ರಾಯಚೂರು | ದಲಿತ ಹಕ್ಕುಗಳ ಸಮಿತಿಯಿಂದ ಕೋಟಿ ಸಹಿ ಸಂಗ್ರಹ ಚಳವಳಿ

Date:

ದಲಿತರಿಗೆ ಸಾಮಾಜಿಕ ಆರ್ಥಿಕ, ರಾಜಕೀಯ ಸಮಾನತೆಗೆ ಸರ್ಕಾರಗಳು ಮುಂದಾಗಲಿ ಎಂದು ವಿಮಾ ನೌಕರರ ಸಂಘದ ವಿಭಾಗೀಯ ಕಾರ್ಯದರ್ಶಿ ಎಂ.ರವಿ ಒತ್ತಾಯಿಸಿದ್ದಾರೆ.

ರಾಯಚೂರಿನ ಹರಿಜನವಾಡ ಬಡಾವಣೆಯಲ್ಲಿ ದಲಿತ ಹಕ್ಕುಗಳ ಸಮಿತಿ ನಡೆಸಿದ ದಲಿತರ ಹಕ್ಕುಗಳ ಈಡೇರಿಕಾಗಿ ಆಯೋಜಿಸಿ ಸಹಿ ಸಂಗ್ರಹ ಚಳುವಳಿಯಲ್ಲಿ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75ವರ್ಷವಾದರೂ ದೇಶವು ಇಂದಿಗೂ ಅನಿಷ್ಠ ಜಾತಿ ಪದ್ಧತಿಯಿಂದ ಮುಕ್ತವಾಗಿಲ್ಲ. ವಿಶೇಷವಾಗಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ಅಧಿಕಾರಕ್ಕೆ ಬಂದ ದಿನದಿಂದ ದೇಶದ ಸಂವಿಧಾನಾತ್ಮಕ ಹಕ್ಕುಗಳು ಕಣ್ಮರೆಯಾಗುತ್ತಿವೆ. ಜಾತಿ-ತಾರತಮ್ಯ ಜಾತಿಭೇದವನ್ನು ವ್ಯವಸ್ಥಿತವಾಗಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದೂ ಧರ್ಮದ ಹೆಸರಿನಲ್ಲಿ ಅಸ್ಪೃಶ್ಯತೆಯನ್ನು ಜೀವಂತವಾಗಿ ಇಡಲಾಗುತ್ತಿದೆ. ದಲಿತ ಸಮುದಾಯಗಳಿಗೆ ಸ್ವಾಭಿಮಾನದ ಬದುಕನ್ನು ನಿರಾಕರಿಸಲಾಗುತ್ತಿದೆ. ಇವುಗಳ ವಿರುದ್ಧ ಡಿಎಸ್‌ಎಸ್, ದಲಿತ ಹಕ್ಕುಗಳ ಸಮಿತಿ, ಹಲವು ದಲಿತ ಪರ ಸಂಘಟನೆಗಳು, ಕೂಲಿಕಾರ, ರೈತ ಸಂಘಟನೆಗಳು ಸೇರಿ ದಲಿತರ ಸಾಮಾಜಿಕ ರಾಜಕೀಯ ಸಮಾನತೆಗಾಗಿ ಡಿ.04ರಂದು ಅಖಿಲ ಭಾರತ ಸಾಮಾವೇಶ ಮತ್ತು ನ.16ರಂದು ರಾಜ್ಯ ಮಟ್ಟದ ಸಮಾವೇಶಗಳನ್ನು ನಡೆಸುವ ಮೂಲಕ ಒಂದು ಕೋಟಿ ಸಹಿ ಸಂಗ್ರಹ ಮೂಲಕ ದೇಶದ ಸಾವಿರಾರು ಜನರನ್ನು ಚಳುವಳಿಗೆ ಇಳಿಸಲು ಮುಂದಾಗಿರುವುದು ಅಂತ್ಯಂತ ಒಳ್ಳೆಯ ಬೆಳೆವಣಿಗೆ ಎಂದರು.

ಮುಖ್ಯ ಅತಿಥಿಯಾಗಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ.ಜಿ. ವಿರೇಶ್, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಡಿ.ಎಸ್. ಶರಣಬಸವ ಮತ್ತು ನವರತ್ನ ಯುವಕ ಸಂಘಟನೆಯ ಮುಖಂಡ ಕೆ.ಪಿ.ಅನೀಲ್ ಕುಮಾರ್‌ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಎಚ್.ಪದ್ಮಾ ಪ್ರಾಸ್ತವಿಕವಾಗಿ ಮಾತನಾಡಿದರು.

ಈಶ್ವರಮ್ಮ, ಮಾರುತಿ, ಪಾರ್ವತಿ, ಆಶಾ ಸೇರಿ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಹಿ ಸಂಗ್ರಹ ಚಳುವಳಿಯ ಭಾಗವಾಗಿ ಸುಮಾರು 400ಕ್ಕೂ ಹೆಚ್ಚು ಸಹಿ ಮನೆಮನೆಗಳಿಗೆ ತೆರಳಿ ಸಂಗ್ರಹ ಮಾಡಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...