ರಾಯಚೂರು | ರೈತ, ಕಾರ್ಮಿಕ ವಿರೋಧಿ ಕಾಯ್ದೆ ರದ್ದಿಗೆ ಆಗ್ರಹ; ನ.26ರಿಂದ 28ರವರೆಗೆ ಧರಣಿ

Date:

ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಈ ಹಿಂದಿನ ರಾಜ್ಯ ಸರ್ಕಾರ ಜಾರಿಗೊಳಿಸಿದ ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಿ, ಪರ್ಯಾಯ ಜನಪರ ನೀತಿಗಳನ್ನು ಜಾರಿ ಮಾಡುವಂತೆ ಒತ್ತಾಯಿಸಿ ನವೆಂಬರ್ 26ರಿಂದ 28ರವರೆಗೆ ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಅಖಿಲ ಭಾರತ ಜಂಟಿ ಕಾರ್ಮಿಕ ಸಂಘಗಳ (ಜೆಸಿಟಿಯು) ನೇತೃತ್ವದಲ್ಲಿ ರಾಜಭವನ್ ಚಲೋ ಮಹಾಧರಣಿ ನಡೆಸಲಾಗುವುದು ಎಂದು ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಸಂಚಾಲಕ ಕೆ ಜಿ ವಿರೇಶ ಹೇಳಿದರು.

ರಾಯಚೂರಿನ ಅಂಬೇಡ್ಕರ್ ಸರ್ಕಲ್‌ನಲ್ಲಿ ಪ್ರಾಂಚಾರಾಂದೋಲನಾ ಅಂಗವಾಗಿ ಹೋರಾಟದ ಪೋಸ್ಟ್‌ರ್ ಮತ್ತು ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.

“2014ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯ ಮೋದಿ ಸರ್ಕಾರ ಆಕ್ರಮಣಕಾರಿಯಾಗಿ ಅನುಸರಿಸುತ್ತಿರುವ ಕಾರ್ಪೊರೇಟ್‌ಪರ ಧೋರಣೆಗಳು ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನ ವಿರೋಧಿ ಹಾಗೂ ದೇಶ ವಿರೋಧಿಯಾಗಿವೆ. ಇಂತಹ ವಿದ್ವಾಂಸಕ ಹಾಗೂ ವಿನಾಶಕಾರಿ ನೀತಿಗಳಿಂದ ಜನತೆಯನ್ನು ರಕ್ಷಿಸಿ ದೇಶವನ್ನು ಉಳಿಸುವ ಸಲುವಾಗಿ ಜಂಟಿ ಹಾಗೂ ಪರಸ್ಪರ ಸಹಭಾಗಿತ್ವದ ಘೋಷಣೆಯನ್ನು ಎಸ್‌ಕೆಎಂ ಮತ್ತು ಜೆಸಿಟಿಯು ರಾಷ್ಟ್ರ ಮಟ್ಟದಲ್ಲಿ ಹೋರಾಟಕ್ಕೆ ಕರೆ ನೀಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೋರಾಟಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು ಹಾಗೂ ವಿಧ್ಯಾರ್ಥಿ ಯುವಜನರು ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸಿ ಈ ನೀತಿಗಳನ್ನು ಕೈ ಬಿಡಲು ಒತ್ತಾಯಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಕಾರ್ಖಾನೆಯಿಂದ ಉದ್ಯೋಗ ಸಿಕ್ಕಿಲ್ಲವೆಂದು ಭೂಮಿ ನೀಡಿದ್ದ ರೈತ ಆತ್ಮಹತ್ಯೆ

ಈ ಸಂದರ್ಭದಲ್ಲಿ ಹೆಚ್ ಪದ್ಮಾ, ಮಲ್ಲನಗೌಡ, ಪ್ರಭಾಕರ್ ಪಾಟೀಲ್, ಬೂದೆಯ್ಯ ಸ್ವಾಮಿ, ಖಾಜಾ ಅಸ್ಲಂ, ಕರಿಯಪ್ಪ ಅಚ್ಚೋಳಿ, ಡಿ ಎಸ್ ಶರಣಬಸವ, ಅಣಪ್ಪ, ಮಹೇಶ್, ಶ್ರೀನಿವಾಸ ಕಲವಲದೂಡ್ಡಿ, ಬಸವಲಿಂಗ ಹಟ್ಟಿ, ವರಲಕ್ಷ್ಮೀ, ಅಂಜಿನೇಯ್ಯ ಕುರುಬದೂಡ್ಡಿ, ಮಾರೆಪ್ಪ ಹರವಿ,  ದಾಸ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...