ರಾಯಚೂರು | ಘನತ್ಯಾಜ್ಯ ವಿಲೇವಾರಿ ವಾಹನ ಚಾಲಕರ ಕಾಯಮಾತಿಗೆ ಆಗ್ರಹ

Date:

ರಾಯಚೂರು ನಗರಸಭೆಯ ಘನ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಕೆಲಸವನ್ನು ಖಾಯಂಗೊಳಿಸುವುದು, ಚಾಲಕರಿಗೆ ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಗತಿಪರ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಹಾಗೂ ಸಹಾಯಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.

“ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ, ಕಸ ಸಂಗ್ರಹಿಸುವ ಮತ್ತು ವಿಲೇವಾರಿ ಮಾಡುವ ವಾಹನಗಳ ಚಾಲಕರು, ಲೋಡರ್‌ಗಳು ಮತ್ತು ಕ್ಲೀನರ್‌ಗಳು ನೇರ ವೇತನ ಪಾವತಿಯಡಿ ತಂದು ಏಕಕಾಲಕ್ಕೆ ಪೌರಕಾರ್ಮಿಕರೆಂದು ಪರಿಗಣಿಸಿ ಖಾಯಂಗೊಳಿಸಬೇಕು” ಎಂದು ಪ್ರತಿಭಟಿಸಿದರು.

“ಏಳನೇ ವೇತನ ಆಯೋಗದ ಪ್ರಕಾರ ಮತ್ತು ಸಮಾನ ಕೆಲಸಕ್ಕೆ ಸಮಾನ ವೇತನ ಆಧಾರದ ಮೇಲೆ ವಾಹನ ಚಾಲಕರು, ಲೋಡ್‌ಗಳು ಮತ್ತು ಕ್ಲೀನರ್‌ಗಳಿಗೆ ಸಮಾನ ವೇತನ ನೀಡಬೇಕು. ಚಾಲಕರಿಗೆ ಕಳೆದ 4 ವರ್ಷಗಳಿಂದ ವೇತನ ಹೆಚ್ಚಳವಾಗಿಲ್ಲ. ಕೂಡಲೇ ಮಾಸಿಕ ವೇತನ ₹17,500 ರಿಂದ ₹35,000ದವರೆಗೂ ವೇತನ ಹೆಚ್ಚಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಪೌರಕಾರ್ಮಿಕರನ್ನು ಒಳಗೊಂಡಂತೆ ಇತರೆ ಎಲ್ಲ ಕಾರ್ಮಿಕರು ಮರಣ ಹೊಂದಿದಲ್ಲಿ, ಅವರ ಅವಲಂಬಿತರಿಗೆ ಕೂಡಲೇ 10 ಲಕ್ಷ ರೂ.ಗಳನ್ನು ವಿತರಿಸಬೇಕು. ಅನುಕಂಪದ ನೇಮಕಾತಿಯಡಿ ಅವಲಂಬಿತರನ್ನು ಸೇವೆಗೆ ತೆಗೆದುಕೊಳ್ಳಬೇಕು. ಐಪಿಡಿ ಸಾಲಪ್ಪ ವರದಿಯನ್ನು ತಕ್ಷಣವೇ ಜಾರಿಗೊಳಿಸಬೇಕು. ರಾಜ್ಯ ಸರ್ಕಾರ 2003ರಲ್ಲಿ ನೇಮಿಸಿದ್ದ ತ್ರಿಸದಸ್ಯ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು. ತ್ಯಾಜ್ಯ ನಿರ್ವಹಣೆಯಲ್ಲಿನ ಎಲ್ಲ ರೀತಿಯ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು. ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ನಿರ್ಮೂಲನೆ ಮಾಡಬೇಕು. ದಲಿತರ ಎಲ್ಲ ರೀತಿಯ ಜಾತಿ ಆಧಾರಿತ ತಾರತಮ್ಯದಿಂದ ವಿಮೋಚನೆಗೊಳ್ಳಬೇಕು” ಎಂದು ಮನವಿ ಮಾಡಿದರು.

“ಎಲ್ಲರಿಗೂ ಉಚಿತ ವಸತಿ ಸೌಲಭ್ಯ ಒದಗಿಸಬೇಕು. ಮಕ್ಕಳಿಗೆ ಪ್ರಾಥಮಿಕ, ಉನ್ನತ ಶಿಕ್ಷಣ ನೀಡಬೇಕು. ಎಲ್ಲ ರೀತಿಯ ರಜೆ ಸೌಲಭ್ಯಗಳನ್ನು ನೀಡಬೇಕು. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಆಗುತ್ತಿರುವ ಲೈಂಗಿಕ ಕಿರುಕುಳ ಸಮಸ್ಯೆ ಪರಿಹರಿಸಬೇಕು. ಲಿಂಗ ಮತ್ತು ಜಾತಿ ತಾರತಮ್ಯವನ್ನು ತೊಲಗಿಸಬೇಕು. ಅಧಿಕಾರಿಗಳು ಮತ್ತು ಸಾರ್ವಜನಿಕರು ಪೌರಕಾರ್ಮಿಕರೊಂದಿಗೆ ಗೌರವ ಮತ್ತು ಘನತೆಯಿಂದ ವರ್ತಿಸುವ ಮೂಲಕ ಅವರ ಜಾತಿವಾದಿ ಮತ್ತು ವರ್ಗವಾಗಿ ಪೂರ್ವಾಗ್ರಹಗಳನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಬಿಡುಗಡೆಗೆ ಆಗ್ರಹ

“ಎಲ್ಲ ಕಾರ್ಮಿಕರಿಗೆ ಕೆಲಸ ಮಾಡುವ ಸ್ಥಳದಲ್ಲಿ ಕುಡಿಯುವ ನೀರು, ವಿಶ್ರಾಂತಿ ಕೊಠಡಿ, ಶೌಚಾಲಯ, ಲಾಕರ್‌ಗಳು, ಸುರಕ್ಷತಾ ಉಡುಗೆ, ಬಟ್ಟೆ ಬದಲಾಯಿಸುವ ಕೊಠಡಿ ಮತ್ತು ಇತರ ಸೌಲಭ್ಯಗಳನ್ನು ಒದಗಿಸಿಕೊಡಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆ ಪದಾಧಿಕಾರಿ ಹುಸೇನಪ್ಪ, ವಿರೇಶ, ಅಮರೇಶ ಜವಳಗೇರಾ, ದುರುಗಪ್ಪ, ಹನುಮಂತ, ದುರುಗೇಶ ಡಿ, ನಾಗರಾಜ, ಕೆಂಚಪ್ಪ, ಮಾರೆಪ್ಪ ಹರವಿ ಸೇರಿದಂತೆ ಬಹುತೇಕರು ಇದ್ದರು.

ರಾಯಚೂರು ಜಿಲ್ಲಾ ಸಿಟಿಜನ್ ಜರ್ನಲಿಸ್ಟ್, ಹಫೀಜುಲ್ಲ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...