ರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ರೈತ ಸಂಘ ಆಗ್ರಹ

Date:

ಹತ್ತಿ ಖರೀದಿ ಪ್ರಾಂಗಣದಲ್ಲಿ ವೇಬ್ರಿಜ್ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದ ಎಪಿಎಂಸಿ ಎದುರುಗಡೆ ಪ್ರತಿಭಟನೆ ನಡೆಸಿದರು. ಹಕ್ಕೊತ್ತಾಯ ಪತ್ರವನ್ನು ಎಪಿಎಂಸಿ ಕಾರ್ಯದರ್ಶಿಗಳಿಗೆ ಸಲ್ಲಿಸಿದರು.

“ಕೃಷಿ ಮಾರುಕಟ್ಟೆಯಲ್ಲಿ ಹತ್ತಿ ಖರೀದಿಗೆ ಒಂದು ದರ ನಿಗದಿಪಡಿಸಿದರೆ ಮೀಲ್‌ ಮಾಲಿಕರು ನಿಗದಿ ದರಗಿಂತ ಕಡಿಮೆ ದರದಲ್ಲಿ ಖರೀದಿಸುತ್ತಾರೆ. ಇದಕ್ಕೆ ಒಪ್ಪದ ರೈತರಿಗೆ ಹಿಂತೆಗೆದುಕೊಂಡು ಹೋಗುವಂತೆ ತಾಕೀತು ಮಾಡುತ್ತಿದ್ದಾರೆ. ಕೂಡಲೇ ಈ ತಾರತಮ್ಯ ತಡೆಯಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು” ಎಂದು ಒತ್ತಾಯಿಸಿದರು.

“ಹತ್ತಿಗೆ ಮಾರುಕಟ್ಟೆಯಲ್ಲಿ ದರ ನಿಗದಿ ನಂತರ ಮಿಲ್ ನಲ್ಲಿ ಅನ್‌ಲೋಡ್ ಮಾಡುವ ಕೂಲಿ ವೆಚ್ಚ ಮತ್ತು ವೇಬ್ರಿಜ್‌ನ ವೆಚ್ಚವನ್ನು ರೈತರಿಗೆ ಹೊರೆಯಾಗುವುದು ನಿಲ್ಲಿಸಬೇಕು. ತೊಗರಿ, ಕಡಲೆ ಹಾಗೂ ಸೂರ್ಯಕಾಂತಿಗೆ  ಸ್ಯಾಂಪಲ್ ಹೆಸರಿನಲ್ಲಿ ವರ್ತಕರು ಪ್ರತಿ ಕ್ವಿಂಟಲ್‌ ಗೆ 1ರಿಂದ 1ಕೆಜಿ ಧಾನ್ಯ ಪಡೆಯುವುದು ರದ್ದುಪಡಿಸಬೇಕು. ತೊಗರಿ, ಕಡಲೆ, ಸೂರ್ಯಕಾಂತಿ ಬೆಳೆಗಳಿಗೆ 50 ಕೆಜಿ ಚೀಲಕ್ಕೆ 1ಕೆಜಿ ಸೂಟ್ ತೆಗೆಯಬೇಕು. ಈರುಳ್ಳಿ 50 ಕೆಜಿ ಚೀಲಕ್ಕೆ 1ಕೆಜಿ ಸೂಟ್ ತೆಗೆಯುವುದನ್ನು ನಿಲ್ಲಿಸಿ 200 ಗ್ರಾಂ. ಸೂಟ್ ತೆಗೆಯಬೇಕು. ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ರೈತರು ಮಾರಾಟಕ್ಕೆ ತಂದ ದವಸ ದಾನ್ಯಗಳು ಮಳೆಗೆ ಕೊಚ್ಚಿ ಹೋಗುತ್ತಿದ್ದು, ಟೀನ್‌ಶೆಡ್ ದುರಸ್ತಿಗೊಳಿಸಿ ರೈತರ ದವಸ ದಾನ್ಯಗಳ ಸಂರಕ್ಷಿಸಬೇಕೆಂದು” ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾರುಕಟ್ಟೆಯಲ್ಲಿ ದಳವಾಯಿಗಳಿಂದ ತೂಕ ಮಾಡಿಸಬೇಕು. ಅನ್ಯ ವ್ಯಕ್ತಿಗಳಿಂದ ತೂಕ ಮಾಡುವುದನ್ನು ನಿಲ್ಲಿಸಬೇಕು. ಕೃಷಿ ಉತ್ಪನ್ನಮಾರುಕಟ್ಟೆಯಲ್ಲಿ ರೈತರಿಗಾಗಿ ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಬೇಕು. ದನದ ಸಂತೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ : ಸಚಿವ ಪ್ರಿಯಾಂಕ್‌ ಖರ್ಗೆ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ, ಕಾರ್ಯಾಧ್ಯಕ್ಷ ಅಬ್ದುಲ್ ಮಜೀದ್ ಬಿಚ್ಚಾಲಿ, ಗೌರವಾಧ್ಯಕ್ಷ ನರಸಿಂಗರಾವ್ ಕುಲಕರ್ಣಿ, ಅಕ್ಕಮ್ಮ ಗಿಲ್ಲೇಸೂಗೂರು, ಹಂಪಣ್ಣ ಜಾನೇಕಲ್, ನರಸಪ್ಪ ಯಾದವ ಹೊಕ್ರಾಣ , ಕೆ.ವಿರೇಶಗೌಡ ಕಡಗಂದೊಡ್ಡಿ, ಹುಲಿಗೆಪ್ಪ ಜಾಲಿಬೆಂಚಿ, ರಮೇಶ ಗಾಣದಾಳ, ತಿಮ್ಮಪ್ಪ ಬಾಪೂರು, ಮಲ್ಲಿಕಾರ್ಜುನ ಮಮದಾಪುರು, ದೇವಪ್ಪ ಜೇಗರಕಲ್, ಈರಣ್ಣ, ಪ್ರಾಣೇಶ ನಾಯಕ, ಮಹೆಬೂಬು ಕಮಲಾಪೂರು ಸೇರಿದಂತೆ ಹಲವು ರೈತರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...