ಉಡುಪಿ‌ | ಹವಾಮಾನ ಇಲಾಖೆಯಿಂದ ಕರಾವಳಿಯಲ್ಲಿ ಭಾರಿ ಗಾಳಿ-ಮಳೆ ಮುನ್ಸೂಚನೆ

Date:

ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ( ಮೇ 20 ರಿಂದ 23 ವರೆಗೆ) ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿದ್ದು, ಈ ಹಿನ್ನೆಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ.

ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರಬೇಕು. ಸಾರ್ವಜನಿಕರು, ಮಕ್ಕಳು, ಕಾರ್ಮಿಕರು ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯಬೇಕು ಮತ್ತು ಪ್ರವಾಸಿಗರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.

ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ ಮತ್ತು ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ ಅಥವಾ ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ ಮತ್ತು ಮರಗಳ ಕೆಳಗೆ ನಿಲ್ಲಬಾರದು. ಈ ಮೇಲ್ಕಂಡ ಎಲ್ಲಾ ಅಂಶಗಳನ್ನು ಗುಡುಗು, ಸಿಡಿಲು ಹಾಗೂ ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರ್ವಜನಿಕರು ಅಗತ್ಯವಿದ್ದಲ್ಲಿ ಮುಂಜಾಗೃತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು. ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಶುಲ್ಕ ರಹಿತ 1077, ದೂರವಾಣಿ ಸಂಖ್ಯೆ: 0820-2574802 ಅಥವಾ ಆಯಾ ತಾಲೂಕಾ ತಹಶೀಲ್ದಾರರ ಕಛೇರಿಗೆ ಕರೆ ಮಾಡಬಹುದಾಗಿದೆ.

ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...