ರಾಯಚೂರು | ಸರ್ಕಾರಿ ಪ್ರೌಢಶಾಲೆಗೆ ಮೀಸಲಿಟ್ಟ ಜಾಗ ಒತ್ತುವರಿ; ತೆರವಿಗೆ ಆಗ್ರಹ

Date:

ಸರ್ಕಾರಿ ಪ್ರೌಢಶಾಲೆಗೆ ಮೀಸಲಿಟ್ಟಿದ್ದ ಜಾಗವನ್ನು ಅತಿಕ್ರಮಣ ಮಾಡಿರುವುದನ್ನು ಕೂಡಲೇ ತೆರವುಗೊಳಿಸಬೇಕು ಎಂದು ಆಲ್ ಇಂಡಿಯಾ ರಾಹುಲ್‌ ಗಾಂಧಿ ಬ್ರಿಗ್ರೇಡ್ ರಾಯಚೂರು ಜಿಲ್ಲಾ ಕಾರ್ಯದರ್ಶಿ ಅಂಬಾಜಿ ಮೈದರಕರ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ನಗರದ ವಾರ್ಡ 28ರ ಸರ್ವೇ 384/1ಎ ಸಿಎ ನಿವೇಶನ ಸರ್ಕಾರಿ ಪ್ರೌಢಶಾಲೆಗೆ ಮೀಸಲಿಟ್ಟ ಜಾಗವನ್ನು ಒತ್ತುವರಿ ಮಾಡಿ ದೇವಸ್ಥಾನ ನಿರ್ಮಾಣ ಮಾಡಿದ್ದು, 15 ದಿನಗಳಲ್ಲಿ ತೆರವುಗೊಳಿಸದೇ ಹೋದಲ್ಲಿ ನಗರಸಭೆ ಮುಂದೆ ಹೋರಾಟ ನಡೆಸಲಾಗುವುದು” ಎಂದರು.

“ಎಲ್‌ಬಿಎಸ್ ನಗರದ ಸರ್ಕಾರಿ ಪ್ರೌಢಶಾಲೆಗೆ ಕಾಯ್ದಿರಿಸಿದ ಸ್ಥಳದಲ್ಲಿ ಅನಧಿಕೃತವಾಗಿ ಸಂತೋಷ ನಗರ ವಸತಿ ಬಡವಾಣೆಯ ಜಾಗದಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಈಗಾಗಲೇ ಅನೇಕ ಸಂಘಟನೆಗಳು ಶಾಸಕರು, ನಗರಸಭೆ, ಆರ್‌ಡಿಎಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಗರ ಶಾಸಕರು ತೆರವುಗೊಳಿಸುವದಾಗಿ ಹೇಳಿ ಮಾತು ಮರೆತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವರ ಹೆಸರಿನಲ್ಲಿ ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಅಡ್ಡಿ ಉಂಟು ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳು ಮಕ್ಕಳ ಸಂಖ್ಯೆ ಇಲ್ಲದೇ ಮುಚ್ಚುತ್ತಿರುವಾಗ ಇರುವ ಶಾಲೆಗೆ ಕಾಯ್ದಿರಿಸಿದ ಸ್ಥಳ ಅತಿಕ್ರಮಣವಾದರೂ ನಗರಸಭೆ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಕೂಡಲೇ ತೆರವುಗೊಳಿಸಿ ಶಾಲೆ ನಿವೇಶನ ಸರಹದ್ದು ನಿಗದಿಪಡಿಸಬೇಕು. ಇಲ್ಲದಿದ್ದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮುಟ್ಟಿನ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸವಾಗಬೇಕು: ಸಿಇಒ

ಈ ಸಂದರ್ಭದಲ್ಲಿ ನಗರ ಅಧ್ಯಕ್ಷ ಸಿದ್ದಲಿಂಗಯ್ಯ ಇಷಾನ ಅಹ್ಮದ್, ಮೋಸಿನ್ ಖಾನ್, ಅಮೀರ್  ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...