ರಾಯಚೂರು | ನವೋದಯ ಕಾಲೇಜು ಬಳಿ ಅಕ್ರಮ ಅಂಗಡಿಗಳ ತೆರವು; ಪಾಲಿಕೆಯ ಕಟ್ಟುನಿಟ್ಟಿನ ಕ್ರಮ

Date:

ನಗರದ ನವೋದಯ ಕಾಲೇಜುಗಳ ಅನಧೀಕೃತವಾಗಿ ಹಾಕಲಾಗಿದ್ದ ಹೋಟೆಲ್‌ಗಳು, ಅಂಗಡಿಗಳು ಸೇರಿದಂತೆ 20 ಕ್ಕೂ ಹೆಚ್ಚು ಅಂಗಡಿಗಳನ್ನು ಮಹಾನಗರ ಪಾಲಿಕೆಯಿಂದ ಜೆಸಿಬಿಗಳಿಂದ ತೆರವುಗೊಳಿಸಲಾಯಿತು.

ಕಳೆದ ಅನೇಕ ವರ್ಷಗಳಿಂದ ರಸ್ತೆಯ ಬದಿಯಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಹಾಕಿಕೊಂಡು ವ್ಯವಹರಿಸಲಾಗುತ್ತಿತ್ತು ಆದರೂ ಅನೇಕ ಬಾರಿ ಪಾಲಿಕೆ ತೆರವುಗೊಳಿಸಲು ನೋಟಿಸ್ ಸಹ ನೀಡಿದರು ಮಾನಸ ನಗರ ಸೇರಿದಂತೆ ಅನೇಕ ಬಡಾವಣೆಗಳಲ್ಲಿ ಜನವಾಸ ಮಾಡುತ್ತಿದ್ದು ಬಡಾವಣೆಗೆ ತೆರಳಲು ಸಹ ಸಮಸ್ಯೆಯಾಗಿತ್ತು. ಈ ವಿಷಯವು ಅತಿಕ್ರಮಿತ ಅಂಗಡಿಗಳನ್ನು ತೆರವುಗೊಳಿಸುವ ಕುರಿತಂತೆ ಹೈಕೋರ್ಟನಲ್ಲಿ ಸಹಪ್ರಕರಣ ವಿಚಾರಣೆ ಮುಂದುವರೆದಿತ್ತು. ಹೈಕೋರ್ಟ ಆದೇಶ ಹಾಗೂ ಜನಸಂಚಾರಕ್ಕೆ ಆಗುತ್ತಿರುವ ಅಡ್ಡಿಯ ಹಿನ್ನಲೆಯಲ್ಲಿ ಇಂದು ಪಾಲಿಕೆ ಅಧಿಕಾರಿಗಳು ತೆರಳಿ ಅಂಗಡಿಗಳನ್ನು ತೆರವುಗೊಳಿಸಿದರು.

ಕೆಲ ದಿನಗಳ ಹಿಂದೆಯಷ್ಟ ಜನದಟ್ಟಣೆಯಿಂದ ರಸ್ತೆಯಲ್ಲಿ ಅಪಘಾತಗಳು ಸಹ ಸಂಭವಿಸಿದ್ದವು. ಹೆದ್ದಾರಿ ರಸ್ತೆಗೆ ಹೊಂದಿಕೊಂಡಿರುವಂತೆ ಹಾಕಲಾಗಿರುವ ಅಂಗಡಿಗಳ ಕೆಲವರು ನಕಲಿ ದಾಖಲೆ ಸೃಷ್ಟಿಸಿ ಖಾಯಂ ಸ್ವರೂಪ ಕಟ್ಟಡಗಳನ್ನು ನಿರ್ಮಾಣ ಮಾಡಲು ಮುಂದಾಗಿದ್ದರು . ಪೊಲೀಸ್ ಇಲಾಖೆ ಹಾಗೂ ಹೈಕೋರ್ಟ ಆದೇಶದ ಮೇರೆಗೆ ತೆರವು ಕಾರ್ಯಚರಣೆ ಮುಂದುವರೆಸಲಾಯಿತು. ಅನೇಕ ವ್ಯಾಪಾರಸ್ಥರು ಪಾಲಿಕೆ ಕ್ರಮಕ್ಕೆ ವಿರೋಧಿಸಿ ಕಾಲಾವಕಾಶ ನೀಡಬೇಕೆಂದು ವಾದಿಸಿದರು. ಆದರೆ ಅಧಿಕಾರಿಗಳು ಅವಕಾಶ ನೀಡದೇ ತೆರವುಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡಾವಣೆ ಮುಖಂಡ ರವೀಂದ್ರ ಜಲ್ದಾರ ಮಾತನಾಡಿ, ಅನೇಕ ವರ್ಷಗಳಿಂದ ಅನಧಿಕೃತ ಅಂಗಡಿಗಳನ್ನು ಹಾಕಿರುವ ಕುರಿತು ನಿವಾಸಿಗಳು ಹೈಕೋರ್ಟನಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ ಆದೇಶದ ಮೇರೆಗೆ ತೆರವು ಕಾರ್ಯ ನಡೆಸಿರುವದು ಸ್ವಾಗತಾರ್ಹವಾಗಿದೆ. ನಗರಸಭೆ ಹಾಗೂ ಮಹಾನಗರ ಪಾಲಿಕೆಯಾದ ನಂತರವೂ ಅನೇಕ ಬಾರಿ ನೋಟಿಸ್ ಸಹ ನೀಡಲಾಗಿತ್ತು. ನಕಲಿ ದಾಖಲೆ ಸೃಷ್ಟಿಸಿರುವ ದೂರುಗಳು ಸಹ ಇವೆ. ಪಾಲಿಕೆ ಆಯುಕ್ತ ಜೋಬಿನ್ ಮಹೋಪಾತ್ರ ಇವರು ತೆರವಿಗೆ ಆದೇಶ ಹೊರಡಿಸಿದ್ದಾರೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ತೆರವು ಕಾರ್ಯ ನಡೆಸಲಾಗಿದೆ. ರಸ್ತೆ ಬದಿಯಲ್ಲಿ ಅಂಗಡಿಗಳ ವ್ಯವಹರಿಸುತ್ತಿರುವ ಪರಿಣಾಮ ಮೂರು ಜನ ಸಾವು ಸಂಭವಿಸಿತ್ತು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಸಹ ತೆರವಿಗೆ ಸೂಚನೆ ನೀಡಿದ್ದರು ಎಂದರು. ನೇತಾಜಿ ನಗರ ಪೊಲೀಸರ ಬಂದೋಬಸ್ತನಲ್ಲಿ ತೆರವು ಕಾರ್ಯಚರಣೆ ನಡೆಸಲಾಯಿತು. ಅನಧಿಕೃತವಾಗಿರುವ ಕಟ್ಟಡಗಳು ಹಾಗೂ ರಸ್ತೆ ಅತಿಕ್ರಮಿತ ಪ್ರದೇಶಗಳನ್ನು ತೆರವುಗೊಳಿಸುವ ಕಾರ್ಯಚರಣೆ ಮುಂದುವರೆಸಲಾಗುತ್ತದೆ ಎಂದು ಪಾಲಿಕೆ ಸಿಬ್ಬಂದಿಗಳು ಹೇಳಿದರು. ವ್ಯಾಪಾರಸ್ಥರು ಅಂಗಡಿಗಳ ತೆರವಿನಿಂದ ಹಿನ್ನಲೆಯಲ್ಲಿ ಕಂಗಾಲಾಗುವಂತಾಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...