ರಾಯಚೂರು | ರಾಮಮಂದಿರ ಉದ್ಘಾಟನೆ ಕಾರ್ಯದಲ್ಲಿ ಮೋದಿ ಭಾಗಿ; ಸಿಪಿಐಎಂಎಲ್‌ ಖಂಡನೆ

Date:

ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುವುದನ್ನು ಸಿಪಿಐ(ಎಂಎಲ್) ರೆಡ್‌ಸ್ಟಾರ್ ರಾಯಚೂರು ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ʼರಾಮಮಂದಿರ ಉದ್ಘಾಟನೆಗೆ ಮೋದಿಯವರು ಹೋಗಬಾರದುʼ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

“ಭಾರತ ಒಂದು ಸ್ವಾತಂತ್ರ್ಯ, ಸಾರ್ವಭೌಮ ಜಾತ್ಯತೀತ, ಸಮಾಜವಾದಿ ಆಶಯವನ್ನು ಹೊಂದಿರುವಂತಹ ದೇಶವಾಗಿದೆ. ದೇಶದ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಸಂವಿಧಾನಾತ್ಮಕವಾಗಿ ಕಾರ್ಯನಿರ್ವಹಿಸಬೇಕಾದ ಸರ್ಕಾರಗಳು ಒಂದು ಧರ್ಮದ ವಕಾಲತ್ತು ವಹಿಸುವುದು ದೇಶದ ಸಂವಿಧಾನಕ್ಕೆ ಮಾಡಿದ ಅಪಚಾರವಾಗಿದೆ. ಈಗಾಗಲೇ ದೇಶಾದ್ಯಂತ ನಿರುದ್ಯೋಗ, ಹಸಿವು, ಬಡತನ, ಬೆಂಬಲ ಬೆಲೆಯ ಕೊರತೆ, ಆರೋಗ್ಯದ ಸಮಸ್ಯೆ ಹೀಗೆ ಹಲವಾರು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಜನತೆಯ ನೆರವಿಗೆ ಬಾರದೆ ಜನರಿಂದ ಸಂಗ್ರಹಿಸಲ್ಪಟ್ಟ ತೆರಿಗೆಯ ಸಾವಿರಾರು ಕೋಟಿ ರೂಪಾಯಿ ಹಣವನ್ನು ಮಂದಿರ ಕಟ್ಟುವುದಕ್ಕೆ ಬಳಸುವುದೂ ಕೂಡ ಸಂವಿಧಾನದ ಉಲ್ಲಂಘನೆಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತ ವಿರೋಧಿ, ಕಾರ್ಮಿಕ ವಿರೋಧಿ, ಜಾತ್ಯತೀತ ವಿರೋಧಿ, ಆದಿವಾಸಿ ವಿರೋಧಿ ಹಾಗೂ ದಲಿತ, ಅಲ್ಪಸಂಖ್ಯಾತರ ವಿರೋಧಿ ನೀತಿಗಳನ್ನು ಜಾರಿ ಮಾಡುತ್ತಲೇ ಬಂದಿದ್ದು, ದೇಶದ ಸಂಪನ್ಮೂಲಗಳನ್ನು ಹಾಗೂ ಸೇವಾ ವಲಯಗಳನ್ನು ಕಾರ್ಪೊರೇಟರ್ ಲಾಭಕ್ಕೆ ತಕ್ಕಂತೆ ಖಾಸಗೀಕರಿಸುತ್ತಾ, ದೇಶದ ಅಭಿವೃದ್ಧಿಗೆ ಮಾರಕವಾದ ನೀತಿಗಳನ್ನು ಅನುಸರಿಸುತ್ತಿದೆ. ಒಂದೆಡೆ ಬಂಡವಾಳಿಗರ ಬಂಡವಾಳ ದುಪ್ಪಟ್ಟಾಗುತ್ತಿದ್ದು, ಕೂಲಿ ಕಾರ್ಮಿಕರ ರೈತರ ಬದುಕು ಹೀನಾಯವಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಟ್ಯಾಕ್ಸಿ ಲಾರಿ ಚಾಲಕರ ಕಾರ್ಮಿಕ ವಿರೋಧಿ ರಿಲಯನ್ಸ್ ಎಸ್‌ಆರ್ ಎಂಬ ಕಂಪನಿಗಳ ಪರವಾದ ವಿದೇಯಕವನ್ನು ಮಂಡಿಸುವುದರ ಮೂಲಕ ಇದೀಗ ಅಮಾಯಕ ಚಾಲಕರನ್ನು ಬಲಿಕೊಡುವ ಕೆಲಸದಲ್ಲಿ ಕೇಂದ್ರ ಸರ್ಕಾರ ನಿರತವಾಗಿದೆ” ಎಂದು ಆರೋಪಿಸಿದರು.

“ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಸಲುವಾಗಿ ಹಿಂದೂ ಮೂಲಭೂತವಾದವನ್ನು ಗಟ್ಟಿಗೊಳಿಸುತ್ತಾ, ರಾಷ್ಟ್ರೀಯ ಸರಕು ಸಾಗಾಣಿಕೆಯ ಖಾಸಗೀಕರಣ ಹಾಗೂ ಮುಸ್ಲಿಂ ವಿರೋಧಿ ರಾಜಕಾರಣ ಷಡ್ಯಂತ್ರವಾಗಿದೆ. ಜತೆಗೆ ಮನೆ ಮನೆಗೆ ಅಕ್ಷತೆಯ ಹೆಸರಲ್ಲಿ ಅಮಾಯಕ ಜನತೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಈ ತಂತ್ರಗಾರಿಕೆಯನ್ನು ಮಾಡುತ್ತಿದೆ” ಎಂದರು.

“ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿಗಳ ಜಾರಿಯಲ್ಲಿಯೇ ಮಗ್ನವಾಗಿದ್ದು, ಸಾಮಾನ್ಯ ಜನರ ಸಮಸ್ಯೆಗಳಿಗೆ ಹಾಗೂ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ಪೂರಕವಾದ ಯೋಜನೆಗಳನ್ನು ರೂಪಿಸುವಲ್ಲಿ ವಿಫಲವಾಗಿದೆ. ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡದೆ ತಮ್ಮದೇ ಪಕ್ಷದ ಕೆಲವೇ ಕೆಲವು ಮಂತ್ರಿಗಳು ಮತ್ತು ಜಾತಿವಾದಿ ಶಾಸಕರುಗಳ ನಿರ್ದೇಶನದಂತೆ ತಡೆಹಿಡಿಯಲಾಗಿದೆ. ಈ ಕೂಡಲೇ ರಾಜ್ಯ ಸರ್ಕಾರ ಜಾತಿಗಣತಿ ವರದಿಯನ್ನು ಜಾರಿ ಮಾಡಬೇಕು” ಎಂದು ಸಿಪಿಐ(ಎಂಎಲ್) ರೆಡ್‌ಸ್ಟಾರ್ ಪಕ್ಷ ರಾಯಚೂರು ಜಿಲ್ಲಾ ಸಮಿತಿ ಮುಖಂಡರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ರಾಮಮಂದಿರದಲ್ಲಿ ಮುಸ್ಲಿಂ‌ ಬಾಂಧವರಿಂದ ಪೂಜೆ

ಎಂ ಡಿ ಅಮೀರ್ ಅಲಿ, ಚಿನ್ನಪ್ಪ ಕೊಟ್ರಿಕಿ, ಜಿ ಅಮರೇಶ, ಎಂ ಗಂಗಾಧರ, ಆರ್ ಹುಚ್ಚರೆಡ್ಡಿ, ಮಲ್ಲಯ್ಯ ಕಟ್ಟಿಮನಿ, ಸೈಯದ್ ಅಬ್ಬಾಸ್ ಅಲಿ, ಜಿ ಅಡವಿರಾವ್, ಅಜೀಜ್ ಜಾಗೀರದಾರ್, ಆದಿ ನಗನೂರು, ಸಂತೋಷ ದಿನ್ನಿ, ತಿಪ್ಪರಾಜ ಗೆಜ್ಜಲಗಟ್ಟಾ, ವೆಂಕಟೇಶ ನಾಯಕ, ಯಲ್ಲಪ್ಪ ಊಟಕನೂರು, ಗಿರಿಲಿಂಗಸ್ವಾಮಿ ಸೇರಿದಂತೆ ಬಹುತೇಕ ಕಾರ್ಯತರ್ಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...