ರಾಯಚೂರು | ಏಳನೇ ವೇತನ ಆಯೋಗ ಜಾರಿಗೆ ಸರ್ಕಾರಿ ನೌಕರರ ಆಗ್ರಹ

Date:

ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಸೇರಿದಂತೆ ಪ್ರಮಖ ಮೂರು ಬೇಡಿಕೆಗಳಿಗೆ ರಾಜ್ಯ ಸರ್ಕಾರ ಗಮನ ಸೆಳೆಯಲು ಹೋರಾಟ ಸೇರಿದಂತೆ ಹಲವು ಹಂತದಲ್ಲಿ ಪ್ರತಿಭಟನೆ ನಡೆಸಲು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಣ ಸಮಿತಿ ನಿರ್ಧರಿಸಿದೆ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಭೀಮಣ್ಣ ನಾಯಕ ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಏಳನೇ ವೇತನ ಆಯೋಗ ಜಾರಿಗೊಳಿಸಲು ಎರಡು ಬಾರಿ ಅವಧಿಯನ್ನು ವಿಸ್ತರಿಸಲಾಗಿದೆ. 13 ತಿಂಗಳಾದರೂ ಆಯೋಗ ವರದಿ ನೀಡಿಲ್ಲ. ಕೂಡಲೇ ಜಾರಿಗೆ ರಾಜ್ಯ ಸರ್ಕಾರ ಮುಂದಾಗಬೇಕು” ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಬಿರಾದಾರ ಮಾತನಾಡಿ, “ಮಂಡ್ಯದಲ್ಲಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಮಿತಿ ಸಭೆಯಲ್ಲಿ ಏಳನೇ ವೇತನ ಆಯೋಗ ಜಾರಿಗೊಳಿಸಲು ಸರ್ಕಾರಕ್ಕೆ ಮನವಿ ನೀಡಿ ಎಲ್ಲ ಶಾಸಕರುಗಳು, ವಿಧಾನಪರಿಷತ್ ಸದಸ್ಯರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಆರನೇ ವೇತನ ಆಯೋಗ ರಚಿಸಿ 8 ತಿಂಗಳಲ್ಲಿ ಅಲ್ಪಾವಧಿ ವರದಿ ಪಡೆದು ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಸೇರಿ ಅನೇಕ ಅನುಕೂಲ ಮಾಡಿಕೊಟ್ಟಿದ್ದರು. ಈಗಲೂ ಅವರೇ ಮುಖ್ಯಮಂತ್ರಿಯಾಗಿದ್ದು, ಏಳನೇ ವೇತನ ಆಯೋಗಕ್ಕೆ ಎರಡು ಬಾರಿ ಅವಧಿ ವಿಸ್ತರಣೆ ಮಾಡುತ್ತಿರುವುದು ವಿಳಂಬ ಧೋರಣೆಯಾಗಿದೆ. ಹಳೆ ಪಿಂಚಣಿ ಜಾರಿಗೊಳಿಸಲು ಅಪರ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದರೂ ಯಾವುದೇ ವರದಿ ನೀಡಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ತಿಪ್ಪೆಗಳಾಗಿದ್ದ ಕೆರೆಗಳಿಗೆ ಜೀವ ಕಳೆ ತುಂಬಿದ ಸ್ಥಳೀಯರು

“ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ 3 ಲಕ್ಷ ಮಂದಿ ನೌಕರರಿಗೆ ಇರುವ ಆತಂಕ ದೂರ ಮಾಡಲು ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಬೇಕು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ವ್ಯಾಪ್ತಿಗೆ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬ ವರ್ಗದವರಿಗೆ ನಗದು ರಹಿತ ಚಿಕಿತ್ಸೆ ಒದಗಿಸಲು ಆದೇಶ ನೀಡಲಾಗಿದೆಯಾದರೂ ಜಾರಿಗೊಂಡಿಲ್ಲ.‌ ಸರ್ಕಾರ ಕೂಡಲೇ ಜಾರಿಗೆ ಮುಂದಾಗಬೇಕು. ಕಾಲಕಾಲಕ್ಕೆ ವೇತನ ಭತ್ಯೆಗಳನ್ನು ಪರಿಷ್ಕರಣೆ ಮಾಡಬೇಕು. ಸರ್ಕಾರ 21 ದಿನಗಳ ಗಡುವಿನಲ್ಲಿ ಜಾರಿಗೆ ಮುಂದಾಗದೇ ಹೋದಲ್ಲಿ ಹೋರಾಟ ಅನಿವಾರ್ಯವಾಗುತ್ತದೆ” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಚಂದ್ರಶೇಖರ ಹೀರೆಮಠ, ಹನುಮಂತರಾಯ ಶಾಖೆ, ಅಯ್ಯನಗೌಡ ಐರೆಡ್ಡಿ, ಶ್ರೀಶೈಲಗೌಡ ಮಾನವಿ, ಭರತಕುಮಾರ, ಶರಣಪ್ಪ, ಲಿಂಗಪ್ಪ ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...