ರಾಯಚೂರು | ಗ್ರಾಮೀಣ ಭಾಗದ ಮಕ್ಕಳಿಗೆ ಬಾಲಮೇಳ ಉತ್ತಮ ವೇದಿಕೆ: ಶಶಿಕಾಂತ ಶಿವಪುರೆ

Date:

ವಿದ್ಯಾರ್ಥಿಗಳು ತಮ್ಮೊಳಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಬಾಲಮೇಳ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ. ಮಕ್ಕಳಿಗೆ ಕಲಿಯುವ ವಯಸ್ಸಿನಲ್ಲಿ ಉತ್ತಮ ವೇದಿಕೆಯನ್ನು ಒದಗಿಸಿಕೊಟ್ಟು, ಪ್ರೋತ್ಸಾಹಿಸುವ ಸೇವೆ ಶ್ಲಾಘನಿಯ ಎಂದು ರಾಯಚೂರು ಜಿಲ್ಲಾ ಪಂಚಾಯತ್‌ ಡಿಎಸ್‌ಒ ಶಶಿಕಾಂತ್‌ ಶಿವಪುರೆ ಅಭಿಪ್ರಾಯಪಟ್ಟರು.

ರಾಯಚೂರು ಜಿಲ್ಲೆ ಮಾನ್ವಿ ನಗರದ ಲಯೋಲ ಶಾಲೆಯಲ್ಲಿ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಬಾಲಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಬಣ್ಣ ಬಣ್ಣದ ಉಡುಗೆ ತೊಟ್ಟು, ಮಕ್ಕಳ ಮುಗ್ಧ ಮುಖದಲ್ಲಿ ಸಂತಸ ಸಂಭ್ರಮ ಮನೆ ಮಾಡಿತ್ತು. 22 ಹಳ್ಳಿಗಳ ಕಲಿಕಾ ಕೇಂದ್ರದ ಮಕ್ಕಳು ಬಾಲಮೇಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು  20 ತರಹದ ವಿವಿಧ ಆಟಗಳು ಮತ್ತು ಮಕ್ಕಳಿಗಾಗಿ ಪ್ರಂಬಂಧ, ಆಶುಭಾಷಣ, ಚೆಸ್, ಚಿತ್ರಕಲೆ ಮತ್ತು ಇಂಗ್ಲೀಷ್ ಟಂಗ್ ಟ್ವಿಸ್ಟರ್ ಸ್ಪರ್ಧೆಗಳನ್ನೂ ಕೂಡಾ ಆಯೋಜಿಸಲಾಗಿತ್ತು. ಆಟೋಟಗಳಲ್ಲಿ ಭಾಗವಹಿ ಸೋಲು ಗೆಲುವು ಆತಂಕವಿಲ್ಲದೇ ಸ್ಪರ್ಧೆಗಳಲ್ಲಿ ತೊಡಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಹದಿನೈದು ವರ್ಷಗಳಿಂದ ಲೊಯೋಲ ಸಂಸ್ಥೆಯು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ನಡೆಸುವಂತಹ ಕಲಿಕಾ ಕೇಂದ್ರಗಳ ಮಕ್ಕಳ ಪ್ರತಿಭೆಯನ್ನು ಹೊರ ತರಲು ಬಾಲಮೇಳ ಮುಗ್ದ ಮನಸುಗಳ ಕಲರವ ವೇದಿಕೆಯನ್ನು ರೂಪಿಸಿ ಕಾರ್ಯಕ್ರಮ ಆಯೋಜಿಸುತ್ತಿದೆ. ಎಲ್ಲ ಮಕ್ಕಳೂ ಮುಗ್ದ ಮನಸ್ಸಿನಿಂದ ಎಲ್ಲರೊಂದಿಗೂ ಬೆರೆತು ಯಾರಿಗಿಂತ ಯಾರೂ ಕಡಿಮೆ ಇಲ್ಲವೆಂಬಂತೆ ನಾನಾ ಆಟೋಟಗಳಲ್ಲಿಯೂ ಮುಕ್ತವಾಗಿ ಪಾಲ್ಗೊಂಡು ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಸಂಭ್ರಮಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಮಾಜಿ ಶಾಸಕರ ಆರೋಪಕ್ಕೆ ಕಾಂಗ್ರೆಸ್‌ ಮುಖಂಡ ಧರ್ಮಜ ಉತ್ತಪ್ಪ ತಿರುಗೇಟು

ಈ ಸಂದರ್ಭದಲ್ಲಿ ಬೆಂಗಳೂರಿನ ಸಂತ ಜೊಸೇಫರ ಕಾನೂನು ಕಾಲೇಜ್ ವಿದ್ಯಾರ್ಥಿಗಳು ಮತ್ತು ಲೊಯೋಲ ಸಂಸ್ಥೆಯ ಶಿಕ್ಷಕರು ಸಿಬ್ಬಂದಿಗಳು ವಿದ್ಯಾರ್ಥಿಗಳು ಇದ್ದರು.

ವರದಿ : ಮರಿಯಪ್ಪ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...