ರಾಯಚೂರು | ಕಂದಾಯ ಇಲಾಖೆಯ ಎಲ್ಲ ದಾಖಲೆಗಳ ಗಣಕೀರಣ: ಸಚಿವ ಕೃಷ್ಣ ಬೈರೇಗೌಡ

Date:

ಕಂದಾಯ ಇಲಾಖೆ ಎಲ್ಲಾ ದಾಖಲೆಗಳನ್ನು ಗಣಕೀರಣಗೊಳಿಸಿ ಮುಂದಿನ ಆರು ತಿಂಗಳಲ್ಲಿ ಜನರಿಗೆ ಆಗುತ್ತಿರುವ ತೊಂದರ ನಿವಾರಿಸಲು ಯೋಜನೆ ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ 31 ಜಿಲ್ಲೆಗಳ 31ತಾಲೂಕಗಳಲ್ಲಿ ಮೊದಲ ಹಂತದಲ್ಲಿ ಕಂದಾಯ ದಾಖಲೆಗಳನ್ನು ಡಿಜಿಲೀಕರಣಗೊಳಿಸುವ ಯೋಜನೆ ರೂಪಿಸಲಾಗಿದೆ. ನಂತರದ ದಿನಗಳಲ್ಲಿ ರಾಜ್ಯ ಎಲ್ಲಾ ಜಿಲ್ಲೆಗಳ, ತಾಲೂಕಗಳ ಜಮೀನಿನ ಮುಟ್ಯೇಷನ್ ಸೇರಿದಂತೆ, ಭೂ ದಾಖಲೆಗಳು ಲಭ್ಯವಾಗುವಂತೆ ಮಾಡಲಾಗುತ್ತದೆ.

ಬೆಳೆ ಸಮೀಕ್ಷೆ ಸೇರಿದಂತೆ ಭೂ ಸರ್ವೆ ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ಸಾರ್ವಜನಿಕರಿಗೆ ತೀವ್ರತೊಂದರೆಯಾಗುತ್ತಿದ್ದು ಶಾಶ್ವತ ಪರಿಹಾರ ಒದಗಿಸಲು ಕೆಲಸ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಬರ ಮತ್ತು ಅತಿವೃಷ್ಟಿಯಾದಾಗ ಪರಿಹಾರ ವಿತರಣೆಯಲ್ಲಿ ಸಾಕಷ್ಟು ನ್ಯೂನತೆಗಳಾಗುತ್ತಿರುವ ದೂರುಗಳು ಕೇಳಿಬರುತ್ತಿವೆ.ಯಾರದೋ ಜಮೀನಿನ ಪರಿಹಾರ ಇನ್ಯಾರಿಗೋ ನೀಡುವದು, ಹಾನಿಯಾದ ಬೆಳೆಯೇ ಬೇರೆ, ನಷ್ಟ ಇನ್ಯಾವದೋ ಬೆಳೆಯದು ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳೆ ಸಮೀಕ್ಷ ನಡೆಸಿದರೂ ಶೇ.20ರಷ್ಟು ಅರ್ಹರಿಗೆ ಪರಿಹಾರ ದೊರೆಯದೇ ಹೋಗುತ್ತಿರುವ ದೂರುಗಳ ಹಿನ್ನಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ಬೆಳೆ ನಷ್ಟ ಪರಿಹಾರ ನೀಡಲು 4663 ಕೋಟಿ ರೂ. ಹಣd ಅವಶ್ಯಕತೆಯಿದೆ. ಕುಡಿಯುವ ನೀರು, ಬೆಳೆ ನಷ್ಟ ಸೇರಿ ಇತರೆ ಅವಶ್ಯಕತೆಗಳಿಗೆ 18,175 ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರಕ್ಕೆ ಪರಿಹಾರ ಕೇಳಲಾಗಿದೆ. ಕೇಂದ್ರ ಇಂದಿಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ನಿಯಮಗಳನ್ನು ಬದಲಿಸಿ ರೈತರಿಗೆ ವಾಸ್ತವಿಕ ಪರಿಹಾರ ಒದಗಿಸಲು ಪ್ರಧಾನಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ. ಕೇಂದ್ರ ಸರ್ಕಾರಕ್ಕೆ ಮಾತ್ರ ನಿಯಮಗಳನ್ನು ಪರಿಷ್ಕರಿಸಲು ಅಧಿಕಾರವಿದೆ ಎಂದರು.

ಈಸಂದರ್ಭದಲ್ಲಿ ಶಾಸಕ ಹಂಪಯ್ಯನಾಯಕ, ಬಸನಗೌಡ ದದ್ದಲ್, ಕಂದಾಯ ಅಧಿಕಾರಿ ಸುನೀಲ್‌ಕುಮಾರ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೇರಿ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...