ಸಿಂಧನೂರು | ಮುಕ್ಕುಂದ ಗ್ರಾಮದಲ್ಲಿ ಕುರಿ ಶೆಡ್‌ಗೆ ಬೆಂಕಿ; 700 ಕುರಿಗಳು ಸಜೀವ ದಹನ

Date:

ತಾಲ್ಲೂಕಿನ ಮುಕ್ಕುಂದ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕುರಿ ಶೆಡ್‌ ಸೇರಿ ಸುಮಾರು 700 ಕುರಿ ಹಾಗೂ ಟಗರು ಮರಿಗಳು ಸುಟ್ಟು ಕರಕಲಾಗಿರುವ ದುರ್ಘಟನೆ ನಡೆದಿದೆ.

ಗ್ರಾಮದ ಹೊರವಲಯದಲ್ಲಿರುವ ವೈ. ಹೇಮಲತಾ ಮಧುಸೂದನ್ ರಾವ್‌ ಅವರು ಕುರಿ ಶೆಡ್ ನಿರ್ಮಿಸಿ ಕುರಿ ಮತ್ತು ಟಗರು ಮರಿಗಳ ಸಾಕಾಣಿಕೆ ಮಾಡುತ್ತಿದ್ದರು. ಶುಕ್ರವಾರ ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕೆಲವೇ ಕ್ಷಣಗಳಲ್ಲಿ ಧಗಧಗನೆ ಉರಿಯತೊಡಗಿತು.

ಘಟನೆಯ ಮಾಹಿತಿ ತಿಳಿದ ಗ್ರಾಮಸ್ಥರು ತಕ್ಷಣ ಕಾರಟಗಿ ಅಗ್ನಿಶಾಮಕ ದಳದ ಕಚೇರಿಗೆ ಹಾಗೂ ಬಳಿಕ ಸಿಂಧನೂರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ತಲುಪುವಷ್ಟರಲ್ಲಿ ಬೆಂಕಿ ಭಾರೀ ಪ್ರಮಾಣದಲ್ಲಿ ಹಬ್ಬಿಕೊಂಡಿತ್ತು. ಪರಿಣಾಮವಾಗಿ ಶೆಡ್‌ನಲ್ಲಿದ್ದ ಸುಮಾರು 700 ಕುರಿ ಹಾಗೂ ಟಗರು ಮರಿಗಳು ಬೆಂಕಿಗೆ ಆಹುತಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್ | ರಾಯಚೂರು ಜಿಲ್ಲೆಗೆ ಸಿಕ್ಕಿದ್ದೇನು?

ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿಯನ್ನು ನಂದಿಸಿದರು. ಆದರೆ ಅಷ್ಟರೊಳಗೆ ಕುರಿ ಶೆಡ್ ಹಾಗೂ ಅದರಲ್ಲಿದ್ದ ಕುರಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದವು.ಈ ಸಂಬಂಧ ಸಿಂಧನೂರು ಅಗ್ನಿಶಾಮಕ ದಳದ ಕಚೇರಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಕಾರಣಗಳ ಬಗ್ಗೆ ತನಿಖೆ ಮುಂದುವರಿದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...