ರಾಯಚೂರು | ನಾಡಗೌಡರ ಕುಟುಂಬದ ಹೆಚ್ಚುವರಿ ಭೂಮಿ ಪಡೆಯುವ ಪ್ರಕರಣ; 100 ದಿನ ಪೂರೈಸಿದ ಧರಣಿ

Date:

ಜವಳಗೇರಾ ನಾಡಗೌಡರ ಕುಟುಂಬದ ಹೆಚ್ಚುವರಿ ಭೂಮಿಯನ್ನು ಸರ್ಕಾರ ವಶಪಡಿಸಿಕೊಂಡು ಭೂಹೀನ ಬಡ ಕುಟುಂಬಗಳಿಗೆ ಹಂಚಿಕೆ ಮಾಡಬೇಕೆಂದು ಒತ್ತಾಯಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಹಾಗೂ ಕರ್ನಾಟಕ ರೈತ ಸಂಘ (ಎಐಕೆಕೆಎಸ್) ನೇತೃತ್ವದಲ್ಲಿ ರಾಯಚೂರಿನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಯು ಶನಿವಾರಕ್ಕೆ 100 ದಿನ ಪೂರೈಸಿದೆ. ಈ ಹಿನ್ನೆಲೆಯಲ್ಲಿ 100 ಪಂಜುಗಳೊಂದಿಗೆ ಬೃಹತ್ ಮೆರವಣಿಗೆ ನಡೆಸಸಿದರು.

ನಗರದ ಯಮನೂರಪ್ಪ ದರ್ಗಾದಿಂದ ಆರಂಭಗೊಂಡ ಪಂಜಿನ ಮೆರವಣಿಗೆ ಹಿರೇಹಳ್ಳ ಸೇತುವೆ, ಕಿತ್ತೂರುರಾಣಿ ಚೆನ್ನಮ್ಮ ವೃತ್ತ, ಕನಕದಾಸ ವೃತ್ತ, ಸಾರ್ವಜನಿಕ ಆಸ್ಪತ್ರೆ ರಸ್ತೆ ಮೂಲಕ ಮಹಾತ್ಮ ಗಾಂಧಿ ವೃತ್ತಕ್ಕೆ ತಲುಪಿತು. ಪಂಜುಗಳನ್ನು ಹಿಡಿದುಕೊಂಡೇ ಸರ್ಕಾರ ಹಾಗೂ ನಾಡಗೌಡರ ವಿರುದ್ಧ ಘೋಷಣೆ ಕೂಗಿದರು.

ರಾಜ್ಯ ಸಮಿತಿ ಸದಸ್ಯ ಎಂ ಗಂಗಾಧರ್ ಮಾತನಾಡಿ, “100 ದಿನಗಳ ಹೋರಾಟಕ್ಕೆ ರಾಜ್ಯ ಸರ್ಕಾರದಿಂದ ಸ್ಪಂದನೆ ಇಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರವೇ ಜಾರಿಗೆ ತಂದ ಭೂ ಸುಧಾರಣೆ ಕಾಯ್ದೆ ಬಗ್ಗೆ ದಿವ್ಯ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಅಧಿಕಾರಿಗಳು ಜಮೀನ್ದಾರರ ಪಕ್ಕಾ ಖಾಸಗಿ ಏಜೆಂಟಾಗಿ ವರ್ತಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರರು ಮೌನ ವಹಿಸಿ, ನಾಡಗೌಡರ ಬೆಂಬಲಕ್ಕೆ ನಿಂತಿದ್ದರಿಂದ ಭೂಹೀನರ ಹೋರಾಟಕ್ಕೆ ಅಧಿಕಾರಿಗಳೇ ಕಂಟಕರಾಗಿದ್ದಾರೆ” ಎಂದು ದೂರಿದರು.

“ಜವಳಗೇರ ಭೂ ಪ್ರಕರಣ ಸೇರಿದಂತೆ ಜಿಲ್ಲೆಯ ಎಲ್ಲ ಹೆಚ್ಚವರಿ ಭೂ ಪ್ರಕರಣಗಳ ಮರು ವಿಚಾರಣೆಗೆ ಅವಕಾಶ ಕಲ್ಪಿಸಲು ಕರ್ನಾಟಕ ಭೂ ಸುಧಾರಣೆ ಕಾಯ್ದೆ 1961 ಸೆಕ್ಷನ್- 122(ಎ)ಗೆ ತಿದ್ದುಪಡಿ ತರಬೇಕು. ಜವಳಗೇರ ಭೂ ಪ್ರಕರಣವನ್ನು ಶೀಘ್ರಗತಿಯಲ್ಲಿ ವಿಚಾರಣೆ ಮಾಡಿ ಮುಗಿಸಬೇಕು. ಸಿಂಧನೂರು ಸರ್ವೆ ನಂ.419 ಹಾಗೂ ಸುಲಾನಪೂರ ಸುಲ್ತಾನಪೂರ ಸರ್ವೆ ನಂ.186 ಸೇರಿದಂತೆ ಕರ್ನಾಟಕ ಸರ್ಕಾರ ಎಂದಿರುವ ಎಲ್ಲ ಹೆಚ್ಚವರಿ ಭೂಮಿಗಳನ್ನು ಈಗಾಗಲೇ ಅರ್ಜಿ ಸಲ್ಲಿಸಿದ ಭೂರಹಿತರಿಗೆ ವಿತರಿಸಬೇಕು” ಎಂದು ಒತ್ತಾಯಿಸಿದರು.

“ಸಿಂಧನೂರು ಮತ್ತು ಪಗಡದಿನ್ನಿ ಸೇರಿದಂತೆ ತಾಲೂಕಿನ ಇತರ ಸರ್ಕಾರಿ ಖಾರಿಜಖಾತಾ, ಕರ್ನಾಟಕ ಸರ್ಕಾರ ಹೆಚ್ಚುವರಿ ಭೂಮಿಗೆ ಅರ್ಜಿ ಸಲ್ಲಿಸಿದ ಎಲ್ಲ ಜಾತೀಯ ಭೂಹೀನ ಬಡವರಿಗೆ ಭೂ ಮಂಜೂರಾತಿ ನೀಡಬೇಕು. ಈ ವಿಷಯದಲ್ಲಿ ಕರ್ತವ್ಯ ಮರೆತು ಪ್ರತಿವಾದಿಗಳಿಗೆ ಸಹಕಾರ ನೀಡುತ್ತಿರುವ ತಹಶೀಲ್ದಾರ್ ಅರುಣ್ ದೇಸಾಯಿ ಅವರನ್ನು ಅಮಾನತುಗೊಳಿಸಬೇಕು. ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು” ಎಂದು ಆಗ್ರಹಿಸಿದರು.‌

ಈ ಸುದ್ದಿ ಓದಿದ್ದೀರಾ? ಧಾರವಾಡ | ನಕಲಿ ವೈದ್ಯನನ್ನು ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ ಲಾಡ್

“ನಾಡಗೌಡರ ಪರವಾಗಿ ವಕಾಲತ್ತು ವಹಿಸಿರುವ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಕಂಡಲ್ಲಿ ಘೇರಾವ್ ಹಾಕಿ ಪ್ರತಿಭಟಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಅಜೀಜ್ ಜಾಗಿರದಾರ, ಆದಿ ನಗನೂರು, ಅಮೀರ್ ಅಲಿ ಸೇರಿದಂತೆ ಇತರರು ಇದ್ದರು .

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...