ಉಡುಪಿ | ಜಿಲ್ಲಾಧಿಕಾರಿಗಳಿಂದ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ “ರೈಲ್ವೇ ಚೈಲ್ಡ್ ಹೆಲ್ಸ್ ಡೆಸ್ಕ್” ಉದ್ಘಾಟನೆ

Date:

ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನವಾದ ಇಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇವರ ಅಧೀನದಲ್ಲಿ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪ್ರಾರಂಭಿಸಲಾದ ರೈಲ್ವೇ ಚೈಲ್ಡ್ ಹೆಲ್ಸ್ ಡೆಸ್ಕನ್ನು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ, ಕೆಲವು ನಿರಾಶ್ರಿತ ಮಕ್ಕಳು ಆಶ್ರಯ ಹಾಗೂ ಜೀವನೋಪಾಯಕ್ಕಾಗಿ ವಿವಿಧ ಭಾಗಗಳಿಗೆ ಪ್ರಯಾಣಿಸಲು ರೈಲ್ವೆ ನಿಲ್ದಾಣವನ್ನು ಹಾಗೂ ರೈಲುಗಳನ್ನು ಬಳಸುತ್ತಾರೆ. ಪ್ಲಾಟ್‌ಫಾರ್ಮ್ಗೆ ಬಂದ ಅವರು ನಿಂದನೆ, ಹಿಂಸೆ, ನಿರ್ಲಕ್ಷ್ಯ ಹಾಗೂ ಶೋಷಣೆಗೆ ಒಳಗಾಗುತ್ತಾರೆ. ಹೆಚ್ಚಿನ ಬೆಂಬಲವಿಲ್ಲದ ಅವರು, ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಾರೆ ಹಾಗೂ ತಮ್ಮ ಬಾಲ್ಯದಿಂದ ವಂಚಿತರಾಗುತ್ತಾರೆ. ಇಂತಹ ಮಕ್ಕಳನ್ನು ರಕ್ಷಿಸಿ, ಅವರುಗಳಿಗೆ ಪುನರ್ವಸತಿ ಕಲ್ಪಿಸಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲ ಮಾಡಿಕೊಡುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಕುಟುಂಬದಿಂದ ಬೇರ್ಪಟ್ಟು ಅಥವಾ ಮನೆಗಳಿಂದ ಓಡಿ ಹೋದ ಮಕ್ಕಳನ್ನು ರಕ್ಷಿಸಲು ಹಾಗೂ ಸಹಾಯಮಾಡಲು ಮಕ್ಕಳ ಸಹಾಯಕ್ಕಾಗಿ ದಿನದ 24 ಗಂಟೆಗಳ ಕಾಲವೂ ಮಕ್ಕಳ ಸಹಾಯವಾಣಿ 1098 / 112 ಕಾರ್ಯನಿರ್ವಹಿಸಲಿದ್ದು, ಭಿಕ್ಷಾಟನೆ ಮಾಡುತ್ತಿರುವ, ಮಾದಕವ್ಯಸನಿ, ಹಿಂಸೆ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ, ಶಿಕ್ಷಣ ವಂಚಿತ ಸೇರಿದಂತೆ ಮತ್ತಿತರ ಸಂಕಷ್ಟದಲ್ಲಿರುವ ಯಾವುದೇ ಮಗುವನ್ನು ತುರ್ತು ಪರಿಸ್ಥಿತಿಗಳಲ್ಲಿ ಕಂಡಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗೆ ಉಚಿತ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಜೂಹಿ ದಾಮೋದರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ, ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಪ್ರಭು ಡಿ.ಟಿ, ರೈಲ್ವೆ ಇಲಾಖೆಯ ಅಸಿಸ್ಟೆಂಟ್ ಟ್ರಾಫಿಕ್ ಮ್ಯಾನೇಜರ್ ಗೋವರ್ಧನ್ ಮೀನಾ, ಆರ್.ಪಿ.ಎಫ್‌ನ ಇನ್ಸ್ಪೆಕ್ಟರ್ ಮಧುಸೂಧನ್, ಆರ್.ಪಿ.ಎಫ್ ನ ಸಿಬ್ಬಂದಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...