ರಾಯಚೂರು | ತಿಮ್ಮಾಪೂರ ಏತ ನೀರಾವರಿ ಯೋಜನೆಗೆ ರೈತರ ಭೂಮಿ ಖರೀದಿ

Date:

ತಿಮ್ಮಾಪೂರ ಏತ ನೀರಾವರಿ ಯೋಜನೆಗಾಗಿ ಭೂ ಖರೀದಿ ಮಾಡುತ್ತಿದ್ದು, ಎಕರೆಗೆ ಮಾರುಕಟ್ಟೆ ಬೆಲೆಯ ಮೂರರಷ್ಟು ಹಾಗೂ ರಸ್ತೆಬದಿ ಜಮೀನು ಇದ್ದಲ್ಲಿ ಶೇ.10ರಷ್ಟು ಹೆಚ್ಚುವರಿ ನೀಡಲಾಗುತ್ತದೆ ಎಂದು ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು.

ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, “ಸಿಂಧನೂರು ತಾಲೂಕಿನ ತಿಮ್ಮಾಪೂರ ಏತ ನೀರಾವರಿ ಯೋಜನೆಗೆ ಈಗಾಗಲೇ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು, ಈ ಯೋಜನೆಗೆ ಬೇಕಾಗುವ ಜಮೀನು ರೈತರಿಂದ ನೇರ ಖರೀದಿ ಮಾಡಲಾಗುತ್ತಿದೆ” ಎಂದರು.

“ತಿಮ್ಮಾಪೂರ ಏತ ನೀರಾವರಿ ಯೋಜನೆಗೆ 7 ರಿಂದ 8 ಗ್ರಾಮಗಳ ಮೂಲಕ ಏತ ನೀರಾವರಿಗೆ ಪೈಪ್‌ಲೈನ್ ಹಾದು ಹೋಗುತ್ತಿದೆ. ಈ ಗ್ರಾಮಗಳ ರೈತರಿಂದ ಯೋಜನೆಗೆ ಭೂಮಿ ಖರೀದಿ ಮಾಡಲಾಗುತ್ತಿದೆ. ಸಿಂಧನೂರು ತಾಲೂಕಿನ ಬಾದರ್ಲಿ ಹೋಬಳಿಯ ಒಳ ಬಳ್ಳಾರಿ, ಯದ್ದಲದೊಡ್ಡಿ, ತಿಮ್ಮಾಪೂರ, ಮಲದಿನ್ನಿ ತುಕನಟ್ಟಿ, ದಿಬ್ಬನಖೇಡ ಗ್ರಾಮಗಳ ಮೂಲಕ ಏತನೀರಾವರಿ ಹಾದು ಹೋಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೂಮಿ ಖರೀದಿಗೆ ಹಿಂದಿನ 3 ವರ್ಷದ ಮಾರುಕಟ್ಟೆ ಬೆಲೆ ಮತ್ತು ಮಾರ್ಗಸೂಚಿ ಬೆಲೆಯನ್ನು ನಿಗದಿಪಡಿಸಲಾಗುತ್ತಿದೆ. ಯದ್ದಲದೊಡ್ಡಿ ಗ್ರಾಮದ ವ್ಯಾಪ್ತಿಯಲ್ಲಿ ಕರಿ ಜಮೀನು ಎಕರೆಗೆ ₹5.6 ಲಕ್ಷ ಇದ್ದು, ಇದೀಗ 3 ಪಟ್ಟು ನೀಡಲಾಗುತ್ತಿದೆ. ಖುಷ್ಕಿ ಜಮೀನಿಗೆ ಎಕರೆಗೆ ₹5.8 ಲಕ್ಷ ಇದ್ದು, ೩ ಪಟ್ಟುಗೆ ಖರೀದಿ ಮಾಡಲಾಗುತ್ತದೆ. ಜತೆಗೆ ರಸ್ತೆ ಬದಿಯಲ್ಲಿ ಜಮೀನು ಇದ್ದಲ್ಲಿ ಶೇ.10ರಷ್ಟು ನೀಡಲಾಗುತ್ತಿದೆ” ಎಂದು ತಿಳಿಸಿದರು.

“ಈ ಯೋಜನೆಗೆ 1 ಎಕರೆಯೊಳಗೆ ಇರುವ ಜಮೀನಿನಲ್ಲಿ ಮಧ್ಯದಲ್ಲಿ ಪೈಪ್‌ಲೈನ್ ಹಾದು ಹೋದಲ್ಲಿ ಉಳಿದ ಭೂಮಿಯಲ್ಲಿ ಉಳುಮೆ ಮಾಡಲು ಸಾಧ್ಯವಿಲ್ಲವೆಂದು ರೈತರ ವಾದವಾಗಿದೆ. ವ್ಯರ್ಥ ಭೂಮಿಯನ್ನು ಖರೀದಿಗೆ ನೀಡಲು ಸಿದ್ದವಿದ್ದು, ರೈತರ ಒತ್ತಾಯದ ಮೇರೆಗೆ, ಈ ಕುರಿತು ನೀರಾವರಿ ನಿಗಮಕ್ಕೆ ಪತ್ರ ಬರೆದು ರೈತರು ಭೂಮಿ ಪಡೆಯಲು ಅಧಿಕಾರಿಗಳಿಗೆ ತಿಳಿಸಿದ್ದರು. ಈ ಯೋಜನೆಗೆ ಒಳಪಡಿವ ರೈತರ ಜಮೀನುಗಳ ಕೆಲ ಸರ್ವೆ ನಂಬರ್ ಬಿಟ್ಟು ಹೋಗಿದ್ದು, ಆ ರೈತರನ್ನು ಕರೆದು ಸರ್ವೆ ನಂಬರ್ ಪಟ್ಟಿಯಲ್ಲಿ ಸೇರಿಸಿ, ರೈತರ ಎದುರಲ್ಲೇ ಸರ್ವೆ ಮಾಡಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬ್ರಾಹ್ಮಣ ಮಹಿಳೆಯರು ಜನಿವಾರ ಧರಿಸುವುದಿಲ್ಲ – ಅವರೂ ಶೂದ್ರರೇ: ಭಗವಾನ್

7 ರಿಂದ 8 ಗ್ರಾಮಗಳು ಒಳಪಡುವ ಈ ಯೋಜನೆಯು ಅಯಾ ಗ್ರಾಮಗಳ ಮತ್ತು ಮಾರುಕಟ್ಟೆ ಬೆಲೆ ನಿಗದಿಯಂತೆ ಎಕರೆಗೆ 3ರಷ್ಟು ಹಾಗೂ ರಸ್ತೆ ಬದಿಯಲ್ಲಿರುವ ಜಮೀನುಗಳಿಗೆ ಶೇ.10ರಷ್ಟು ನಿಗದಿಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವೆಂಕರಾವ್ ನಾಡಗೌಡ, ಸಹಾಯಕ ಆಯುಕ್ತೆ ಮಹೆಬೂಬಿ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು, ರೈತರು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...