ರಾಯಚೂರು | ಕೇಂದ್ರ ಸರ್ಕಾರದ ವಿರುದ್ಧ ಚಾಲಕರ ಒಕ್ಕೂಟ ಪ್ರತಿಭಟನೆ

Date:

ಕೇಂದ್ರ ಸರ್ಕಾರ ಚಾಲಕರ ವಿರೋಧಿ ಅವೈಜ್ಞಾನಿಕ ಬಿಲ್‌ ಮಂಡನೆ ಮಾಡಿದೆ ಎಂದು ಕರ್ನಾಟಕ ಚಾಲಕರ ಒಕ್ಕೂಟ ಈ ಬಿಲ್‌ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ನಗರದ ಟಿಪ್ಪುಸುಲ್ತಾನ್ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರದ ಗೃಹ ಮಂತ್ರಿ ಅಮಿತ್ ಶಾರವರು ಸಂಸತ್‌ನಲ್ಲಿ ಚಾಲಕರ ವಿರುದ್ಧ ಅವೈಜ್ಞಾನಿಕವಾದ ಬಿಲ್ಲನ್ನು ಪಾಸು ಮಾಡಿದ್ದು, ರಾಷ್ಟ್ರಪತಿಗಳ ಅಂಕಿತಕ್ಕೂ ಹೋಗಿದೆ. ಈ ಬಿಲ್‌ನಿಂದ ಚಾಲಕರಿಗೆ ತೊಂದರೆಯಾಗಲಿದೆ ಎಂದು ಪ್ರತಿಭಟನಾಕಾರರು ದೂರಿದರು.

ಒಬ್ಬ ಚಾಲಕ ರಸ್ತೆಯಲ್ಲಿ ಅಪಘಾತ ಮಾಡಿದ ಸಂದರ್ಭದಲ್ಲಿ ಅಪಘಾತವಾದಂತಹ ವ್ಯಕ್ತಿಯನ್ನು ರಸ್ತೆಯಲ್ಲಿ ಬಿಟ್ಟು ಹೋಗುವ ಹಾಗಿಲ್ಲ. ಸ್ಥಳದಲ್ಲಿಯೇ ಇದ್ದು ಆಸ್ಪತ್ರೆಗೆ ಸಾಗಿಸಬೇಕು, ಮಹಜರು ಮಾಡುವ ಸಂದರ್ಭದಲ್ಲಿ ಸ್ಥಳದಲ್ಲಿರಬೇಕು. ಇಲ್ಲವಾದರೆ ಚಾಲಕನು ಅಲ್ಲಿಂದ ತಪ್ಪಿಸಿಕೊಂಡು ಹೋದರೆ ಅಂತಹ ಚಾಲಕನಿಗೆ ಹತ್ತು ವರ್ಷ ಜೈಲು ಶಿಕ್ಷೆ ಹಾಗೂ ಹತ್ತು ಲಕ್ಷ ರೂ. ಜುಲ್ಮಾನೆಯನ್ನು ಹಾಕಬೇಕು ಎನ್ನುವ ಕಾನೂನನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಕಷ್ಟು ರಸ್ತೆ ಅಪಘಾತ ಸಂದರ್ಭದಲ್ಲಿ ಚಾಲಕ ರಸ್ತೆಯಲ್ಲಿದ್ದಾಗ ಸಾರ್ವಜನಿಕರು ಥಳಿಸಿ ಕೊಲೆ ಮಾಡಿರುವ ಘಟನೆಗಳು ನಡೆದಿವೆ. ಈ ಮಸೂದೆಯಿಂದ ಚಾಲಕರಿಗೆ ತೊಂದರೆಯಾಗಲಿದೆ. ಅಪಘಾತವಾದಂತ ಸಂದರ್ಭದಲ್ಲಿ ಸ್ಥಳೀಯ ಸಾರ್ವಜನಿಕರು ಮತ್ತು ಸಂಬಂಧಿಕರು ಎಷ್ಟೋ ಚಾಲಕರನ್ನು ಕೊಂದಿರುವ ಉದಾಹರಣೆಗಳಿವೆ. ಚಾಲಕರ ಜೀವಕ್ಕೆ ಹೊಣೆಗಾರರು ಯಾರಾಗಿರುತ್ತಾರೆ ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಈ ಹೊಣೆಯನ್ನು ಹೊರಲು ಸಾಧ್ಯವೇ ಕೊಲೆಗಡುಕರಿಗೆ ವಿಧಿಸುವಂತಹ ಕಾನೂನನ್ನು ಚಾಲಕರ ಮೇಲೆ ಹೇರಲು ಸರ್ಕಾರ ಹೊರಟಿದೆ ಎಂದು ದೂರಿ, ಈ ಹಿನ್ನಲೆಯಲ್ಲಿ ಮಸೂದೆ ಹಿಂಪಡೆಯಬೇಕು. ರಾಜ್ಯದ 31ಜಿಲ್ಲೆಗಳಲ್ಲಿ ಹೋರಾಟ ನಡೆಸಿ ಮನವಿ ಸಲ್ಲಿಸುತ್ತಿದ್ದಾರೆ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವೆಂಕಟೇಶ ಮಡಿವಾಳ, ಗೌರವಾಧ್ಯಕ್ಷ ರವೀಂದ್ರನಾಥ.ಎಸ್, ಕಾರ್ಯಾದ್ಯಕ್ಷ ರಾಮು ಸಿ.ಅಂಬಿಗೇರ, ತಾ.ಪ್ರ. ಕಾರ್ಯದರ್ಶಿ ಜಯಪ್ಪ ಬಸವರಾಜ್, ಪ್ರ.ಕಾರ್ಯದರ್ಶಿ ರಘು ಇಟೇಕರ್, ಶರಣಬಸವ, ಹನುಮಂತಪ್ಪ, ರಮೇಶ, ಬಾಬು, ಕಿರಣ್, ವೆಂಕಟೇಶ, ನರಸಿಂಹಲು ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...