ಬೀದರ್‌ |ಮಳೆ ಹಾನಿ : ವಿವಿಧ ಗ್ರಾಮಗಳಿಗೆ ಸಚಿವ ಈಶ್ವರ ಖಂಡ್ರೆ ಭೇಟಿ

Date:

ಕಳೆದ ವಾರವಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೀಡಾದ ವಿವಿಧ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಬೀದರ ದಕ್ಷಿಣ ಕ್ಷೇತ್ರದ ಖಾಶೆಂಪುರ್, ಕಾಡವಾದ, ಚಟ್ನಳ್ಳಿ ಗ್ರಾಮಗಳಿಗೆ ಜಿಲ್ಲೆಯ ಉನ್ನತ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮನೆಯ ಗೋಡೆಗಳು ಹಾಗೂ ಮೇಲ್ಛಾವಣಿಗಳು ಕುಸಿದು ಬಿದ್ದಿರುವ ಬಗ್ಗೆ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವರು, ʼಮಳೆಯಿಂದಾಗಿ ಭಾಗಶಃ ಕುಸಿದಿರುವ ಮನೆಗೆ ತುರ್ತು 6,500 ರೂ. ಆದೇಶ ಜೊತೆಗೆ 50 ಸಾವಿರ ಪರಿಹಾರ ಹಾಗೂ ಪೂರ್ತಿ ಮನೆ ಬಿದ್ದಿರುವ ಸಂತ್ರಸ್ಥರಿಗೆ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್ ಅಡಿ 1.20 ಲಕ್ಷ ರೂ. ಪರಿಹಾರ ಧನ ಮತ್ತು ಸರ್ಕಾರದ ವತಿಯಿಂದ ಒಂದು ಮನೆ ಕೊಡಲಾಗುವುದುʼ ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳೆ ಅವಾಂತರದಿಂದ ಜಿಲ್ಲೆಯ ಜನರಿಗೆ ಸಂಕಷ್ಟ ಆಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದರು.

ಕ್ರೀಡಾ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ :

ಕ್ರೀಡಾಪಟುಗಳ ಕ್ರೀಡಾ ಚಟುವಟಿಕೆಗೆ ಉಪಯೋಗ ಆಗಲೆಂದು ಬೀದರ ನಗರದ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಸುಮಾರು 3.25 ಕೋಟಿ ರೂ. ವೆಚ್ಚದ ಕ್ರೀಡಾ ವಸತಿ ನಿಲಯದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.

WhatsApp Image 2024 07 29 at 3.14.52 PM

ಈ ವೇಳೆ ಮಾತನಾಡಿದ ಸಚಿವರು, ʼಅಥ್ಲೆಟಿಕ್ಸ್ ಹಾಗೂ ಕ್ರೀಡಾ ತರಬೇತಿಗೆ ಬರುವ ಕ್ರೀಡಾಪಟುಗಳಿಗೆ ಜಿಲ್ಲೆಯ ಕ್ರೀಡಾಂಗಣದಲ್ಲಿ ಒಳ್ಳೆಯ ವಸತಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಿಗೆ ಮನವಿ ಮಾಡಿ ಸುಮಾರು 3 ಕೋಟಿ 25 ಲಕ್ಷ ರೂ ಅನುದಾನ ಬಿಡುಗಡೆ ಮಾಡಿಸಿದ್ದು, ಕಾಲಮಿತಿಯಲ್ಲಿ ಉತ್ತಮ ಗುಣಮಟ್ಟದ ವಸತಿ ನಿಲಯ ಕಟ್ಟಡ ನಿರ್ಮಾಣ ಮಾಡಬೇಕುʼ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ಬರ, ಈಗ ನೆರೆ- ಸಂತ್ರಸ್ತರತ್ತ ಧಾವಿಸಲಿ ಸರ್ಕಾರ

ಈ ಸಂದರ್ಭದಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್‌, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಸಿಇಒ ಗಿರೀಶ ಬದೋಲೆ, ಗ್ಯಾರಂಟಿ ಅನುಷ್ಠಾನ ಜಿಲ್ಲಾಧ್ಯಕ್ಷ ಅಮೃತರಾವ್‌ ಚಿಮಕೋಡೆ, ನಗರಸಭೆ ಅಧ್ಯಕ್ಷ ಮಹಮ್ಮದ್‌ ಗೌಸ್‌ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...