ರಾಯಚೂರು | ರಿಮ್ಸ್‌ನಲ್ಲಿ ಮತ್ತೋರ್ವ ಬಾಣಂತಿ ಸಾವು, ಮೂರು ತಿಂಗಳಲ್ಲಿ 12 ಮಂದಿ ಮೃತ

Date:

ರಾಯಚೂರು ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರಿದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ.

ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸರಸ್ವತಿ (24) ಮೃತ ಬಾಣಂತಿ. ಮೃತ ಬಾಣಂತಿಯನ್ನು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದವರು ಎಂದು ಗುರುತಿಸಲಾಗಿದೆ.

ಜ.2 ರಂದು ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆಯಾಗಿತ್ತು. ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಜ.5 ಸಾವನ್ನಪ್ಪಿದ್ದಾರೆ. ಸದ್ಯ ವೆಂಟಿಲೇಟರ್‌ನಲ್ಲಿ ಶಿಶುವಿಗೆ ಚಿಕಿತ್ಸೆ ಮುಂದುವರಿದಿದೆ. ನಾಲ್ಕನೇ ಮಗುವಿಗೆ ಜನ್ಮ ನೀಡಿದ್ದ ತಾಯಿ ಸರಸ್ವತಿ ಸಾವಿನಿಂದ ಕುಟುಂಬಸ್ಥರ ತೀವ್ರ ದುಃಖದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಯಚೂರು ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಹೊಸ ವರ್ಷದ ದಿನ ಒಂದು ಸಾವು ಆಗಿತ್ತು

ಹೊಸ ​ವರ್ಷದ ಮೊದಲ ದಿನವೇ ಬಾಣಂತಿಯೊಬ್ಬರು ಮೃತರಾಗಿದ್ದರು. ಸಿಸೇರಿಯನ್​ ಹೆರಿಗೆಗೆ ಒಳಗಾಗಿದ್ದ ಬಾಣಂತಿ ಹಾಗೂ ಶಿಶು ಚಿಕಿತ್ಸೆಗೆ ಸ್ಫಂದಿಸದೇ ರಿಮ್ಸ್ (ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ) ಆಸ್ಪತ್ರೆಯಲ್ಲಿ ಬುಧವಾರ ಸಾವನ್ನಪ್ಪಿದ್ದರು.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮಸೀದಾಪೂರ ಗ್ರಾಮದ ಶಿವಲಿಂಗಮ್ಮ (22) ಮೃತ ಬಾಣಂತಿ ಎಂದು ತಿಳಿದು ಬಂದಿದೆ. ಚೊಚ್ಚಲ ಹೆರಿಗೆಯ ಸಮಯದಲ್ಲಿಯೇ ಬಾಣಂತಿ ಸಾವನ್ನಪ್ಪಿದ್ದಾರೆ. ಅವರನ್ನು ಮಾನವಿ ಆಸ್ಪತ್ರೆಯಿಂದ ಡಿಸೆಂಬರ್ 27ರಂದು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಡಿಸ್ಚಾರ್ಜ್ ಮಾಡಿ ಬೇರೆಡೆ ಕರೆದೊಯ್ಯುತ್ತೇವೆ ಎಂದು ಪೋಷಕರು ಹೇಳಿದರೂ ರಿಮ್ಸ್ ಆಸ್ಪತ್ರೆ ವೈದ್ಯರು ಡಿಸ್ಚಾರ್ಜ್ ಮಾಡಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಆಕೆಯ ಸಾವಿಗೆ ರಿಮ್ಸ್ ಆಸ್ಪತ್ರೆ ವೈದ್ಯರೇ ಕಾರಣ ಎಂದು ಶಿವಲಿಂಗಮ್ಮ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ದುರುಪಯೋಗ ಕುರಿತ ಸುಪ್ರೀಂ ಕೋರ್ಟ್‌ ಹೇಳಿಕೆ ಅಪಾಯಕಾರಿ

ಸಿಂಧನೂರು ಪ್ರಕರಣ

ಸಿಂಧನೂರು ತಾಲೂಕು ಆಸ್ಪತ್ರೆಗೆ ಅಕ್ಟೋಬರ್​ ತಿಂಗಳಲ್ಲಿ ದಾಖಲಾಗಿದ್ದ ನಾಲ್ವರು ಬಾಣಂತಿಯರು ಸಿಸೇರಿಯನ್​ ಬಳಿಕ ಮೃತಪಟ್ಟಿದ್ದರು. ರಾಯಚೂರು ಜಿಲ್ಲೆಯವರೇಯಾದ ಮೌಸಂಬಿ ಮಂಡಲ್​, ಚನ್ನಮ್ಮ, ಚಂದ್ರಕಲಾ, ರೇಣುಕಮ್ಮ ಮೃತ ಬಾಣಂತಿಯರು. ಈ ನಾಲ್ವರು ಬಾಣಂತಿಯರಿಗೂ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಕೆಯಾಗಿದ್ದ IVದ್ರಾವಣವೇ ನೀಡಲಾಗಿತ್ತು ಎನ್ನಲಾಗಿದೆ.

ಸರ್ಕಾರದಿಂದ ತನಿಖೆ

ಬಳ್ಳಾರಿ, ರಾಯಚೂರು, ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿನ ಬಾಣಂತಿಯರ ಸಾವಿನ ಸಂಖ್ಯೆ ಬೆಳಕಿಗೆ ಬರುತ್ತಿದ್ದಂತೆ ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ. ಕಳೆದ ಮೂರು ತಿಂಗಳಲ್ಲಿ ಕರ್ನಾಟಕದಲ್ಲಿ ಎಷ್ಟು ಬಾಣಂತಿಯರು ಮೃತಪಟ್ಟಿದ್ದಾರೆ? ಇವರ ಸಾವಿಗೆ ಕಾರಣವೇನು? ಎಂಬುವುದರ ಕುರಿತು ಸಮಗ್ರವಾಗಿ ತನಿಖೆ ನಡೆಸುತ್ತಿದ್ದು, ಎಲ್ಲ ಮಾಹಿತಿಯನ್ನು ಕಲೆ ಹಾಕುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...