ಸಾಧ್ಯವಿಲ್ಲ: ಎಚ್ ಸಿ ಮಹದೇವಪ್ಪ

“ಶಾಲಾ ಪಠ್ಯಪುಸ್ತಕಗಳ ಮರು ಪರಿಷ್ಕರಣೆ ಯಾರ ಅಧ್ಯಕ್ಷತೆಯಲ್ಲಿ ನಡೆಯುತ್ತಿದೆಯೆಂದು ತಿಳಿಸಬೇಕು. ಆನ್‌ಲೈನ್ ಮೂಲಕ ನೇರವಾಗಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವೇತನ ಬಿಡುಗಡೆ ಮಾಡಬೇಕು. ವಿಶ್ವವಿದ್ಯಾಲಯಗಳ ಶುಲ್ಕ ಕಡಿಮೆ ಮಾಡಬೇಕು. ವಿದ್ಯಾರ್ಥಿ ಯುವಜನರ ಮಧ್ಯೆ ಭಯೋತ್ಪಾದನೆ, ಕೋಮುವಾದ, ಜಾತಿವಾದ, ಗಡಿಭಾಷಾವಾದಗಳನ್ನು ಬಿತ್ತುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...