ರಾಯಚೂರು | ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಆದೇಶ ಹಿಂಪಡೆಯಲು ಎಸ್‌ಎಫ್‌ಐ ಆಗ್ರಹ

Date:

ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರ ಸಾಮಾನ್ಯ ವರ್ಗಾವಣೆ ಆದೇಶವನ್ನು ತಾತ್ಕಾಲಿಕವಾಗಿ ರದ್ದುಪಡಿಸಬೇಕು ಎಂದು ಎಸ್‌ಎಫ್‌ಐ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಜಾಲಹಳ್ಳಿ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಸಾಂಕೇತಿಕವಾಗಿ ಧರಣಿ ನಡೆಸಿದರು.

“ಜಿಲ್ಲೆಯ 1,625 ಮಂಜೂರು ಹುದ್ದೆಗಳಿದ್ದು, ಪ್ರಸ್ತುತ 714 ಮಂದಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದರು. ಆದರೆ ವರ್ಗಾವಣೆ ಪ್ರತಿಕ್ರಿಯೆಯಲ್ಲಿ 373 ಶಿಕ್ಷಕರು ಬೇರೆ ಜಿಲ್ಲೆಗಳಿಗೆ ವರ್ಗಾವಣೆಗೊಂಡಿದ್ದು, 341 ಮಂದಿ ಶಿಕ್ಷಕರು ಮಾತ್ರ ಇದೀಗ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯಲ್ಲಿ 48,150 ವಿದ್ಯಾರ್ಥಿಗಳು, ಶಿಕ್ಷಣ ಪಡೆಯುತ್ತಿದ್ದಾರೆ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ವೇಳೆ ಸಾಮಾನ್ಯ ವರ್ಗಾವಣೆಯಲ್ಲಿ ಶಿಕ್ಷಕರು ಕರ್ತವ್ಯದಿಂದ ಬಿಡುಗಡೆಗೊಂಡರೆ ಮಕ್ಕಳ ಕಲಿಕಾ ಗುಣಮಟ್ಟ ತೀವ್ರ ಕುಂಠಿತಗೊಳ್ಳುತ್ತದೆ. ಮಕ್ಕಳು ಶಾಲೆಗೆ ಹೋಗದೆ ದುಡಿಯುವುದಕ್ಕೆ ಬೆಂಗಳೂರು ಪೂನಾದಂತಹ ನಗರ ಪ್ರದೇಶಗಳಿಗೆ ತಂದೆ ತಾಯಿ ಜೊತೆ ಹೋಗುತ್ತಾರೆ. ತಾಲೂಕಿನಲ್ಲಿ ಬಾಲಕಾರ್ಮಿಕತೆ ಹೆಚ್ಚಾಗುತ್ತಿದೆ. ಆದಕಾರಣ ಖಾಯಂ ಶಿಕ್ಷಕರು ನೇಮಕವಾಗುವವರೆಗೂ ಈ ಸಾಮಾನ್ಯ ವರ್ಗಾವಣೆ 2023ರ ಶಿಕ್ಷಕರ ಬಿಡುಗಡೆಯನ್ನು ತಡೆಹಿಡಿಯಬೇಕು” ಎಂದು ಒತ್ತಾಯಿಸಿದರು.

“ತಾಲೂಕಿನ 86 ಶಾಲೆಗಳಲ್ಲಿ ಶಿಕ್ಷಕ ಸಂಖ್ಯೆ ಶೂನ್ಯವಿದೆ. ಆ ಶಾಲೆಗಳ ಸ್ಥಿತಿ ಅಧಿಕಾರಿಗಳು ನಿರ್ವಹಣೆ ಮಾಡುತ್ತಾರೆ. ಎರವಲು ನೀಡಿದರೆ ಸರಿಯಾಗಿ ನಡೆಲು ಸಾಧ್ಯವಾಗುವುದಿಲ್ಲ. ಅತಿಥಿ ಶಿಕ್ಷಕರ ಮೇಲೆಯೇ ಶಾಲೆ ನಡೆಸುವುದು ಎಷ್ಟು ಸರಿ” ಎಂದು ಹೋರಾಟಗಾರರು ಪ್ರಶ್ನಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ, ಸಿಪಿಐ ಗುಂಡುರಾವ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸರ್ಕಾರದ ಅದೇಶದ ಪ್ರಕಾರ ವರ್ಗಾವಣೆಯಾಗಿದೆ. ಅದರೆ, ಮುಂದಿನ ಅದೇಶದವರೆಗೆ ಯಾವುದೇ ಶಿಕ್ಷಕರನ್ನು ಬಿಡುಗಡೆ ಮಾಡುವುದಿಲ್ಲ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಅಸಹಿಷ್ಣುತೆ ದೇಶವನ್ನು ಆಳುತ್ತಿದೆ: ಶೈಲಜಾ ಟೀಚರ್

ಹೋರಾಟಗಾರರು ಡಿಡಿಪಿಐ ಅವರು ಸ್ಥಳಕ್ಕೆ ಬರಬೇಕೆಂದು ಪಟ್ಟುಹಿಡಿದು‌ ಹೋರಾಟ ಮುಂದುವರಿಸಿದ್ದಾರೆ.
ಒಂದು ವೇಳೆ ನೀವು ಅವರನ್ನು ಬಿಡುಗಡೆಗೊಳಿಸಿದರೆ ತೀವ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಿಐಟಿಯು ಮುಖಂಡ ಶಬ್ಬೀರ್ ಜಾಲಹಳ್ಳಿ, ಎಸ್‌ಎಫ್‌ಐ ಮುಖಂಡ ಮಹಾಲಿಂಗ ದೊಡ್ಡಮನಿ, ನರಸಣ್ಣ ನಾಯಕ, ರಮೇಶ್ ವೀರಾಪುರ, ಭೀಮಣ್ಣ, ಬಸವರಾಜ್ ಗೋಪಳಪುರ, ರಾಜಶೇಖರ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...