ಯಾದಗಿರಿ | ಸತತ ಮಳೆಯಿಂದಾಗಿ ರೈತರ ಬೆಳೆ, ಮನೆಗಳಿಗೆ ಹಾನಿ: ಸೂಕ್ತ ಪರಿಹಾರ ನೀಡಲು ಒತ್ತಾಯ

Date:

ಯಾದಗಿರಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳು ಸೃಷ್ಟಿಯಾಗಿದೆ. ಸತತ ಮಳೆಯಿಂದಾಗಿ ಬೆಳೆ ಹಾಗೂ ಮನೆಗಳಿಗೆ ಹಾನಿಯುಂಟಾಗಿದೆ.

ಯಾದಗಿರಿ ತಾಲೂಕಿನ ಪಗಲಾಪುರ ಗ್ರಾಮದ ಕಿರು ಸೇತುವೆ ಸಂಪೂರ್ಣ ‌ಮುಳುಗಡೆಯಾಗಿದೆ. ಯಾದಗಿರಿಯಿಂದ ರಾಯಚೂರಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ಈಗ ಮುಳುಗಡೆಯಾಗಿರುವುದರಿಂದ ಸಾರ್ವಜನಿಕರಿಗೆ ಸಂಕಷ್ಟ ಎದುರಾಗಿದೆ.

ಅಷ್ಟೇ ಅಲ್ಲದೆ, ನಗರದ ಪ್ರಮುಖ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಕೊಯಿಲೂರ ಸೇತುವೆಯೂ ಮುಳುಗಡೆ ಆಗಿದೆ. ಸೇತುವೆ ನೀರು ಜಮೀನಿಗೆ ‌ನುಗ್ಗಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದ ಬೆಳೆ ನೀರು ಪಾಲಾಗಿದ್ದು, ರೈತರ ಬದುಕು ಕಂಗಾಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೋರಣಹಳ್ಳಿ, ಪಗಲಾಪುರ, ಸೇರಿ ಹಲವು ಗ್ರಾಮಕ್ಕೆ ‌ಮಳೆ ನೀರು ನುಗ್ಗಿವೆ. ಮಳೆ ನೀರು ನುಗ್ಗಿದ ಪರಿಣಾಮ ರಸ್ತೆ ಸಂಪರ್ಕ ಸ್ಥಗ್ಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ವಾಹನ ಸವಾರರು ದಿಕ್ಕು ತೋಚದೆ ಸೇತುವೆ ಬದಿಯಲ್ಲಿ ನಿಂತು, ನೀರಿನ ಪ್ರಮಾಣ ಕಡಿಮೆಯಾದರೆ ಸಾಕು ಎಂದು ಗಂಟೆಗಟ್ಟಲೆ ಕಾದು ನಿಂತಿರುವ ದೃಶ್ಯ ಕಂಡು ಬಂತು.

ಜಿಲ್ಲಾಡಳಿತವು ಕೂಡಲೇ ರೈತರ ಬೆಳೆ ಹಾನಿಗೆ ಪರಿಹಾರ ಹಾಗೂ ಸಂತ್ರಸ್ತರಾದ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮನೆ ಮೇಲೆ ಗುಡ್ಡ ಕುಸಿದು ಅಪಾರ ಹಾನಿ: ಮನೆಮಂದಿ ಪ್ರಾಣಾಪಾಯದಿಂದ ಪಾರು

ಪಗಲಾಪುರ ಸೇತುವೆ ಕುಸಿದು ವಾರಗಳೇ ಕಳೆದಿವೆ. ಆದ್ರೂ ಅಧಿಕಾರಿಗಳು ದುರಸ್ತಿ ಮಾಡುವ ಕೆಲಸಕ್ಕೆ ‌ಮುಂದಾಗಿಲ್ಲ. ಅಧಿಕಾರಿಗಳು ಎಚ್ಚೆತ್ತು ಸೇತುವೆ ಮೇಲ್ದರ್ಜೆಗೆ ಏರಿಸಬೇಕು. ಇಲ್ಲದಿದ್ದರೆ ಯಾದಗಿರಿ ನಗರದ ಪ್ರಮುಖ ವೃತ್ತದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...