ಶಿವಮೊಗ್ಗದಲ್ಲಿ ಮಳೆ ಅವಾಂತರ: ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

Date:

ಕಳೆದ ವಾರ ಸುರಿದ ಮಳೆಯಿಂದಾಗಿ ಶಿವಮೊಗ್ಗದ ನಾನಾ ಬಡಾವಣೆಗಳು ಜಲಾವೃತಗೊಂಡಿವೆ. ಈ ಸಮಸ್ಯೆ ಹಲವು ವರ್ಷಗಳಿಂದ ಪುನರಾವರ್ತನೆಯಾಗುತ್ತಿದೆ. ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ಮಾಡಿದರೂ, ಅಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ. ಅವರೂ ಸೇರಿದಂತೆ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಆಗ್ರಹಿಸಿದೆ.

ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಎಸ್‌ಡಿಪಿಐ ಶಿವಮೊಗ್ಗ ಜಿಲ್ಲಾಧ್ಯಕ್ಷ ಇಮ್ರಾನ್, “ಪಾಲಿಕೆ‌ಯ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳ ಬೇಜವ್ಧಾರಿತನಿಂದ 1 ಅಡಿ ಉದ್ದದ ಅವೈಜ್ಞಾನಿಕ ಒಳಚರಂಡಿಯು ನೀರಿನ ವಾಟವಿಲ್ಲದೆ ನೀರು ಸರಾಗವಾಗಿ ಹರಿಯದೆ ಸಮಸ್ಯೆ ತಂದೊಡ್ಡಿದೆ” ಎಂದು ಹೇಳಿದ್ದಾರೆ.

“ರಾಜಕಾಲುವೆಗಳು ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಸ್ವಚ್ಚತೆಯೂ ಇಲ್ಲದೆ ಮಣ್ಣು ಮತ್ತು ಕಸದಿಂದ ಮುಚ್ಚಿ ಹೋಗಿವೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಿವಮೊಗ್ಗದ ನಾಗರಿಕರು ಕೋಟ್ಯಂತರ ಮೌಲ್ಯದ ಆಸ್ತಿ ಕಳೆದುಕೊಂಡು ನಷ್ಟ ಅನುಭವಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...