ರಾಯಚೂರು | ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ವೃತ್ತಿ ಶಿಕ್ಷಣ ಮೇಳ; ಸಿದ್ದಪ್ಪ ಪೂಜಾರಿ ಕರೆ

Date:

ವಿದ್ಯಾರ್ಥಿಗಳಿಗೆ ಶಿಕ್ಷಣದ ನಂತರದ ಸರಿಯಾದ ಮಾರ್ಗವನ್ನು ಆರಿಸಿಕೊಳ್ಳಲು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಉದ್ಯೋಗ ಹುಡುಕಲು ಸಹಾಯ ಮಾಡಲು ವೃತ್ತಿ ಶಿಕ್ಷಣ ಮತ್ತು ಪ್ರದರ್ಶನ ಮೇಳ ಆಯೋಜನೆ ಮಾಡಿದ್ದು, ಭವಿಷ್ಯ ರೂಪಿಸಿಕೊಳ್ಳಲು ಮಾಹಿತಿ ನೀಡಲಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಹಾಲ್ ಸಿದ್ದಪ್ಪ ಪೂಜಾರಿ ಹೇಳಿದರು.

ಅವರಿಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಸಮಗ್ರ ಶಿಕ್ಷಣ-ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕ, ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು 10ನೇ ಮತ್ತು ಪಿಯುಸಿ ನಂತರ ಮುಂದೇನು ಹಾಗೂ ವೃತ್ತಿಪರ ಕೋರ್ಸಗಳ ಆಯ್ಕೆಯಲ್ಲಿ ಗೊಂದಲ ಉಂಟಾಗುತ್ತದೆ, ಈ ಗೊಂದಲಗಳಿಗೆ ತೆರೆ ಎಳೆಯಲು ಸರ್ಕಾರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಸೇಲ್ ಆರಂಭಿಸಿ ಮಾಹಿತಿ ನೀಡಲಿದೆ, ಈ ಮಾಹಿತಿಯನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳು ಹೆಚ್ಚಿನದಾಗಿ ಮೊಬೈಲ್ ಗೀಳಿಗರ ಹೋಗುತ್ತಿದ್ದು, ಸಕಾರಾತ್ಮಕ ಮಾಹಿತಿಯನ್ನು ಪಡೆಯಬೇಕು, ಫೆಸ್‌ಬುಕ್, ಇಸ್ಟ್ರಾಗ್ರಾಂಗಳಲ್ಲಿ ಶಿಕ್ಷಣ ಮತ್ತು ವೃತ್ತಿಪರ ಮಾಹಿತಿ ಇರುವುದಿಲ್ಲ, ಅದನ್ನು ನಿಷೇಧಿಸಿ ಯೂಟ್ಯೂಬ್‌ಗಳಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿ ದೊರೆಯುತ್ತದೆ ಎಂದು ತಿಳಿಸಿದರು.

ಕೃಷಿ, ಇಂಜಿನಿಯರಿಂಗ್ ಆರೋಗ್ಯ ಮತ್ತು ಇ-ಕಾಮರ್ಸ್ಗಳ ಬಗ್ಗೆ ಹೆಚ್ಚಿನದಾಗಿ ತಿಳಿದುಕೊಳ್ಳಿ, ಜೊತೆಗೆ ಮೇಳದಲ್ಲಿ ೨೬ ಮಳಿಗೆಗಳನ್ನು ಹಾಕಲಾಗಿದ್ದು ಎಲ್ಲಾ ಇಲಾಖೆಗಳು ಭಾಗವಹಿಸಿವೆ, ವಿದ್ಯಾರ್ಥಿಗಳು ಮಾಹಿತಿ ಪಡೆದುಕೊಳ್ಳಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಡಿ.ಬಡಿಗೇರ್, ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಕೌಶಲ್ಯಗಳನ್ನಾಧರಿಸಿ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡಲಿದ್ದು, ಪೋಷಕರು, ಮತ್ತು ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಕೌಶಲ್ಯವನ್ನು ಗಮನಿಸಿ ಪ್ರೋತ್ಸಾಹ ನೀಡುವ ಕೆಲಸ ಮಾಡಬೇಕು ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿ ಮಾತನಾಡಿ, ಗ್ರಾಮೀಣ ಭಾಗದಲ್ಲಿರುವ ವಿದ್ಯಾರ್ಥಿಗಳಿಗೆ ಮಾಹಿತಿ ಕೊರತೆ ಇದೆ, 10 ತರಗತಿ ಮತ್ತು ಪಿಯುಸಿ ನಂತರ ಮುಂದಿನ ಕೋರ್ಸ್ ಆಯ್ಕೆ ಮಾಡಿಕೊಳ್ಳಲು ಮಾಹಿತಿ ಇರುವುದಿಲ್ಲ, ಗೊಂದಲಗಳು ಉಂಟಾಗುತ್ತವೆ, ವಿದ್ಯಾರ್ಥಿಗಳು ಇಂತಹ ಮೇಳದಿಂದ ಮಾಹಿತಿ ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನ ಪಡೆಯಬೇಕು, ತಂತ್ರಜ್ಞಾನದ ಮಾಹಿತಿಯ ಉಪಯುಕ್ತವಾಗಿದ್ದು, ಮುಂದಿನ ಭವಿಷ್ಯಕ್ಕೆ ಅನುಕೂಲವಾಗಲಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಈ ಸಂದರ್ಭದಲ್ಲಿ ಡಯಟ್ ಪ್ರಾಚಾರ್ಯ ಚಂದ್ರಶೇಖರ ಭಂಡಾರಿ, ಡಯಟ್ ಉಪನ್ಯಾಸಕ ಮಲ್ಲಿಕಾರ್ಜುನ, ಶರಣಪ್ಪ ವಟಗಲ್, ನೋಡಲ್ ಅಧಿಕಾರಿ ಸುಖದೇವ್, ಶಿವಮಣಿ ಸೇರಿದಂತೆ ಅನೇಕರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...