ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ (AI) ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಹಾಗೂ ರಾಯಚೂರಿನಲ್ಲಿ ಕೃತಕ ಬುದ್ಧಿಮತ್ತೆಯ ಶ್ರೇಷ್ಠತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಅಧಿವೇಶನದಲ್ಲಿ ಘೋಷಿಸಿದರು.
ರಾಜ್ಯದಲ್ಲಿ ಆಧುನಿಕ ತಂತ್ರಜ್ಞಾನ ಅಭಿವೃದ್ಧಿಗೆ ಉತ್ತೇಜನ ನೀಡುವ ಸಲುವಾಗಿ ಸರ್ಕಾರ ಹಲವು ಮಹತ್ವದ ಉಪಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಅದರ ಭಾಗವಾಗಿ ರಾಯಚೂರಿನ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT)ಯಲ್ಲಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆಯ ಶ್ರೇಷ್ಠತಾ ಕೇಂದ್ರವನ್ನು ಸ್ಥಾಪಿಸಲಾಗುತ್ತದೆ.
ಈ ಕೇಂದ್ರದ ಮೂಲಕ ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ತಂತ್ರಜ್ಞಾನ ತಜ್ಞರಿಗೆ ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಂಶೋಧನೆ, ತರಬೇತಿ ಮತ್ತು ಹೊಸ ತಂತ್ರಜ್ಞಾನ ಅಭಿವೃದ್ಧಿಗೆ ಅವಕಾಶ ಕಲ್ಪಿಸಲಾಗುತ್ತದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ವೇತನ ಕಡಿತ, ದೌರ್ಜನ್ಯದ ಆರೋಪ; ರಿಮ್ಸ್ ಹೊರಗುತ್ತಿಗೆ ನೌಕರರಿಂದ ಮಿಂಚಿನ ಪ್ರತಿಭಟನೆ
ರಾಜ್ಯವನ್ನು ಕೃತಕ ಬುದ್ಧಿಮತ್ತೆ ಹಾಗೂ ರೋಬೋಟಿಕ್ಸ್ ಕ್ಷೇತ್ರದಲ್ಲಿ ಪ್ರಮುಖ ತಂತ್ರಜ್ಞಾನ ಕೇಂದ್ರವನ್ನಾಗಿ ರೂಪಿಸುವ ದಿಕ್ಕಿನಲ್ಲಿ ಈ ಉಪಕ್ರಮಗಳು ಮಹತ್ವದ ಹೆಜ್ಜೆಯಾಗಿವೆ ಎಂದು ಸರ್ಕಾರ ತಿಳಿಸಿದೆ.





