ರಾಯಚೂರು | ಸಂವಿಧಾನ ಕೇವಲ ಪುಸ್ತಕವಲ್ಲ, ಬದುಕಿನ ಭಾಗವಾಗಿದೆ: ಸತ್ರ ನ್ಯಾಯಾಧೀಶ ಮಾರುತಿ ಬಾಗಡೆ

Date:

ಸಂವಿಧಾನ ಕೇವಲ ಪುಸ್ತಕವಲ್ಲ, ಬದುಕಿನ ಭಾಗವಾಗಿದೆ. ಜಾತ್ಯತೀತೆಯ ಪ್ರಜಾಪ್ರಭುತ್ವವನ್ನು ಈ ನಾಡಿಗೆ ನೀಡಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾರುತಿ ಬಾಗಡೆ ಹೇಳಿದರು.

ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯವಾದಿಗಳ ಸಂಘ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿಗಳ ಸಹಯೋಗದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

“ಧರ್ಮದ ಆಧಾರದ ಮೇಲೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ವಿಭಜನೆಯದಾಗ ಭಾರತ ಮಾತ್ರ ಜಾತ್ಯತೀತೆ ಪ್ರಜಾಪ್ರಭುತ್ವ ಒಳಗೊಂಡ ದೇಶ ಅಸ್ತಿತ್ವ ಪಡೆಯಿತು. ವಿಶಾಲವಾದ ಸಂವಿಧಾನವನ್ನು ಡಾ.ಬಿ ಆರ್ ಅಂಬೇಡ್ಕರ್ ನೇತೃತ್ವದ ಸಮಿತಿ ನೀಡಿದೆ. ಸಮಾನ ಅವಕಾಶ,‌ ಮೂಲಭೂತ ಹಕ್ಕು ಸೇರಿದಂತೆ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುವ ಅಂಶಗಳನ್ನು ಹೊಂದಿದೆ. ಸಂವಿಧಾನ ಏಕಾಏಕಿ ಅರ್ಥವಾಗುವುದಿಲ್ಲ. ಸಂವಿಧಾನವನ್ನೂ ಮೂರು ಭಾಗವಾಗಿ ವಿಂಗಡಿಸಿ ಅಧ್ಯಯನ ಮಾಡಬೇಕಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“395 ಅನುಚ್ಚೇದಗಳು, 28 ಭಾಗಗಳು, 12 ಅಧಿಸೂಚನೆಗಳನ್ನು ಒಳಗೊಂಡಿದೆ. ವಿಸ್ತೃತ, ವಿಶಾಲತೆ ತಳಹದಿಯಲ್ಲಿ ರೂಪಿತಗೊಂಡ ಸಂವಿಧಾನ ಅರ್ಥೈಸುವುದು ಸುಲಭವಲ್ಲ. ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವ ಸಂವಿಧಾನ ಪಾಲನೆ ನಮ್ಮೆಲ್ಲರ ಜವಬ್ದಾರಿಯಾಗಿದೆ. ಸಂವಿಧಾನ ಅಶಯಗಳನ್ನು ಸಾಕಾರಗೊಳಿಸಲು ಎಲ್ಲರೂ ಕೈ ಜೋಡಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕರ್ನಾಟಕ ಒನ್ ಕೇಂದ್ರದಲ್ಲಿ ಸೌಲಭ್ಯ ಕುಂಠಿತ; ವಿಶಿಷ್ಟ ಪ್ರತಿಭಟನೆ ನಡೆಸಿದ ಸಾಮಾಜಿಕ ಕಾರ್ಯಕರ್ತ

ವೇದಿಕೆಯಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಧೀಶ ಜಗದೀಶ್ವರ, ಎರಡನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಹತ್ತಿಕಾಳ ಪ್ರಭು ಸಿದ್ದಪ್ಪ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯದರ್ಶಿ ಹಾಗೂ ನ್ಯಾಯಾದೀಶ ದಯಾನಂದ ಬೆಲೂರೆ, ವಿಶ್ರಾಂತ ಉಪ ಕುಲಪತಿ ಜೆ ಎಸ್ ಪಾಟೀಲ್, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎನ್ ಭಾನುರಾಜ, ಸಂಘದ ಕಾರ್ಯದರ್ಶಿ ಉದಯಕುಮಾರ ಸೇರಿದಂತೆ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು, ಹಿರಿಯ, ಕಿರಿಯ ನ್ಯಾಯವಾದಿಗಳು, ಹಿರಿಯ ನ್ಯಾಯವಾದಿ ಎಸ್ ಬಿ ಪಾಟೀಲ್, ನಿಜಾನಂದ ಪಾಟೀಲ್, ನೂರ್ ಮೊಹ್ಮದ ಸೇರಿದಂತೆ ಅನೇಕ‌ರು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...