ರಾಯಚೂರು | ಲಿಂಗಸುಗೂರಿನಲ್ಲಿ ಸಾರಿಗೆ ಬಸ್‌ಗಳ ಸಂಚಾರ; ಕರವೇ ಅಸಮಾಧಾನ

Date:

ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗಾಗಿ ವಾಹನಗಳಿಗೆ ಪರ್ಯಾಯ ಮಾರ್ಗ ಒದಗಿಸಲಾಗಿದೆ. ಆದರೂ, ಕೆಲವು ಸಾರಿಗೆ ಬಸ್‌ಗಳು ಪಟ್ಟಣದ ಕೆಲವು ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ-ಪ್ರವೀಣ್‌ಶೆಟ್ಟಿ ಬಣ) ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ಸಾರಿಗೆ ಘಟಕದ ಅಧಿಕಾರಿಗೆ ಕರವೇ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಲಿಂಗಸುಗೂರಿನಲ್ಲಿ ಕಲಬುರಗಿ–ಬೆಂಗಳೂರು ಬೈಪಾಸ್‍ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ, ವಾಹನ ಸಂಚಾರಕ್ಕೆ ಬಸವಸಾಗರ ವೃತ್ತದಿಂದ ವಿಸಿಬಿ ಕಾಲೇಜು ಮತ್ತು ರಾಯಚೂರು ರಸ್ತೆ ಮಾರ್ಗದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಆದರೂ, ಕೆಲವು ಸಾರಿಗೆ ಬಸ್‌ಗಳ ಚಾಲಕರು ಆ ರಸ್ತೆಗಳನ್ನು ಬಳಸದೆ, ಪಟ್ಟಣದ ಗಡಿಯಾರ ವೃತ್ತದ ಮಾರ್ಗವಾಗಿ ಸಂಚರಿಸುತ್ತಿದ್ದಾರೆ. ಇದರಿಂದಾಗಿ ಅನಗತ್ಯ ವಾಹನ ದಟ್ಟಣೆ ಉಂಟಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಗಡಿಯಾರ ವೃತ್ತದ ರಸ್ತೆ ಕಿರಿದಾಗಿದ್ದು, ಹೆಚ್ಚು ವಾಹನಗಳು ಸರಾಗವಾಗಿ ಸಂಚರಿಸಲು ಸಾಧ್ಯವಿಲ್ಲ. ಆದರೂ, ಸಾರಿಗೆ ಬಸ್‌ಗಳು ಅನಗತ್ಯವಾಗಿ ಆ ರಸ್ತೆಯನ್ನು ಬಳಸುತ್ತಿದ್ದಾರೆ. ಹೀಗಾಗಿ, ಅಗತ್ಯವಾಗಿ ಆ ರಸ್ತೆ ಬಳಸುವ ವಾಹನ ಸವಾರರಿಗೆ, ವಿದ್ಯಾರ್ಥಿಗಳಿಗೆ, ವೃದ್ಧರಿಗೆ ಸಮಸ್ಯೆಯಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾರಿಗೆ ಬಸ್‌ಗಳಿಗೆ ಸೂಚಿಸಲಾಗಿರುವ ರಸ್ತೆಯನ್ನೇ ಬಳಸುವಂತೆ ನಿರ್ದೇಶಿಸೇಕು. ಗುಡಿಯಾದ ವೃತ್ತದ ರಸ್ತೆಯನ್ನು ಬಳಸದಂತೆ ತಡೆಯಬೇಕು. ಒಂದು ವೇಳೆ, ಮತ್ತೆ ಅದೇ ರಸ್ತೆಯಲ್ಲಿ ಸಂಚರಿಸಿ ಅಪಘಾತ ಅಥವಾ ಇನ್ನಿತರೆ ಸಮಸ್ಯೆಗಳು ಸಂಭವಿಸಿದಲ್ಲಿ, ಅದಕ್ಕೆ ಸಾರಿಗೆ ಇಲಾಖೆಯೇ ಹೊಣೆಯಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಹಕ್ಕೊತ್ತಾಯ ಪತ್ರ ಸಲ್ಲಿಸುವ ವೇಳೆ, ಆಂಜನೇಯ ಭಂಡಾರಿ, ಸಲಿಂಖಾನ್‍, ಸಿದ್ಧು ಚಲುವಾದಿ, ಕುರುಮೇಶ ನಾಯಕ, ಭೀಮೇಶ ನಾಯಕ, ಮುತ್ತಣ್ಣ, ವೆಂಕಟೇಶ ಉಪ್ಪಾರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...