ರಾಯಚೂರು | ಸೇಂದಿ ದಂಧೆ; ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Date:

ಸೇಂದಿ ದಂಧೆ ನಡೆಸುತ್ತಿದ್ದ ಎರಡು ಸ್ಥಳಗಳ ಮೇಲೆ ಅಬಕಾರಿ ಇಲಾಖೆ ಮತ್ತು ಪೊಲೀಸರು ದಾಳಿ ನಡೆಸಿ ದಂಧೆ ನಡೆಸುತ್ತಿದ್ದವರನ್ನು ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯಿಂದ ವರದಿಯಾಗಿದೆ.

ರಾಯಚೂರು ತಾಲೂಕಿನ ಅಸ್ಕಿಹಾಳ ಹಾಗೂ ಯಕ್ಲಾಸಪುರದಲ್ಲಿ ನಡೆದ ಪ್ರತ್ಯೇಕ ದಾಳಿಯಲ್ಲಿ ಓರ್ವ ವೃದ್ಧೆ ಹಾಗೂ ತಾಯಿ-ಮಗಳ ಸೇಂದಿ ದಂಧೆ ನಡೆಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಯಕ್ಲಾಸಪುರದ ನಿರ್ಮಾಣ ಹಂತದ ಮನೆಯಲ್ಲಿ ಬ್ಯಾರಲ್​ಗಟ್ಟಲೆ ಸೇಂದಿ ಪತ್ತೆಯಾಗಿದೆ. ಅಬಕಾರಿ ಸಿಬ್ಬಂದಿ ದಾಳಿ ವೇಳೆ ಪ್ರೇಮಾ ಎಂಬಾಕೆ ಸಿಕ್ಕಿಬಿದ್ದಿದ್ದಾಳೆ. ತಾಯಿ ಇಂದ್ರಮ್ಮಳ ಜೊತೆ ಪ್ರೇಮಾ ಸೇಂದಿ ಮಾರಾಟ ಮಾಡುತ್ತಿದ್ದಳು. ಮತ್ತೊಂದು ಕಡೆ, ಪ್ಲಾಸಿಕ್ ಪ್ಯಾಕೆಟ್​ಗಳಲ್ಲಿ ಮಾರಾಟಕ್ಕೆ ಸಿದ್ಧವಾಗಿದ್ದ ಸೇಂದಿಯೂ ಪತ್ತೆಯಾಗಿದೆ. ಪರಿಶೀಲನೆ ವೇಳೆ ಅಬಕಾರಿ ಸಿಬ್ಬಂದಿ ಜೊತೆಗೆ ಆರೋಪಿ ಪ್ರೇಮಾ ವಾಗ್ವಾದ ಕೂಡ ನಡೆಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳು ಮನೆಯಲ್ಲಿ ನಾಯಿ ಸಾಕುವ ಮೂಲಕ ಅಪರಿಚಿತರು ಬರುವ ಮಾಹಿತಿ ಪಡೆಯುತ್ತಿದ್ದರು. ಸದ್ಯ ಪ್ರೇಮಾಳನ್ನು ವಶಕ್ಕೆ ಪಡೆದು 80 ಲೀಟರ್ ಸೇಂದಿ ಜಪ್ತಿ ಮಾಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಅಸ್ಕಿಹಾಳ ಗ್ರಾಮದ ವೃದ್ಧೆ ತಿಮ್ಮಮ್ಮ ಎಂಬವರನ್ನು ವಶಕ್ಕೆ ಪಡೆದು, ಮನೆಯಲ್ಲಿದ್ದ ಸುಮಾರು 80 ಲೀಟರ್ ಸೇಂದಿ ಜಪ್ತಿ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಎಟಿಎಂ ಹಣ ದೋಚಲು ಯತ್ನ; ಸಾವಿರಾರು ರೂಪಾಯಿ ಬೆಂಕಿಗಾಹುತಿ

ಸಿಎಚ್ ಪೌಡರ್​ನಿಂದ ತಯಾರಿಸಲಾಗಿರುವ ಸೇಂದಿ ಕುಡಿದು ಯುವ ಜನತೆ ಹಾಳಾಗುತ್ತಿದ್ದು, ಕೂಲಿ ಕಾರ್ಮಿಕ ವರ್ಗದ ಜನ, ಕೆಲ ರೈತಾಪಿ ಜನರೇ ಹೆಚ್ಚಾಗಿ ಸೇಂದಿ ಸೇವನೆ ಮಾಡುತ್ತಿದ್ದಾರೆ. ಅತಿ ಕಡಿಮೆ‌ ಬೆಲೆಗೆ ಸಿಗುವ ಸೇಂದಿಗೆ ಜನರು ದಾಸರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಾಯಿ ಸಮಿತಿ ಸಭೆಯಲ್ಲಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ಸೂಚಿಸಿದ್ದರು.

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಅಬಕಾರಿ ಇಲಾಖೆಯಿಂದ ರಾತ್ರೋ ರಾತ್ರಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ವಶಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...