ರಾಯಚೂರು | ಮಾನ್ವಿ ತಾಲೂಕಿನ ಗ್ರಾಮಗಳಿಗೆ ನಾಲೆ ನೀರು ಹರಿಸುವಂತೆ ಆಗ್ರಹ

Date:

ಮಾನ್ವಿ ತಾಲೂಕಿನ ಗೊಲದಿನ್ನಿ ಎಸ್ಕೇಪ್‌ನಿಂದ ರಾಜಲದಿನ್ನಿ, ನಸಲಾಪುರು, ಯರಮಲದೊಡ್ಡಿ, ಮುಷ್ಟೂರು, ರಂಗದಾಳ, ಬುದ್ದಿನ್ನಿ, ಮಲ್ಲಾಪುರು ಗ್ರಾಮಗಳಿಗೆ ತುಂಗಭದ್ರ ಎಡದಂಡೆ ಕಾಲುವೆ ನೀರು ಹರಿಸುವಂತೆ ಆಗ್ರಹಿಸಿ ಗ್ರಾಮಗಳ ರೈತರು ನಂದಿಹಾಳ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿದ್ದಾರೆ.

“ಜನ, ಜಾನುವಾರುಗಳಿಗೆ ನೀರಿಲ್ಲದ ಪರಸ್ಥಿತಿ ನಿರ್ಮಾಣವಾಗಿದೆ. ಕುಡಿಯಲು ನೀರಿಗಾಗಿ ಪರದಾಡುವಂತಾಗಿದೆ. ಅನೇಕ ಬಾರಿ ತಾಲೂಕು ಆಡಳಿತ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಮಳೆ ಬಾರದೆ ಬರ ಪರಸ್ಥಿತಿ ನಿರ್ಮಾಣವಾಗಿದೆ. ಗ್ರಾಮಗಳಿಗೆ ತುರ್ತಾಗಿ ನೀರು ಹರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಧರಣಿ ಸ್ಥಳಕ್ಕೆ ಮಾನ್ವಿ ತಹಸೀಲ್ದಾರ್ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತು-ಕತೆ ನಡೆಸಿದ್ದಾರೆ. ಅವರನ್ನು ತರಾಟೆಗೆ ತೆಗೆದುಕೊಂಡ ರೈತರು ‘ಸುಳ್ಳು ಭರವಸೆ ನೀಡುವದನ್ನು ನಿಲ್ಲಿಸಿ, ನೀರು ಹರಿಸಬೇಕು. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕು’ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡ ರಾಜಾ ರಾಮಚಂದ್ರ ನಾಯಕ, ಶಿವಶಂಕ್ರಯ್ಯಸ್ವಾಮಿ ರಾಜಲದಿನ್ನಿ. ಈರೆಶ ಪೂಜಾರಿ, ಹನುಮಂತಗೌಡ ಮುಷ್ಠೂರು, ರಾಮಕೃಷ್ಣ ಅಮರಾವತಿ, ಅಮರೇಶ ನಂದಿಹಾಳ, ಲಕ್ಷö್ಮಣ ನಂದಿಹಾಳ, ಬಸವರೆಡ್ಡಿ ಮಲದೊಡ್ಡಿ, ಮಲ್ಲಿಕಾರ್ಜುನಸ್ವಾಮಿ ಅಮರಾವತಿ, ಗಾಧಿಲಿಂಗಪ್ಪ, ಶರಣಪ್ಪಗೌಡ ಮುದ್ಲಾಪುರು, ಚನ್ನಪ್ಪಗೌಡ, ಕೃಷ್ಣಪ್ಪ ರಂಗದಾಳ, ಶರಣಪ್ಪಗೌಡ ರಂಗದಾಳ, ತಿಮ್ಮಯ್ಯ ಮದ್ಲಾಪೂರು, ಶರಣಪ್ಪ ನಾಯಕ ಸೇರಿದಂತೆ ವಿವಿಧ ಗ್ರಾಮಗಳ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗಿಯಾದರು.
ವಿವಿಧ ಗ್ರಾಮಗಳ ಹಲವರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...