ಗೃಹಣಿಯೊಬ್ಬರು ಮನೆಯ ಮೇಲಿಂದ ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ರಾಯಚೂರಿನ ಜವಾಹರ ನಗರದಲ್ಲಿ ನಡೆದಿದೆ.
ಮೃತ ಗೃಹಿಣಿ ಶಿಲ್ಪಾ(28) ಎಂದು ತಿಳಿದುಬಂದಿದೆ. ಶಿಲ್ಪಾ ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದು, ಮಹಿಳೆಯನ್ನು ಕೊಲೆ ಮಾಡಿರುವುದಾಗಿ ಆಕೆಯ ಪೋಷಕರು ಆರೋಪಿಸಿದ್ದಾರೆ.
“ಮೃತಳ ಪತಿ ಶರತ್, ತಾಯಿ ಶಶಿಕಲಾ ಹಾಗೂ ತಂದೆ ಸುರೇಶ್ ಸೇರಿ ಹತ್ಯೆ ಮಾಡಿದ್ದಾರೆ. ನಿನ್ನೆ ರಾತ್ರಿ ಪತಿ ಹಾಗೂ ಪೋಷಕರು ಶಿಲ್ಪಾಳನ್ನು ಕೊಂದು, ಬಳಿಕ ಎರಡನೇ ಮಹಡಿಯಿಂದ ತಳ್ಳಿದ್ದಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಜಿಲ್ಲೆಯ ವಿವಿಧ ಗ್ರಾ.ಪಂ.ಗಳ ‘ಪಿಡಿಒ’ಗಳ ವರ್ಗಾವಣೆ
ಆಂಧ್ರ ಮೂಲದ ಶಿಲ್ಪಾ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಪರಾರಿಯಾಗಿರುವ ಪತಿ ಶರತ್ ಸ್ಥಳಕ್ಕೆ ಬರುವವರೆಗೂ ಮೃತದೇಹ ತೆಗೆದುಕೊಂಡು ಹೋಗಲು ಬಿಡುವುದಿಲ್ಲವೆಂದು ಮೃತಳ ಪೋಷಕರು ಪಟ್ಟು ಹಿಡಿದಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನೇತಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಟಿಜನ್ ಜರ್ನಲಿಸ್ಟ್ : ಹಫೀಜುಲ್ಲ ರಾಯಚೂರು




