ರಾಯಚೂರು | ಕೆಎಸ್‌ಆರ್‌ಟಿಸಿ ಬಸ್‌ ಅಪಘಾತ; 32 ಮಂದಿಗೆ ಗಾಯ, ನಿರ್ವಾಹಕ ಸೇರಿ ಐವರು ಗಂಭೀರ

Date:

ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ 32 ಮಂದಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದ ಬಳಿ ನಡೆದಿದೆ. ಗಾಯಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕೆಎಸ್‌ಆರ್‌ಟಿಸಿ ಬಸ್ ಸಿಂಧನೂರಿನಿಂದ ಅಂಕಲಿಮಠದ ಕಡೆಗೆ ತೆರಳುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಸ್‌ ನಿರ್ವಾಹಕ ಸೇರಿದಂತೆ ಐವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಕೂಡಲೇ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ ಪುಟ್ಟ ಗಾಯಗಳಾದವರನ್ನು ರಾಯಚೂರಿನ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪತ್ನಿ ಹತ್ಯೆಗೈದು ಪತಿ ಆತ್ಮಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಸ್ತೆ ಬದಿ ನಿಲ್ಲಿಸಿದ ಲಾರಿಗೆ ಚಾಲಕನು ಇಂಡಿಕೇಟರ್‌ ಹಾಕದಿರುವುದೇ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದೆ. ಲಾರಿ ಚಾಲಕನು ಇಂಡಿಕೇಟರ್‌ ಹಾಕದೆ ಲಾರಿಯನ್ನು ನಿಲ್ಲಿಸಿದ್ದಾನೆ. ಬಸ್‌ ಎದುರಿಗೆ ಮತ್ತೊಂದು ಲಾರಿ ಬಂದಿದ್ದು, ಸೈಡ್‌ ಕೊಡಲು ಹೋದಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್‌ ನಜ್ಜುಗುಜ್ಜಾಗಿದೆ. ಸಿಂಧನೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...