ರಾಯಚೂರು | ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

Date:

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ಮೆಟ್ರಿಕ್ ಪೂರ್ವ ಬಾಲಕಿಯರ ಸರ್ಕಾರಿ ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದಿದೆ.

ಮಾನ್ವಿಯ ಫಾತೀಮಾ ನಗರದಲ್ಲಿರುವ ಹಾಸ್ಟೆಲ್‌ನಲ್ಲಿ ಭಾನುವಾರ ವಿದ್ಯಾರ್ಥಿಗಳಿಗೆ ಇಡ್ಲಿ ನೀಡಲಾಗಿತ್ತು. ಅದನ್ನು ತಿಂದವರಲ್ಲಿ 14 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಅವರೆಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಗೆ ಶಾಸಕ ಹಂಪಯ್ಯ ನಾಯಕ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹೇಶ ಪೂತ್ತಾರು ಭೇಟಿ ನೀಡಿದ್ದು, ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಿಗ್ಗೆ ಉಪಾಹಾರಕ್ಕೆಂದು ನೀಡಿದ ಇಡ್ಲಿ ಮತ್ತು ಚಟ್ನಿ ಹಾಗೂ ಮಧ್ಯಾಹ್ನ ಊಟಕ್ಕೆ ನೀಡಿದ ಪಲಾವ್ ಅನ್ನ ಕೂಡಾ ಸರಿ ಇರಲಿಲ್ಲ ಎಂದು ಅಡುಗೆಯವರಿಗೆ ತಿಳಿಸಿದ್ದೆವು. ಆದರೂ, ಯಾರೂ ನಿಗಾ ವಹಿಸುತ್ತಿಲ್ಲೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಘಟನೆ ನಡೆದರೂ ಹಾಸ್ಟೆಲ್‌ಗೆ ಬಾರದ ಸಮಾಜ ಕಲ್ಯಾಣಾಧಿಕಾರಿ ವಿಜಯಕುಮಾರ ಹಾಗೂ ವಾರ್ಡನ್ ಪಾರ್ವತಿ ವಿರುದ್ದ ವಿದ್ಯಾರ್ಥಿನಿಯರು ಹಾಗೂ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...