ರಾಯಚೂರು | ಶಾರ್ಟ್‌ಸರ್ಕ್ಯೂಟ್‌ನಿಂದ ವಿದ್ಯಾರ್ಥಿ ಸಾವು

Date:

ವಿದ್ಯುತ್‌ ಶಾರ್ಟ್‌ಸರ್ಕ್ಯೂಟ್‌ನಿಂದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ರಾಮರೆಡ್ಡಿ ಕ್ಯಾಂಪಿನಲ್ಲಿ ನಡೆದಿದೆ.

ಭೀಮಾಶಂಕರ (20) ಮೃತ ದುದೈರ್ವಿ. ಆತ ಅನಿಕೇತನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ, ಕಾಲೇಜಿನಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮ ಮುಗಿಸಕೊಂಡು ರಾಮರೆಡ್ಡಿ ಕ್ಯಾಂಪಿಗೆ ತೆರಳಿದ್ದಾನೆ. ಸಂಜೆ ಗ್ರಾಮದಲ್ಲಿ ಬೀದಿ ದೀಪದ ಸಮಸ್ಯೆಯಾಗಿದ್ದರಿಂದ, ವಿದ್ಯುತ್‌ ಕನೆಕ್ಷನ್‌ ಸರಿಪಡಿಸಲು ಆತನನ್ನು ಗ್ರಾಮ ಪಂಚಾಯತಿ ಸಿಬ್ಬಂದಿ ವಿದ್ಯುತ್‌ ಕಂಬಕ್ಕೆ ಹತ್ತಿಸಿದ್ದರು ಎಂದು ಹೇಳಲಾಗಿದೆ.

ವಿದ್ಯುತ್‌ ದೀಪ ಬಲ್ಬ್‌ಅನ್ನು ಅಳವಡಿಸುವಾಗ ವಿದ್ಯುತ್ ಸ್ಪರ್ಶಗೊಂಡು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತದೇಹವನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೂಮಾಶಂಕರ ಅವರ ಸಾವಿನ ಸುದ್ದಿ ತಿಳಿದ ಅನಿಕೇತನ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಗ್ರಾಮ ಪಂಚಾಯತಿ ಮತ್ತು ಕೆಇಬಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆತನ ಸಾವಿಗೆ ಗ್ರಾಮ ಪಂಚಾಯತಿ ಮತ್ತು ಕೆಇಬಿ ಅಧಿಕಾರಿಗಳೆ ಕಾರಣವೆಂದು ಆರೋಪಿಸಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...