ರಾಯಚೂರು | ದೇವದಾಸಿಯರ ಧರಣಿಗೆ ಅಧಿಕಾರಿಗಳಿಂದ ಸ್ಪಂದನೆ; ಕಾರ್ಯರೂಪಕ್ಕೆ ತರುವಂತೆ ಧರಣಿನಿರತರ ಪಟ್ಟು

Date:

ಮಾಜಿ ದೇವದಾಸಿ ಮಹಿಳೆಯರ ಮಾಸಾಶನ ಮತ್ತು ಸಮೀಕ್ಷೆಯಿಂದ ಬಿಟ್ಟು ಹೋದ ದೇವದಾಸಿಯರನ್ನು ಪಟ್ಟಿಗೆ ಸೇರಿಸುವುದಾಗಿ ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ಭರವಸೆಯ ಪತ್ರ ನೀಡಿದ್ದು, ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದ್ದಾರೆ.

ದೇವದಾಸಿ ಮಹಿಳೆಯರಿಗೆ ಬಾಕಿ ಪಿಂಚಣಿ ನೀಡುವುದು ಹಾಗೂ ಮಕ್ಕಳಿಗೆ ಶಿಷ್ಯವೇತನ ನೀಡುವುದು ಸೇರಿದಂತೆ ಹಲವು ಬೇಡಿಕೆಗೆ ಆಗ್ರಹಿಸಿ ರಾಜ್ಯ ಮಹಿಳಾ ಒಕ್ಕೂಟ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಸ್ಪಂದಿಸಿದ್ದು, ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ನೀಡಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಜಿ ದೇವದಾಸಿ ಮಹಿಳೆಯರ ಮಾಸಾಶನವನ್ನು ಪ್ರತಿ ಮಾಹೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಡಿಇಟಿ ಮೂಲಕ ಪಾವತಿಸುತ್ತಿದ್ದು, ಸೆಪ್ಟೆಂಬರ್ ಮತ್ತು ಅಕ್ಟೋಬರ್ ಮಾಹೆಯ ಮಾಸಾಶನವನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶನಾಲಯಕ್ಕೆ ಬಿಲ್ಲನ್ನು ಸೃಜಿಸಿ ಖಜಾನೆ-2ಕ್ಕೆ ಪಾವತಿಗಾಗಿ ಕಳುಹಿಸಿದ್ದು, ಖಜಾನೆ-2ರಲ್ಲಿ ತಾಂತ್ರಿಕ ತೊಂದರೆಯಿಂದಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಮಾಸಾಶನ ಜಮೆ ಆಗಿಲ್ಲದಿರುವುದು ಕಂಡುಬಂದಿದೆ. ಸಮಸ್ಯೆಯನ್ನು ಪರಿಹರಿಸಲು ಖಜಾನೆ -2ರವರಿಗೆ ತಿಳಿಸಲಾಗಿದ್ದು, ಎರಡ್ಮೂರು ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

“ಸಮೀಕ್ಷಾ ಪಟ್ಟಿಯಿಂದ ಹೊರಗುಳಿದ ಮಾಜಿ ದೇವದಾಸಿ ಮಹಿಳೆಯರಿಗೆ ಮರು ಸಮೀಕ್ಷೆಯನ್ನು ನಡೆಸಲು ಸರ್ಕಾರಕ್ಕೆ ಏಕ ಕಡತವನ್ನು ಸಲ್ಲಿಸಿದ್ದು ಸರ್ಕಾರದಿಂದ ಅನುಮೋದನೆ ದೊರೆತ ನಂತರ ಮರು ಸಮೀಕ್ಷೆ ಕೈಗೊಂಡು ಅರ್ಹತಾ ಮಾನದಂಡಗಳಂತೆ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಧರಣಿ

ದೇವದಾಸಿ ಮಹಿಳೆಯರ ಮಕ್ಕಳಿಗೆ ವಸತಿ ನಿಲಯ, ಪರಿಶಿಷ್ಟ ಜಾತಿಯ ವಿದ್ಯಾರ್ಥಿ ವೇತನ ಹೊರತುಪಡಿಸಿ ಹೆಚ್ಚುವರಿಯಾಗಿ ವಿದ್ಯಾರ್ಥಿ ವೇತನ ನೀಡಬೇಕು ಹಾಗೂ ಸ್ವಯಂ ಉದ್ಯೋಗ ಮಾಡಿಕೊಳ್ಳಲು ಸಬ್ಸಿಡಿ ಸಾಲ ನೀಡಬೇಕೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, “ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಮಾಜಿ ದೇವದಾಸಿ ಮಹಿಳೆಯರ ಜೀವನೋಪಾಯಕ್ಕಾಗಿ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದೇವದಾಸಿ ಪುನರ್ವಸತಿ ಯೋಜನೆಯಡಿ ಆದಾಯೋತ್ಪನ್ನಕರ ಚಟುವಟಿಕೆಯನ್ನು ಕೈಗೊಳ್ಳಲು ₹30,000 ಸಹಾಯಧನ ನೀಡಲಾಗುತ್ತಿದೆ” ಎಂದು ಉತ್ತರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಾಜ್ಯ ಮಹಿಳಾ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಧರಣಿ; ಅಹವಾಲು ಆಲಿಸಿದ ಅಧಿಕಾರಿಗಳು

ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು, “ಕೇವಲ ಆಶ್ವಾಸನೆಗಳ ಪತ್ರಗಳನ್ನು ನೀಡಿದರೆ ಸಾಲದು. ನಮ್ಮ ಬೇಡಿಕೆಗಳು ಸೂಕ್ತ ಕಾರ್ಯ ರೂಪಕ್ಕೆ ಬರಬೇಕು ಅಲ್ಲಿಯವರೆಗೆ ಧರಣಿ ನಿರಂತರವಾಗಿ ಮುಂದುವರೆಯುತ್ತದೆ” ಎಂದು ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...