ಸಿಂಧನೂರು | ಅತಿಕ್ರಮಣ ಕಟ್ಟಡ ತೆರವುಗೊಳಿಸಲು ಆಗ್ರಹ

Date:

ಸಿಂಧನೂರು ನಗರದ ಚನ್ನಮ್ಮ ಸರ್ಕಲ್ (ಹಳೆ ಬಜಾರ್)ನಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ಎರಡೂ ಬದಿಯ ರಸ್ತೆ ಅತಿಕ್ರಮಿಸಿದ ಕಟ್ಟಡಗಳನ್ನು ತೆರವುಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ಕರ್ನಾಟಕ ರೈತ ಸಂಘ (ಎಐಯುಕೆಎಸ್) ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಈ ಸಂಬಂಧ ಮಂಗಳವಾರ ತಹಸೀಲ್ದಾರ್ ಅರುಣ್ ದೇಸಾಯಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿದರು.

ʼನಗರವು ದಿನಕ್ಕೆ ವೇಗವಾಗಿ ಬೆಳೆಯುತ್ತಿದ್ದು, ಇದರಿಂದಾಗಿ ನಗರದ ಪ್ರಮುಖ ರಸ್ತೆಗಳು ಜನಸಂದಣಿ ಜಾಸ್ತಿಯಾಗುತ್ತಿದ್ದು, ಹೆಚ್ಚು ಜನನಿಬಿಡ ಇರುವ ಪ್ರದೇಶಗಳಲ್ಲಿ ಹಳೆಬಜಾರ್ ಪ್ರದೇಶವೂ ಒಂದಾಗಿದೆ. ಈ ಪ್ರದೇಶದ ರಸ್ತೆಯಲ್ಲಿ ಜನಸಾಮಾನ್ಯರು ಸಂಚರಿಸುವುದಕ್ಕೆ ದಿನವೂ ಹರಸಾಹಸಪಡುತ್ತಿದ್ದಾರೆ. ರಸ್ತೆ ಅಗಲೀಕರಣ ಅತ್ಯಂತ ಅವಶ್ಯಕತೆ ಇರುತ್ತದೆʼ ಎಂದು ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗದೇ ರಸ್ತೆ ಅತಿಕ್ರಮಿಸಿದ ಮಾಲೀಕರ ಕಟ್ಟಡಗಳನ್ನು ತೆರವುಗೊಳಿಸಿ, ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು, ರಸ್ತೆ ಅತಿಕ್ರಮಿಸಿದ ಕಟ್ಟಡ ಮಾಲೀಕರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಹಳೆ ಬಜಾರ್ ರಸ್ತೆ ಚಿಕ್ಕದಾಗಿರುವುದರಿಂದ ಅಂಬ್ಯುಲೆನ್ಸ್ ಓಡಾಟ, ಸಾರ್ವಜನಿಕ ವಾಹನಗಳ ಸಂಚಾರ, ಜನಸಂಚಾರಕ್ಕೆ ತೀವ್ರ ಸಮಸ್ಯೆಯಾಗಿದ್ದು, ಕೂಡಲೇ ತೆರವು ಕಾರ್ಯಾಚರಣೆ ನಡೆಸಿ, ರಸ್ತೆ ಅಗಲೀಕರಣ ಮಾಡಬೇಕುʼ ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಚಿಟ್ಟಿಬಾಬು, ಟಿಯುಸಿಐ ಜಿಲ್ಲಾಧ್ಯಕ್ಷ ಬಿ.ಎನ್.ಯರದಿಹಾಳ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...