ರಾಯಚೂರು | ಸಿಂಧನೂರು ತಾಲೂಕನ್ನು ಬರಗಾಲವೆಂದು ಘೋಷಿಸುವಂತೆ ರೈತರ ಆಗ್ರಹ

Date:

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕನ್ನು ಬರಗಾಲವೆಂದು ಘೋಷಣೆ ಮಾಡುವುದರ ಜೊತೆಗೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

“ಸಿಂಧನೂರು ತಾಲೂಕು ನೀರಾವರಿ ಎಂದು ಭಾವಿಸಿ ಬರಗಾಲ ಘೋಷಣೆ ಮಾಡಿಲ್ಲ. ಸಮಗ್ರ ನೀರಾವರಿಗೆ ಸಿಂಧನೂರು ತಾಲೂಕು ಒಳಪಟ್ಟಿಲ್ಲ. 1.60 ಲಕ್ಷ ಎಕರೆ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿದ್ದು, 80 ಸಾವಿರ ಎಕರೆ ಪ್ರದೇಶ ಮಾತ್ರ ನೀರಾವರಿಗೆ ಒಳಪಟ್ಟಿದೆ. 40 ಸಾವಿರ ಎಕರೆ ಟೆಲೆಂಡ್ ಆಗಿದೆ. ಇದರಿಂದ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ” ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

“ಸಿಂಧನೂರು ತಾಲೂಕನ್ನು ಬರಗಾಲವೆಂದು ಘೋಷಣೆ ಮಾಡಬೇಕು. ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಸಾಲ ಕಟ್ಟದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಪರಿಹಾರ ನೀಡಬೇಕು. ರೈತರ ಸಾಲವನ್ನು ಮನ್ನಾ ಮಾಡಬೇಕು. ಬರಗಾಲ ಘೋಷಣೆಯಲ್ಲಿ ಭತ್ತ ಬೆಳೆಯನ್ನು ಪರಿಗಣಿಸಿಲ್ಲ. ಭತ್ತವೂ ನಷ್ಟವಾಗಿರುವುದರಿಂದ ಪರಿಗಣಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಿಳೆಯರ ಗುಂಪಿನ ಸಾಲ ಮನ್ನಾ ಮಾಡಬೇಕು, ಬೆಳೆಗಳ ತಾರತಮ್ಯ ಮಾಡದೇ ಸಂಪೂರ್ಣ ಎಲ್ಲ ಬೆಳೆಗಳನ್ನು ಪರಿಗಣಿಸಬೇಕು, ಮನರೇಗಾದಡಿ 200 ದಿನಗಳ ಮಾನವ ಕೆಲಸ ನೀಡಬೇಕು, ಕೃಷಿ ಪಂಪ್ ಸೆಟ್‌ಗಳಿಗೆ 18 ಗಂಟೆ ವಿದ್ಯುತ್ ಸರಬರಾಜು ಮಾಡಬೇಕು, ರೈತರ ಐಪಿ ಸೆಟ್‌ಗಳ ಆರ್‌ಆರ್ ನಂಬರ್‌ಗಳಿಗೆ ಆಧಾರ ನಂಬರ್ ಜೋಡಣೆ ರದ್ದುಪಡಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭದ್ರಾ ಬಲದಂಡೆ ನಾಲೆಗೆ ನೀರು ಹರಿಸಲು ಆಗ್ರಹ

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮಿನ್ ಪಾಷಾ ದಿದ್ದಗಿ, ರೈತ ಮುಖಂಡ ಲಕ್ಷ್ಮಣ ಗೌಡ ಕಡಗಂದೊಡ್ಡಿ, ಸಿ‌ ಎಚ್ ರವಿಕುಮಾರ್, ವೆಂಕಟೇಶ ರಾಜಲಬಂಡಾ, ಬಸವರಾಜ ಹಂಚಿನಾಳ, ಬಡೆಸಾಬ್, ರಮೇಶ, ಶಂಕರ, ಹುಲಿಗಪ್ಪ ಜಾಲಿಬೆಂಚಿ, ಬಸವರಾಜ ಸೇರಿದಂತೆ ಇತರರು ಇದ್ದರು.

ಸಿಟಿಜನ್ ಜರ್ನಲಿಸ್ಟ್ : ಹಫೀಜುಲ್ಲ ರಾಯಚೂರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...