ಸಿಂಧನೂರು | ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡದೆ ಅಪಮಾನ : ಪ್ರಕರಣ ‌ದಾಖಲು

Date:

77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಲು ಸರ್ಕಾರದ ಆದೇಶವಿದ್ದರೂ ಅಂಬೇಡ್ಕರ್‌ ಅವರ ಭಾವಚಿತ್ರ ಇಡದೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಸಿಂಧನೂರ ನಗರದ ಶ್ರೀ ಜಗದ್ಗುರು ಪಂಚಾಚಾರ್ಯ ಪತ್ತಿನ ಸೌಹಾರ್ದ ಸಹಕಾರಿ‌ ನಿಯಮಿತ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಗುರುರಾಜ್ ಅವರು ನೀಡಿದ ದೂರು ಆದರಿಸಿ ಸಹಕಾರಿ ನಿಯಮಿತ ಮೂವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣರಾಜ್ಯೋತ್ಸವ ಆಚರಣೆಯಲ್ಲಿ ಕಡ್ಡಾಯವಾಗಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಇಡಬೇಕೆಂದು ಸರ್ಕಾರದ ನಿಯಮವಿದ್ದರೂ ಶ್ರೀ ಜಗದ್ಗುರು ಪಂಚಾಚಾರ್ಯ ಸಹಕಾರಿ ನಿಯಮಿತ ಪದಾಧಿಕಾರಿಗಳು ಮಹಾತ್ಮ ಗಾಂಧಿ ಹಾಗೂ ಸಹಕಾರಿ ಪಿತಾಮಹ ಸಿದ್ದನಗೌಡ ಪಾಟೀಲ್ ಅವರ ಭಾವಚಿತ್ರವನ್ನು ಇಟ್ಟು ಗಣರಾಜ್ಯೋತ್ಸವ ಆಚರಿಸಿದ್ದು, ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ರವಿ ಬೆಳಗೆರೆ ಪುಸ್ತಕದ ನಕಲಿ ಪ್ರತಿ: ಅಮೆಜಾನ್, ಮೀಶೋ, ಫ್ಲಿಫ್‌ಕಾರ್ಟ್‌ ವಿರುದ್ಧ ತಲಾ 1 ಕೋಟಿ ರೂ. ಕೃತಿಚೌರ್ಯ ದೂರು ದಾಖಲಿಸಲಿರುವ ಭಾವನಾ

ಈ ಸಂಬಂಧ ಆಡಳಿತ ಮಂಡಳಿ ಹಾಗೂ ಶಾಖೆಯ ವ್ಯವಸ್ಥಾಪಕ ಲಿಂಗನಗೌಡ, ಶಾಖೆಯ ಸಿಬ್ಬಂದಿ ಮೇಲೆ ದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...