ರಾಯಚೂರು | ಪಶು ಸಖಿಯರು ಉತ್ತಮ ಕಾರ್ಯ ನಿರ್ವಹಿಸಿ: ಡಾ ಟಿ ರೋಣಿ

Date:

ಪಶು ಸಂಗೋಪನಾ ಇಲಾಖೆಯ ಸಹಯೋಗದೊಂದಿಗೆ ಪಶು ಸಖಿಯರು ಕೆಲಸ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಬೇಕು ಎಂದು ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ ಟಿ ರೋಣಿ ಅವರು ಹೇಳಿದರು.

ಜಿಲ್ಲಾ ಪಶು ಆಸ್ಪತ್ರೆ ಸಭಾಂಗಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ, ತಾಲೂಕು ಪಂಚಾಯತ್‌ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪಶು ಸಖಿಯವರಿಗೆ ಕಿಟ್‌ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಪಶು ಸಖಿ ಎನ್ನುವುದು ಪ್ರಾಣಿಗಳ ಸ್ನೇಹಿತರು ಎಂದರ್ಥ. ಹಸುಗಳು, ಎಮ್ಮೆಗಳು, ಗೂಳಿಗಳು, ಕೋಳಿ ಮತ್ತು ಮೇಕೆಗಳು ಸೇರಿದಂತೆ ಪ್ರಾಣಿಗಳಿಗೆ ನಿತ್ಯದ ವೈದ್ಯಕೀಯ ಅವಶ್ಯಕತೆಗಳನ್ನು ನಿರ್ವಹಿಸಲು ಪಶು ಸಖಿಯರು ಪಶುಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳುವುದು ಅತಿ ಮುಖ್ಯವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಶು ವೈದ್ಯಕೀಯ ನೆರವು ಕೇಂದ್ರಕ್ಕೆ ಸಂಪರ್ಕಿಸುವ ಮೂಲಕ ಅವರು ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆ ಮತ್ತು ಗ್ರಾಮೀಣ ಬಡವರ ನಡುವಿನ ಸಂಪರ್ಕದ ಕೊಂಡಿಯಾಗಿ ಕರ್ತವ್ಯ ನಿರ್ವಹಿಸಬೇಕು. ಗ್ರಾಮೀಣ ಭಾಗದ ಜನರಿಗೆ ಪಶು ಸಂಗೋಪನಾ ಇಲಾಖೆ ವತಿಯಿಂದ ದೊರಕುವ ಸೌಲಭ್ಯಗಳ ಮಾಹಿತಿ ನೀಡಬೇಕು. ಪಶುಗಳಿಗೆ ಕಾಣಿಸಿಕೊಳ್ಳುವ ರೋಗಗಳು, ಪ್ರಾಥಮಿಕ ಚಿಕಿತ್ಸೆ, ಪಶುಗಳ ಪೋಷಣೆ ಮತ್ತು ಪೌಷ್ಟಿಕ ಆಹಾರ, ಹೆಚ್ಚುವರಿ ಹಾಲಿನ ಉತ್ಪಾದನೆ ಬಗ್ಗೆ ಮಾಹಿತಿ ನೀಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಆಡಳಿತದಲ್ಲಿ ಪಾರದರ್ಶಕತೆ, ಶಿಸ್ತು, ಕಾರ್ಯ ನಿರ್ವಹಣೆಗೆ ಉಸ್ತುವಾರಿ ಸಚಿವರ ಸೂಚನೆ

ಈ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ ಎಸ್ ಎಸ್ ಪಾಟೀಲ್‌, ಎನ್‌ಆರ್‌ಎಲ್‌ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಶ್ರೀನಾಥ, ಜಿಲ್ಲಾ ವ್ಯವಸ್ಥಾಪಕ ಶ್ರೀಕಾಂತ ಬನ್ನಿಗೋಳ ಸೇರಿದಂತೆ ಪಶು ಸಖಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...