ರಾಯಚೂರು | ಶಿಶು ಪಾಲನಾ ಕೇಂದ್ರದ ಆರೈಕೆದಾರರಿಗೆ ತರಬೇತಿ

Date:

ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಶಿಶು ಪಾಲನಾ ಕೇಂದ್ರಗಳನ್ನು ಆರಂಭಿಸುತ್ತಿದೆ. ತರಬೇತಿ ಪಡೆದವರು ಶಿಶು ಪಾಲನೆ ಕೇಂದ್ರದಲ್ಲಿ ಎಲ್ಲರ ಮಕ್ಕಳನ್ನು ಲಾಲನೆ ಪಾಲನೆ ಮಾಡಬೇಕು ಎಂದು ರಾಯಚೂರು ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ್ ಹೇಳಿದರು.

ರಾಯಚೂರಿನಲ್ಲಿ ಜಿಲ್ಲಾ ಪಂಚಾಯತಿ ಆಯೋಜಿಸಿದ್ದ ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಆರೈಕೆದಾರರ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. “ಶಿಶು ಪಾಲನಾ ಕೇಂದ್ರದಲ್ಲಿ ಮಕ್ಕಳ ಆರೈಕೆದಾರರು ತಮ್ಮ ಮಕ್ಕಳಂತೆ ಇತರರ ಮಕ್ಕಳನ್ನು ಆರೈಕೆ ಮಾಡಬೇಕು. ಮನೆಯ ಮೊದಲು ಗುರು ತಾಯಿಯಾದರೆ, ಎರಡನೇ ಗುರು ಅಂಗನವಾಡಿ ಸಹಾಯಕರಾಗಿದ್ದರು. ಇದೀಗ ಎರಡನೇ ಗುರು ಶಿಶು ಪಾಲನಾ ಕೇಂದ್ರದ ಆರೈಕೆದಾರರಾಗಲಿದ್ದಾರೆ” ಎಂದರು.

“ಆರೈಕೆದಾರರು ತರಬೇತಿ ಪಡೆದು ಮಕ್ಕಳ ಲಾಲನೆ ಪಾಲನೆ ಮಾಡಬೇಕು. ಅರ್ಧದಲ್ಲೆ ಬಿಟ್ಟು ಹೋಗಬಾರದು. ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ತರಬೇತಿಯಲ್ಲಿ ನೀಡುವ ಮಾಹಿತಿಯನ್ನು ಪಡೆದುಕೊಂಡು ಮಕ್ಕಳ ಪಾಲನೆಗೆ ಮುಂದಾಗಬೇಕು. ಮಕ್ಕಳಿಗೆ ಹಾಡು, ಆಟ, ಕತೆಗಳನ್ನು ಹೇಳುತ್ತಾ ಪಾಲನೆ ಮಾಡಬೇಕು. ಮಕ್ಕಳನ್ನು ನೋಡಿಕೊಳ್ಳುವುದು ಪುಣ್ಯದ ಕೆಲಸವಾಗಿದೆ. ಇದಕ್ಕೆ ಸರ್ಕಾರದಿಂದ ವೇತನ ನೀಡಲಾಗುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನರೇಗಾದಲ್ಲಿ ಕೆಲಸ ಮಾಡುವ ಕೂಲಿಕಾರರ ಮಕ್ಕಳು ಮತ್ತು ಗ್ರಾಮಗಳಲ್ಲಿ ಕೆಲಸಕ್ಕೆ ಹೋಗುವ ಮಹಿಳೆಯರ ಮಕ್ಕಳನ್ನು ಪಾಲನೆ ಮಾಡಬೇಕಾಗಿದೆ. ಉತ್ತಮ ಕೆಲಸ ಮಾಡಿದಲ್ಲಿ ಪ್ರೋತ್ಸಾಹ ಧನ ನೀಡಲಾಗುತ್ತದೆ” ಎಂದು ತಿಳಿಸಿದರು.

“ರಾಯಚೂರು, ಮಾನವಿ, ಸಿರವಾರ, ಮತ್ತು ದೇವದುರ್ಗ ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಶಿಶು ಪಾಲನಾ ಕೇಂದ್ರಗಳ ಆರೈಕೆದಾರರಿಗೆ ತರಬೇತಿ ನೀಡಲಾಗುತ್ತಿದೆ. ಆಗಸ್ಟ್‌ 15ರಂದು ಶಿಶು ಪಾಲನಾ ಕೇಂದ್ರವನ್ನು ಆರಂಭಿಸಲಾಗುತ್ತದೆ. ಶಿಶು ಪಾಲನಾ ಕೇಂದ್ರದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಲಾಗುತ್ತದೆ. ಶೌಚಾಲಯ, ಕುಡಿಯುವ ನೀರು, ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಿಕೊಡಲಾಗುವುದು” ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಮುಖ್ಯ ಲೆಕ್ಕಾಧಿಕಾರಿ ನಾಗರಾಜ, ತಾಪಂ ಎಡಿ ವೆಂಕಟೇಶ ದೇಸಾಯಿ, ಇಒ ಚಂದ್ರಶೇಖರ ಸೇರಿದಂತೆ ಸಿಬ್ಬಂದಿಗಳು ಆರೈಕೆದಾರರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...