ರಾಯಚೂರು | ಪೌರಕಾರ್ಮಿಕರ ಅಗತ್ಯತೆ ಈಡೇರಿಕೆಗೆ ಒತ್ತಾಯ

Date:

ಪೌರಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಿನಗೂಲಿ ಮತ್ತು ನೇರ ಪಾವತಿ ಪೌರ ಸೇವಾ ನೌಕರರ ಸಂಘದ ಕಾರ್ಯಕರ್ತರು ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

“ಪೌರಕಾರ್ಮಿಕರಿಗೆ ಖಾಯಂ ನೌಕರರಿ ಭರ್ತಿಯಾಗದೇ ಉಳಿದ 29 ಹುದ್ದೆಗಳಿಗೆ ನೇರ ವೇತನ, ಪೌರಕಾರ್ಮಿಕರನ್ನು ಕೂಡಲೇ ಭರ್ತಿ ಮಾಡುವುದು, ಸಿರವಾರ, ಕವಿತಾಳ, ದೇವದುರ್ಗ, ಲಿಂಗಸೂಗೂರು, ಹಟ್ಟಿಯಲ್ಲಿ ಪೌರಕಾರ್ಮಿಕರಾಗಿ ನೇಮಕ ಗೊಂಡವರಿಗೆ 05 ತಿಂಗಳ ವೇತನ ಪಾವತಿಸಲು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

“2007ರಲ್ಲಿ ಪೌರಕಾರ್ಮಿಕರೆಂದು ನೇಮಕಗೊಂಡು ಪೌರಕಾರ್ಮಿಕರ ಕೆಲಸ ಮಾಡದೇ ಪೌರಕಾರ್ಮಿಕರ ವೇತನ ಪಡೆಯುತ್ತಿರುವವರನ್ನು ಕೂಡಲೇ ಕೆಲಸದಿಂದ ವಜಾಗೊಳಿಸಬೇಕು. ಜಿಲ್ಲೆಯ ಹಲವು ತಾಲೂಕಗಳ ಪುರಸಭೆ, ಪಟ್ಟಣ ಪಂಚಾಯಿತಿಗಳಿಂದ ಪೌರಕಾರ್ಮಿಕ ಹುದ್ದೆಯಲ್ಲಿರುವವರನ್ನು ನಿಯುಕ್ತಿಗೊಳಿಸಬಾರದು. ರಾಯಚೂರು ನಗರಸಭೆ ವ್ಯಾಪ್ತಿಯ ಪಂಚಾಯಿತಿಗಳಲ್ಲಿ ಖಾಯಂ ಪೌರ ಕಾರ್ಮಿಕರು ಸೇರಿದಂತೆ ಇತರರ ವಿರುದ್ಧ ಕ್ರಮ ಕೈಗೊಳ್ಳಬೇಕು. ತಾಲೂಕು, ಪುರಸಭೆ, ಪಟ್ಟಣ ಬದಲಿ ಕಾರ್ಮಿಕರನ್ನು ನೇಮಿಸಿಕೊಳ್ಳಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೇರ ವೇತನ ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ, ಸಮವಸ್ತ್ರ, ಚಪ್ಪಲಿ, ಗ್ಲೌಸ್, ಮಾಸ್ಕ್‌ಗಳನ್ನು ಕೂಡಲೇ ಒದಗಿಸಬೇಕು. ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೇರ ವೇತನ ಪೌರಕಾರ್ಮಿಕರಿಗೆ ಆಕ್ಟೋಬರ್ 2022 ರಿಂದ ಮಾರ್ಚ್ 2023ರವರೆಗೆ ವ್ಯತ್ಯಾಸದ ವೇತನ ನೀಡಬೇಕು. ನಗರಸಭೆಯ 20 ಮಂದಿ ವಾಹನ ಚಾಲಕರಿಗೆ 4 ತಿಂಗಳ ವೇತನ ಪಾವತಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

“ನಗರಸಭೆಯ ಎಲೆಕ್ಟ್ರಿಕಲ್ ವಿಭಾಗದ ಕಾರ್ಮಿಕರಿಗೆ 4 ತಿಂಗಳ ವೇತನ ಪಾವತಿಸಬೇಕು. ಮರಣ ಹೊಂದಿದ ನೇರ ವೇತನ ಪೌರಕಾರ್ಮಿಕರ 6 ಕುಟುಂಬಗಳಿಗೆ ಅನುಕಂಪದ ಅಧಾರದ ಮೇರೆಗೆ ಪೌರಕಾರ್ಮಿಕರ ಹುದ್ದೆಗೆ ನೇಮಿಸಿಕೊಳ್ಳಬೇಕು. ನಿವೃತ್ತಿ ಹೊಂದಿದ ನೇರ ವೇತನ ಪೌರ ಕಾರ್ಮಿಕರ ಕುಟುಂಬಗಳಿಗೆ ಉದ್ಯೋಗ, ನಷ್ಟ ಪರಿಹಾರ ಒದಗಿಸಬೇಕು. ಕೆಲಸದಿಂದ ವಜಾಗೊಳಿಸಿದ ಪೌರಕಾರ್ಮಿಕರನ್ನು ಕೂಡಲೇ ನೇಮಿಸಿಕೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಸ್ ಮಾರೆಪ್ಪ ವಕೀಲ, ನರಸಿಂಹಲು, ಆರ್ ಹನುಮಂತಪ್ಪ, ಮುತ್ತಪ್ಪ, ಉರುಕುಂದಪ್ಪ ಸೇರಿದಂತೆ ಅನೇಕರು ಇದ್ದರು.

ವರದಿ ಮಾಹಿತಿ: ಸಿಟಿಜನ್‌ ಜರ್ನಲಿಸ್ಟ್‌, ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...